ಮನ್‌ಮುಲ್‌: ಸಾವಿರ ಕೋಟಿಗೂ ಅಧಿಕ ಭ್ರಷ್ಟಾಚಾರ

ಮಾಜಿ ಸಚಿವ ಚಲುವರಾಯಸ್ವಾಮಿ ಆರೋಪ „ ಸಂಪೂರ್ಣ ಜವಾಬ್ದಾರಿ ಜೆಡಿಎಸ್‌ ನಾಯಕರೇ ಹೊರಲು ಆಗ್ರಹ

Team Udayavani, Nov 1, 2021, 2:49 PM IST

ಮನ್‌ಮುಲ್‌- ಸಾವಿರ ಕೋಟಿಗೂ ಅಧಿಕ ಭ್ರಷ್ಟಾಚಾರ

ಮದ್ದೂರು: ಮನ್‌ಮುಲ್‌ ಹಾಲು, ನೀರು ಮಿಶ್ರಿತ ಹಗರಣದಲ್ಲಿ ಸಾವಿರ ಕೋಟಿಗೂ ಅಧಿಕ ಭ್ರಷ್ಟಾಚಾರ ಇದರ ಸಂಪೂರ್ಣ ಜವಾಬ್ದಾರಿಯನ್ನು ಜೆಡಿಎಸ್‌ ನಾಯಕರು ಹೊರಬೇಕೆಂದು ಮಾಜಿ ಸಚಿವ ಎನ್‌. ಚಲುವರಾಯಸ್ವಾಮಿ ಆರೋಪಿಸಿದರು. ಮದ್ದೂರು ಪಟ್ಟಣದ ಜಾಮೀಯ ಶಾದಿ ಮಹಲ್‌ ನಲ್ಲಿ ತಾಲೂಕು ಕಾಂಗ್ರೆಸ್‌ ಸಮಿತಿ ಕಾರ್ಮಿಕ ವಿಭಾಗ ಆಯೋಜಿಸಿದ್ದ ತಾಲೂಕು ಶ್ರಮಿಕ ಸನ್ಮಾನ ಸಮ್ಮೇಳನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಅವ್ಯವಹಾರಕ್ಕೆ ಪ್ರೋತ್ಸಾಹ ಆರೋಪ: ಗೆಜ್ಜಲಗೆರೆ ಹಾಲು ಒಕ್ಕೂಟದಲ್ಲಿ ನಡೆದಿರುವ ಹಗರಣವನ್ನು ಜಿಲ್ಲೆಯ ಶಾಸಕರು, ನಾಯಕರು ಹಾಗೂ ರಾಜ್ಯ ನಾಯಕರು ಹೊರುತ್ತಾರೋ ತಮಗೆ ಗೊತ್ತಿಲ್ಲವೆಂದ ಅವರು, ಎಲ್ಲಾ ತರಹದ ಅವ್ಯವಹಾರವನ್ನು ತಡೆಹಿಡಿದು ಪ್ರೋತ್ಸಾಹ ನೀಡುತ್ತಿರುವುದು ಜನತಾ ದಳದ ನಾಯಕರೆಂದು ನೇರವಾಗಿ ಆರೋಪಿಸಿದರು. ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕಾರ್ಯ, ಜನರ ಸಮಸ್ಯೆ ಹಾಗೂ ರೈತ, ಕಾರ್ಮಿಕ, ಮಹಿಳಾ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಜಿಲ್ಲೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದು, ಇದಕ್ಕೆ ನೇರ ಹೊಣೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಪಕ್ಷದವರೇ ಕಾರಣವೆಂದರು.

ಗಾಯದ ಮೇಲೆ ಬರೆ ಎಳೆದಂತೆ: ಜಿಲ್ಲೆ ಹಾಗೂ ತಾಲೂಕು ಕೇಂದ್ರದಲ್ಲಿರುವ ಕಾರ್ಮಿಕರಿಗೆ ಫ‌ುಡ್‌ಕಿಟ್‌ ಸಮರ್ಪಕವಾಗಿ ವಿತರಿಸದ ಹಿನ್ನೆಲೆಯಲ್ಲಿ ಗೋದಾಮುಗಳಲ್ಲಿ ಕೊಳೆಯುತ್ತಿರುವುದಾಗಿ ಆರೋಪಿಸಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತರು, ಬಡವರು ಹಾಗೂ ಕೂಲಿ ಕಾರ್ಮಿಕರ ಮೇಲೆ ಗಾಯದ ಮೇಲೆ ಬರೆ ಎಳೆದಂತೆ ಅಗತ್ಯ ವಸ್ತುಗಳನ್ನು ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿರುವುದಾಗಿ ದೂರಿದರು.

ರಾಜ್ಯದಲ್ಲಿ ಆಡಳಿತ ನಡೆಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ವರ್ಗದ ಜನರಿಗೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿ ಯಾವುದೇ ಕಪ್ಪುಚುಕ್ಕಿ ಇಲ್ಲದೇ ಸಮರ್ಪಕವಾಗಿ ಕರ್ತವ್ಯ ನಿರ್ವಹಿಸಿದರೆಂದ ಅವರು, ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರತಿಯೊಬ್ಬರು ಶ್ರಮಿಸಬೇಕೆಂದರು. ಕಾರ್ಮಿಕರಿಗೆ ಸಿಗುವ ಹಲವಾರು ಯೋಜನೆಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು.

ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಉನ್ನತ ಹುದ್ದೆ ಅಲಂಕರಿಸಲು ಕ್ರಮ ವಹಿಸಬೇಕೆಂದ ಅವರು, ಕಾರ್ಮಿಕರು ನೋಂದಣಿ ಮಾಡಿಕೊಂಡು ಸರ್ಕಾರದ ಯೋಜನೆಗಳನ್ನು ಪಡೆಯಬೇಕೆಂದರು. ಮಾಜಿ ಸಚಿವ ನರೇಂದ್ರಸ್ವಾಮಿ ಕಾರ್ಯಕ್ರಮ ಕುರಿತು ಮಾತನಾಡಿ, ಎಲ್ಲಾ ವರ್ಗದ ಕಾರ್ಮಿಕರು ಸಂಘಟಿತರಾಗಿ ತಮ್ಮ ಹಕ್ಕುಗಳನ್ನು ಹೋರಾಟದ ಮೂಲಕ ಪಡೆಯಬೇಕೆಂದರು.

ಇದನ್ನೂ ಓದಿ:- ಅಭಿವೃದ್ಧಿ ಹಿಂದೆ ಜನ ಸುತ್ತುವುದಲ್ಲ, ಜನರ ಸುತ್ತಲೂ ಅಭಿವೃದ್ಧಿ ಇರಬೇಕು: ಸಿಎಂ ಬೊಮ್ಮಾಯಿ

ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ ಪುಣ್ಯಸ್ಮರಣೆ ಅಂಗವಾಗಿ ಹಾಗೂ ನಿಧನರಾದ ನಟ ಪುನೀತ್‌ ರಾಜ್‌ ಕುಮಾರ್‌ ಭಾವಚಿತ್ರಕ್ಕೆ ಗಣ್ಯರು ಪುಷ್ಪನಮನ ಸಲ್ಲಿಸಿ ಶ್ರದ್ಧಾಂಜಲಿ ಸಲ್ಲಿಸಿದರು. ಕಾರ್ಯಕ್ರಮದ ವೇಳೆ ನೋಂದಾಯಿತ ಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಿಸಲಾಯಿತು. ಈ ವೇಳೆ ಮಾಜಿ ಶಾಸಕರಾದ ಬಿ.ರಾಮಕೃಷ್ಣ, ಮಧು ಜಿ.ಮಾದೇಗೌಡ, ಬ್ಲಾಕ್‌ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ, ತಾಲೂಕು ಅಧ್ಯಕ್ಷ ಕದಲೂರು ರಾಮಕೃಷ್ಣ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಪಿ.ಸಂದರ್ಶ, ಜಿಪಂ ಮಾಜಿ ಅಧ್ಯಕ್ಷ ಸುರೇಶ್‌, ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಪುಟ್ಟಸ್ವಾಮಿ, ತಾ.ಅಧ್ಯಕ್ಷ ಸತೀಶ್‌, ಮುಖಂಡರಾದ ದ್ಯಾವಯ್ಯ, ಶಿವಲಿಂಗಯ್ಯ, ಅಜ್ಜಹಳ್ಳಿ ರಾಮಕೃಷ್ಣ ಇದ್ದರು.

 ಫ‌ುಡ್‌ಕಿಟ್‌ ವಿತರಣೆಯಲ್ಲೂ ಭ್ರಷ್ಟಾಚಾರ: ಆರೋಪ ಕೋವಿಡ್‌ ಸಂದರ್ಭದಲ್ಲಿ ಆರೋಗ್ಯ ಹಾಗೂ ಕಾರ್ಮಿಕ ಇಲಾಖೆಯಲ್ಲಿ ಸಾಕಷ್ಟು ಹಣ ದುರುಪಯೋಗವಾಗಿದ್ದು, ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಸಾಕಷ್ಟು ಅವ್ಯವಹಾರದಲ್ಲಿ ತೊಡಗಿದ್ದು, ಕಾರ್ಮಿಕ ಕಲ್ಯಾಣ ನಿಧಿಯಿಂದ ವಿತರಿಸಿದ ಫ‌ುಡ್‌ಕಿಟ್‌ ವಿತರಣೆಯಲ್ಲೂ ಭ್ರಷ್ಟಾಚಾರ ತಾಂಡವವಾ ಡುತ್ತಿದ್ದು, ಕೇವಲ 500 ರೂ.ಗಳ ಕಿಟ್‌ನ್ನು 900 ರೂ.ಗೆ ಲೆಕ್ಕ ಕೊಡುವ ಮೂಲಕ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಮಾಜಿ ಸಚಿವ ಎನ್‌. ಚಲುವರಾಯಸ್ವಾಮಿ ಆರೋಪಿಸಿದರು.

ಟಾಪ್ ನ್ಯೂಸ್

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

BBK11: ಬಿಗ್‌ ಬಾಸ್‌ ಮನೆಗೆ ವೈಲ್ಡ್‌ ಕಾರ್ಡ್ ಸ್ಪರ್ಧಿ; ಅಬ್ಬರಿಸುತ್ತಲೇ ದೊಡ್ಮನೆಗೆ ಎಂಟ್ರಿ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…

Kailash Gahlot: ಚುನಾವಣೆಗೂ ಮೊದಲೇ ಆಪ್ ತೊರೆದ ಸಚಿವ ಕೈಲಾಶ್ ಗೆಹ್ಲೋಟ್…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

1-wewrewre

The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.