ಮಂಡ್ಯ: ಕೋವಿಡ್ ಸೋಂಕಿಗೆ ಇಬ್ಬರು ಬಲಿ; 246 ಹೊಸ ಪ್ರಕರಣ; 282 ಚೇತರಿಕೆ
Team Udayavani, Oct 2, 2020, 7:45 PM IST
ಸಾಂದರ್ಭಿಕ ಚಿತ್ರ
ಮಂಡ್ಯ: ಶುಕ್ರವಾರವೂ ಸೋಂಕಿಗೆ ಇಬ್ಬರು ಬಲಿಯಾಗಿದ್ದು, 246 ಮಂದಿಗೆ ಸೋಂಕು ದೃಢಪಟ್ಟಿದೆ. 282 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಮಂಡ್ಯ ತಾಲೂಕಿನ 65 ವರ್ಷದ ವೃದ್ಧ ಹಾಗೂ ನಾಗಮಂಗಲ ತಾಲೂಕಿನ 24 ವರ್ಷದ ಯುವಕನಿಗೆ ಸೋಂಕಿನ ಜತೆಗೆ ಇತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ ೧೦೯ಕ್ಕೆ ಏರಿಕೆಯಾಗಿದೆ.
246 ಹೊಸ ಪ್ರಕರಣ:
ಜಿಲ್ಲೆಯಲ್ಲಿ ಶುಕ್ರವಾರ 246 ಜನರು ಸೋಂಕಿಗೆ ಒಳಗಾಗಿದ್ದಾರೆ. ಮಂಡ್ಯ ತಾಲೂಕಿನಲ್ಲಿ 67, ಮದ್ದೂರಿನಲ್ಲಿ 21, ಮಳವಳ್ಳಿಯಲ್ಲಿ 15, ಪಾಂಡವಪುರದಲ್ಲಿ 36, ಶ್ರೀರಂಗಪಟ್ಟಣದಲ್ಲಿ 18, ಕೆ.ಆರ್.ಪೇಟೆಯಲ್ಲಿ 58 ಮತ್ತು ನಾಗಮಂಗಲ ತಾಲೂಕಿನಲ್ಲಿ 31 ಮಂದಿಗೆ ಕೊರೊನಾ ವಕ್ಕರಿಸಿದೆ. ಇದರಿಂದ ಜಿಲ್ಲೆಯಲ್ಲಿ 11556 ಸೋಂಕಿತ ಪ್ರಕರಣಗಳು ದಾಖಲಾಗಿವೆ.
282 ಚೇತರಿಕೆ:
ಜಿಲ್ಲೆಯಾದ್ಯಂತ 282 ಸೋಂಕಿತರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮಂಡ್ಯ 50, ಮದ್ದೂರು 22, ಮಳವಳ್ಳಿ 12, ಶ್ರೀರಂಗಪಟ್ಟಣ 93, ಕೆ.ಆರ್.ಪೇಟೆ ೫೧ ಹಾಗೂ ನಾಗಮಂಗಲದ 54 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೂ 9512 ಜನರು ಚೇತರಿಸಿಕೊಂಡಿದ್ದಾರೆ.
1930 ಸಕ್ರಿಯ:
ಪ್ರಸ್ತುತ 1930 ಸಕ್ರಿಯ ಪ್ರಕರಣಗಳಿವೆ. 566 ಮಂದಿ ಸರ್ಕಾರಿ ಆಸ್ಪತ್ರೆಯಲ್ಲಿ, 128 ಖಾಸಗಿ ಆಸ್ಪತ್ರೆಯಲ್ಲಿ, 190 ಕೋವಿಡ್ ಕೇರ್ ಸೆಂಟರ್‌ನಲ್ಲಿ ಹಾಗೂ 1046 ಮಂದಿ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ 1515 ಜನರ ಗಂಟಲಿನ ದ್ರವ ಸಂಗ್ರಹಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಟಿ.ಎನ್.ಧನಂಜಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.