ಕಗ್ಗಂಟಾಗುತ್ತಿರುವ ಮಂಡ್ಯ ವಿವಿ ಬಿಕ್ಕಟ್ಟು


Team Udayavani, Jan 31, 2020, 3:26 PM IST

mandya-tdy-2

ಮಂಡ್ಯ: ಮಂಡ್ಯ ವಿಶ್ವವಿದ್ಯಾಲಯ ರಚನೆಯಾಗುವ ಮುನ್ನವೇ ವಿವಾದದ ಸ್ವರೂಪ ಪಡೆದುಕೊಂಡಿದೆ. ಇಲ್ಲಿನ ವಿದ್ಯಾರ್ಥಿಗಳ ಗೋಳಿಗೆ ಕೊನೆಯೇಇಲ್ಲದಂತಾಗಿದ್ದು, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಬಿಕ್ಕಟ್ಟು ಕಗ್ಗಂಟಾಗುತ್ತಲೇ ಸಾಗಿದೆ.

ಮಂಡ್ಯ ವಿಶ್ವವಿದ್ಯಾಲಯದಡಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದಡಿಯಲ್ಲೇ ಪರೀಕ್ಷೆ ಬರೆಯಲು ಹಾಗೂ ಶಿಕ್ಷಣ ಮುಂದು ವರೆಸುವಂತೆ ಒತ್ತಾಯಿಸಿ ಗುರುವಾರ ತರಗತಿ ಬಹಿಷ್ಕರಿಸಿ ಮತ್ತೆ ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ನಗರದ ಸರ್ಕಾರಿ ಮಹಾವಿದ್ಯಾಲಯದ ಆವರಣದಲ್ಲಿ ಜಮಾಯಿಸಿದ ಸಾವಿರಾರು ವಿದ್ಯಾರ್ಥಿಗಳು ಮಹಾವಿದ್ಯಾಲಯದ ಪ್ರಾಂಶುಪಾಲರು, ಆಡಳಿತ ವರ್ಗ ಹಾಗೂ ಸರ್ಕಾರದ ಗೊಂದಲ ಸೃಷ್ಟಿಸುತ್ತಿರುವುದರ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.

ಭವಿಷ್ಯಕ್ಕೆ ಮಾರಕ: ಸುಮಾರು 1600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರಥಮ ವರ್ಷದ ಬಿಎ, ಬಿಎಸ್ಸಿ, ಬಿಕಾಂ, ಬಿಬಿಎ, ಬಿಸಿಎ, ಬಿಸಿಎ ಆನರ್ ಮತ್ತು ಎಂಎ,ಎಂಎಸ್ಸಿ, ಎಂಕಾಂ, ಎಂಸಿಎ ತರಗತಿಗಳ ವಿದ್ಯಾರ್ಥಿಗಳು 2019-20ನೇ ಸಾಲಿನ ಮಂಡ್ಯ ವಿಶ್ವವಿದ್ಯಾಲಯಕ್ಕೆ ಪ್ರವೇಶ ಪಡೆದಿದ್ದೇವೆ. ಪಠ್ಯಕ್ರಮ, ಪ್ರಶ್ನೆ ಪತ್ರಿಕೆಗಳಿಗೆ ಅನುಸಾರವಾಗಿ ಪರೀಕ್ಷೆ ಬರೆದಿದ್ದೇವೆ. ಆದರೆ, ಈಗ ಆಡಳಿತಾತ್ಮಕವಾಗಿ ಆಗಿರುವ ಲೋಪಗಳ ನೆಪ ಮಾಡಿಕೊಂಡು ಪ್ರಾಂಶುಪಾಲರು, ಆಡಳಿತ ವರ್ಗ ಮತ್ತು ಸರ್ಕಾರ ನಮ್ಮನ್ನು ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ) ಕಾಲೇಜಿನಲ್ಲಿ ಶಿಕ್ಷಣ ಮುಂದುವರೆಸುವಂತೆ ಪೂರಕ ಆದೇಶಗಳನ್ನು ಹೊರಡಿಸಿದ್ದಾರೆ. ಇದು ನಮ್ಮ ಭವಿಷ್ಯಕ್ಕೆ ಮಾರಕವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಜನಪ್ರತಿನಿಧಿಗಳು ಬಾಯಿಬಿಡುತ್ತಿಲ್ಲ: ಮಂಡ್ಯ ವಿಶ್ವವಿದ್ಯಾಲಯದ ವಿಚಾರವಾಗಿ ಉಂಟಾಗಿರುವ ಗೊಂದಲದ ಬಗ್ಗೆ ಜ.10ರಿಂದ ನಿರಂತರವಾಗಿ ತರಗತಿ ಬಹಿಷ್ಕರಿಸಿ ಧರಣಿ ನಡೆಸುತ್ತಿದ್ದರೂ ಪ್ರಾಂಶುಪಾಲ ಹಾಗೂ ಪ್ರಭಾರ ವಿಶೇಷಾಧಿಕಾರಿ ಡಾ.ಮಹಾಲಿಂಗು ಅವರು ನಮ್ಮ ಮನವಿಗೆ ಸ್ಪಂದಿಸುತ್ತಿಲ್ಲ. ನಮಗೆ ಸರಿಯಾದ ಮಾಹಿತಿ ನೀಡದೆ ಮೇಲಧಿಕಾರಿಗಳ ಗಮನ ಸೆಳೆಯುತ್ತಿಲ್ಲ. ಅಲ್ಲದೆ, ನಮ್ಮ ಹೋರಾಟಕ್ಕೆ ಯಾವೊಬ್ಬ ಜನಪ್ರತಿನಿಧಿಯಾಗಲೀ, ಅಧಿಕಾರಿ ವರ್ಗದವರಾಗಲೀ ಸಮಸ್ಯೆಆಲಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳ ಜೀವನದ ಜೊತೆ ಸರ್ಕಾರ ಹಾಗೂ ಜನಪ್ರತಿನಿಧಿಗಳು ಚೆಲ್ಲಾಟವಾಡುತ್ತಿದ್ದಾರೆ. ಸಮಸ್ಯೆ ಏನೆಂಬುದನ್ನು ಅರಿತು ಸರ್ಕಾರದ ಮಟ್ಟದಲ್ಲಿ ಪರಿಹಾರದ ದೊರಕಿಸಿಕೊಡಬೇಕಾದ ಜನಪ್ರತಿ ನಿಧಿಗಳು ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದಾರೆ ಎಂದು ದೂಷಿಸಿದರು.

ಪದವಿ ತರಗತಿಯ ಪರೀಕ್ಷೆ ಮುಗಿದಿದ್ದು ಫ‌ಲಿತಾಂಶವನ್ನು ತಡೆಹಿಡಿಯಲಾಗಿದೆ. ಸ್ನಾತಕೋತ್ತರ ತರಗತಿಗಳಿಗೆ ಮುಖ್ಯ ಪರೀಕ್ಷೆ ನಡೆಯಬೇಕಾಗಿದೆ. ಆದರೆ,ಇದುವರೆಗೂ ಪರೀಕ್ಷೆ ನಡೆಸಿಲ್ಲ. ಇದರ ನಡುವೆಯೂ ಪ್ರಾಂಶುಪಾಲರು ಎರಡನೇ ಸೆಮಿಸ್ಟರ್‌ತರಗತಿ ನಡೆಸಲು ತೀರ್ಮಾನಿಸಿದ್ದಾರೆ. ಇದು ನಮ್ಮ ಶೈಕ್ಷಣಿಕ ಬದುಕನ್ನು ಅಂಧಕಾರಕ್ಕೆ ದೂಡುವ ಪ್ರಯತ್ನ ನಡೆಯುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದ್ದು, ಯಾರಲ್ಲಿ ಹೇಳಬೇಕೆಂದು ಪರಿತಪಿಸುತ್ತಿದ್ದೇವೆ. ಆದ್ದರಿಂದ ಕೂಡಲೇ ಮಂಡ್ಯ ವಿಶ್ವವಿದ್ಯಾಲಯಕ್ಕೆ ನಿಯಮಬದ್ಧವಾಗಿ ಪ್ರವೇಶಾತಿ ಪಡೆದಿದ್ದೇವೆ. ಅದರಂತೆ ಮುಂದಿನ ಪರೀಕ್ಷೆಗಳು ಹಾಗೂ ಶೈಕ್ಷಣಿಕವಾಗಿ ಮಂಡ್ಯ ವಿಶ್ವವಿದ್ಯಾಲಯದಡಿಯಲ್ಲೇ ನಡೆಸಬೇಕು. ಇಲ್ಲದಿದ್ದರೆ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಎಚ್ಚರಿಸಿದರು.

ಜಿಲ್ಲಾಧಿಕಾರಿ ವಿರುದ್ಧವೂ ಸಿಟ್ಟು: ಈ ವಿಚಾರದ ಬಗ್ಗೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಅವರಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ವಹಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ಈ ಬಾರಿ ಖುದ್ದಾಗಿ ಜಿಲ್ಲಾಧಿಕಾರಿ ಪ್ರತಿಭಟನಾ ಸ್ಥಳಕ್ಕೆ ಬಂದು ಸಮಸ್ಯೆ ಆಲಿಸಿ ಪರಿಹರಿಸಬೇಕು ಎಂದು ಪಟ್ಟು ಹಿಡಿದರು. ಯಾವ ಅಧಿಕಾರಿಗಳೂ ವಿದ್ಯಾರ್ಥಿಗಳ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ವಿದ್ಯಾರ್ಥಿಗಳಾದ ಎಂ.ಪಿ. ಗುರುಪ್ರಸಾದ್‌, ಚಂದನ್‌, ಕೆ.ಡಿ.ಋತು, ಕೆ.ಎಸ್‌. ಸ್ವಾತಿ, ಎಂ.ಕೆ.ಹೇಮಾ, ಪಿ.ಕಾವ್ಯಶ್ರೀ, ಆರ್‌.ವಿ. ದಿವ್ಯಾ, ಅರ್‌.ಪ್ರಿಯಾ, ಡಿ.ಇಂದುಜಾ, ಚಾಂದಿನಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಾಂಶುಪಾಲರ ಒತ್ತಡ: ಮಂಡ್ಯ ವಿವಿಗೆ ಪ್ರವೇಶಾತಿ ಪಡೆದಿರುವ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದಡಿ ಪರೀಕ್ಷೆ ಬರೆಯುವಂತೆ ಸರ್ಕಾರದ ಜಂಟಿ ನಿರ್ದೇಶಕರು ಸೂಚಿಸಿದ್ದಾರೆ. ಆದರೆ, ಪ್ರಾಂಶುಪಾಲರು ಈ ವಿಚಾರವಾಗಿವಿದ್ಯಾರ್ಥಿಗಳಿಗೆ ಮಾಹಿತಿ ನೀಡದೆ ಹಿಂದೇಟು ಹಾಕುತ್ತಿದ್ದಾರೆ. ಮಹಾವಿದ್ಯಾಲಯದ ಅಡಿಯಲ್ಲೇ ಪರೀಕ್ಷೆ ಬರೆಯುವಂತೆ ಒತ್ತಡ ಹಾಕುತ್ತಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದರು.

ರಸ್ತೆ ತಡೆಗೆ ವಿಫ‌ಯತ್ನ: ಮಂಡ್ಯ ವಿಶ್ವವಿದ್ಯಾಲಯ ಗೊಂದಲ ನಿವಾರಣೆಗೆ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬರುವಂತೆ ಆಗಮಿಸಿ ವಿದ್ಯಾರ್ಥಿಗಳು ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಬಾರದ ಜಿಲ್ಲಾಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಬೆಂಗಳೂರು-ಮೈಸೂರು ಹೆದ್ದಾರಿ ತಡೆ ನಡೆಸಲು ನಿರ್ಧರಿಸಿದರು. ಆಗ ಪೊಲೀಸರು ಮಧ್ಯೆ ಪ್ರವೇಶಿಸಿ ಅನುಮತಿ ಇಲ್ಲದೆ ರಸ್ತೆ ತಡೆ ನಡೆಸುವಂತಿಲ್ಲ ಎಂದು ಹೇಳಿದಾಗ, ವಿದ್ಯಾರ್ಥಿಗಳು ಅನುಮತಿ ನೀಡುವಂತೆ ಮನವಿ ಮಾಡಿದರು. ಆದರೆ ಪೊಲೀಸರು ಅದಕ್ಕೆ ಸಮ್ಮತಿ ಸೂಚಿಸಲಿಲ್ಲ.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

14

Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ

Suicide 3

Maddur; ಕೆಲಸದ ಒತ್ತಡ: ಎಂಜಿನಿಯರ್‌ ಆತ್ಮಹ*ತ್ಯೆ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.