ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ನದಿಗಿಳಿದು ಪ್ರತಿಭಟನೆ
Team Udayavani, Dec 24, 2021, 5:49 PM IST
ಶ್ರೀರಂಗಪಟ್ಟಣ : ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಶುಕ್ರವಾರ ಗಂಜಾಂ ಬಳಿ ಕಾವೇರಿ ನದಿಗಿಳಿದು ಪ್ರತಿಭಟನೆ ನಡೆಸಿದರು.ನಿಮಿಷಾಂಬಾ ದೇವಾಲಯದ ಬಳಿ ಅರ್ಧ ತಾಸಿಗೂ ಹೆಚ್ಚು ಕಾಲ ನದಿಯಲ್ಲಿ ನಿಂತು ಪ್ರತಿಭಟಿಸಿದರು. ವೇದಿಕೆಯ ಅಧ್ಯಕ್ಷ ರಮೇಶಗೌಡ ಅವರ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಿತು.
ಮೇಕೆದಾಟು ಯೋಜನೆ ಅನುಷ್ಠಾನ ಸಂಬಂಧ ಚಾಮರಾಜನಗರದಿಂದ ಜನಜಾಗೃತಿ ಕಾರ್ಯಕ್ರಮ ಆರಂಭಿಸಿದ್ದು, ಡಿ.27ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದ್ದೇವೆ. ವಿವಿಧ ರಾಜಕೀಯ ಪಕ್ಷಗಳ ಅಧ್ಯಕ್ಷರು ಹಾಗೂ ಚಿತ್ರನಟರಿಗೂ ಮನವಿ ನೀಡಲಾಗುವುದು. ತಮಿಳುನಾಡು ಮತ್ತು ಕರ್ನಾಟಕ ಜಂಟಿಯಾಗಿ ಈ ಯೋಜನೆ ಅನುಷ್ಠಾನ ಮಾಡಬೇಕು. ಇದರಿಂದ ಎರಡೂ ರಾಜ್ಯಗಳಿಗೆ ಅನುಕೂಲ ಆಗಲಿದೆ ಎಂದು ರಮೇಶಗೌಡ ಹೇಳಿದರು. ಬೆಂಕಿ ಶ್ರೀಧರ್, ಕೋಲಾರ ವೆಂಕಟೇಶ್, ರಾಯಚೂರಿನ ವೀರೇಶ್, ಭಾಗ್ಯಮ್ಮ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.