ಹತ್ತು ತಿಂಗಳಿಂದ ನಗರಸಭೆಗೆ ನಾಮಕೇವಾಸ್ಥೆ ಸದಸ್ಯರು

ಅಧ್ಯಕ್ಷ-ಉಪಾಧ್ಯಕ್ಷ ಮೀಸಲು ವಿವಾದ: ಚುನಾವಣೆಗೆ ವಿಘ್ನ • ಅಧಿಕಾರ ವಂಚಿತ ಸದಸ್ಯರು, ಅಭಿವೃದ್ಧಿ ಕಾರ್ಯಗಳು ಸ್ತಬ್ಧ

Team Udayavani, May 7, 2019, 3:12 PM IST

mandya-tdy-1..

ಮಂಡ್ಯ: ನಗರಸಭೆಗೆ ಚುನಾವಣೆ ನಡೆದು ಹತ್ತು ತಿಂಗಳಾದರೂ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ನಡೆಯದೆ ಆಡಳಿತ ವ್ಯವಸ್ಥೆಗೆ ಗ್ರಹಣ ಹಿಡಿದಿದೆ. ಆಡಳಿತದಲ್ಲಿ ಅಧಿಕಾರಿಗಳ ದರ್ಬಾರ್‌ ನಡೆದಿದ್ದು, ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಸ್ತಬ್ಧಗೊಂಡಿವೆ.

ನಗರದ 35 ವಾರ್ಡ್‌ಗಳಿಗೆ ಆಯ್ಕೆಯಾದ ಸದಸ್ಯರು ಇಂದಿಗೂ ನಾಮಕಾವಸ್ಥೆ ಸದಸ್ಯರಾಗೇ ಉಳಿದು ಕೊಂಡಿದ್ದಾರೆ. ಅವರಿಗೆ ಯಾವುದೇ ಅಧಿಕಾರವಿಲ್ಲ. ವಾರ್ಡ್‌ಗಳ ಕೆಲಸ ಮಾಡಲಾಗದೆ ಜನರಿಂದ ಸಹಸ್ರ ನಾಮಾರ್ಚನೆ ಮಾಡಿಸಿಕೊಳ್ಳುತ್ತಲೇ ದಿನ ದೂಡು ವಂತಹ ಸ್ಥಿತಿ ಸೃಷ್ಟಿಯಾಗಿದೆ. ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಗೆ ಮೀಸಲಾತಿ ವಿಘ್ನ ದೊಡ್ಡ ತೊಡಕಾಗಿ ಪರಿಣಮಿಸಿದ್ದು, ಅದಕ್ಕಿನ್ನೂ ಮುಕ್ತಿ ದೊರಕಿಲ್ಲ.

ಮಂಡ್ಯ ನಗರಸಭೆಗೆ 2018ರ ಆಗಸ್ಟ್‌ 31ರಂದು ಚುನಾವಣೆ ನಡೆಯಿತು. ಸೆ.3ರಂದು ಫ‌ಲಿತಾಂಶ ಪ್ರಕಟಗೊಂಡು ಅದೇ ದಿನವೇ ರಾಜ್ಯಸರ್ಕಾರ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ಪ್ರಕಟಿಸಿತು. ಇದಕ್ಕೆ ಎಲ್ಲೆಡೆ ವಿರೋಧ ವ್ಯಕ್ತವಾಯಿತು. ಆ ಹಿನ್ನೆಲೆಯಲ್ಲಿ ಪಟ್ಟಿಯನ್ನು ಪರಿಷ್ಕರಣೆಗೊಳಪಡಿಸಲಾಯಿತು. ಪರಿಣಾಮ ಆ ಮೀಸಲಿನಡಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಅವಕಾಶವಿದ್ದವರು ತೀವ್ರ ನಿರಾಸೆಗೆ ಒಳಗಾದರು.

ಆನಂತರದಲ್ಲಿ ಸರ್ಕಾರದಿಂದ ಪರಿಷ್ಕರಣೆಗೊಂಡು ಹೊಸ ಪಟ್ಟಿ ಬಿಡುಗಡೆಯಾಯಿತು. ಅದಕ್ಕೂ ಸಹಮತ ವ್ಯಕ್ತವಾಗಲಿಲ್ಲ. ಮೊದಲ ಪಟ್ಟಿಯಲ್ಲಿ ಅವಕಾಶ ವಂಚಿತರಾದವರು ನಗರಸಭೆ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಪರಿಷ್ಕೃತ ಮೀಸಲು ಪಟ್ಟಿ ವಿರುದ್ಧ ಧಾರವಾಡ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದರು. ಇದರಿಂದ ಚುನಾವಣೆ ನನೆಗುದಿಗೆ ಬಿದ್ದಿತು.

ನಿರಂತರ ವಿಘ್ನಗಳು: ಮೀಸಲಾತಿ ಗೊಂದಲದ ಬಗೆಗಿನ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಮೊದಲ ಪಟ್ಟಿಯಲ್ಲಿರುವ ಮೀಸಲು ಪ್ರಕಾರವೇ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ನಡೆಸುವಂತೆ 2018ರ ಅಕ್ಟೋಬರ್‌ ತಿಂಗಳಲ್ಲೇ ಆದೇಶ ನೀಡಿದೆ. ಅದೇ ವೇಳೆಗೆ ರಾಜ್ಯದಲ್ಲಿ 3 ಲೋಕಸಭೆ, ಎರಡು ವಿಧಾನಸಭೆಗೆ ಉಪ ಚುನಾವಣೆಗಳು ಎದುರಾದವು. ಚುನಾವಣೆ ಅಧಿಸೂಚನೆ ಹೊರಬಿದ್ದು 2018ರ ನವೆಂಬರ್‌ 3ಕ್ಕೆ ಚುನಾವಣೆ ನಿಗದಿಯಾಯಿತು. ಆಗ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಹಳೇ ಮೀಸಲುಪಟ್ಟಿಯಂತೆ ಚುನಾವಣೆ ನಡೆಸುವುದಕ್ಕೆ ತಡೆ ಬಿದ್ದಿತು.

ಲೋಕಸಭೆ ಹಾಗೂ ವಿಧಾನಸಭಾ ಉಪ ಚುನಾವಣೆಗಳು ಮುಗಿದ ಬಳಿಕ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ನಡೆಸುವುದಕ್ಕೆ ಅವಕಾಶ ಕಲ್ಪಿಸಿಕೊಡಲಾಯಿತು. ಆದರೆ, ಧಾರವಾಡ ಹಾಗೂ ಇತರೆ ಜಿಲ್ಲೆಯವರು ನಗರಸಭೆ ವರಿಷ್ಠರ ಮೀಸಲು ಪಟ್ಟಿ ಪ್ರಶ್ನಿಸಿ ಮತ್ತೆ ಹೈಕೋರ್ಟ್‌ ಮೊರೆ ಹೋದರು. ಮತ್ತೆ ಚುನಾವಣೆಗೆ ಕೋರ್ಟ್‌ ತಡೆಯಾಜ್ಞೆ ನೀಡಿತು. ನಿರಂತರ ವಿಘ್ನಗಳಿಂದಾಗಿ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ವಿಳಂಬವಾಗುತ್ತಲೇ ಇದೆ.

ಅಭಿವೃದ್ಧಿ ಕಾರ್ಯಗಳು ಸ್ತಬ್ಧ: ಕಳೆದ ಹತ್ತು ತಿಂಗಳಿಂದ ನಗರಸಭೆಯಿಂದ ನಗರ ವ್ಯಾಪ್ತಿಯೊಳಗೆ ಯಾವುದೇ ಅಭಿವೃದ್ಧಿ ಕಾರ್ಯಗಳೂ ನಡೆಯುತ್ತಿಲ್ಲ. ನಗರದ ರಸ್ತೆಗಳೆಲ್ಲಾ ಹಾಳಾಗಿದೆ. ಕುಡಿಯುವ ನೀರು, ಕಸದ ಸಮಸ್ಯೆ ತೀವ್ರವಾಗಿದೆ. ಸ್ವಚ್ಛತೆಯೂ ಮಾಯ ವಾಗಿದೆ. ನಗರಸಭೆ ಆಡಳಿತದಲ್ಲಿ ಅಧಿಕಾರಿಗಳ ದರ್ಬಾರ್‌ ನಡೆದಿರುವುದರಿಂದ ಅವರನ್ನು ಹೇಳು ವವರು, ಕೇಳುವವರು ಯಾರೂ ಇಲ್ಲದಂತಾಗಿದೆ.

ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ಸಮಯದಲ್ಲಿ ಮಂಡಿಸಿದ ಬಜೆಟ್‌ನಲ್ಲಿ ನಗರಾಭಿವೃದ್ಧಿಗೆ 50 ಕೋಟಿ ರೂ. ಹಣ ಬಿಡುಗಡೆ ಘೋಷಣೆ ಮಾಡಿತ್ತು. ಆ ಹಣ ಬಿಡುಗಡೆಯಾಗಿದೆಯೋ, ಇಲ್ಲವೋ ಗೊತ್ತಿಲ್ಲ. ನೂರಡಿ ರಸ್ತೆ ಹೊರತುಪಡಿಸಿದಂತೆ ಅವ್ಯವಸ್ಥಿತ ಸ್ವರೂಪ ಪಡೆದುಕೊಂಡಿರುವ ಉಳಿದ ಯಾವ ರಸ್ತೆಗಳ ಅಭಿವೃದ್ಧಿಯನ್ನೂ ಕೈಗೆತ್ತಿಕೊಂಡಿಲ್ಲ.

ಅಧ್ಯಕ್ಷ ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡರೆ ಕೆಲಸಗಳನ್ನು ಸುಸೂತ್ರವಾಗಿ ಮಾಡಿಕೊಂಡು ಹೋಗಬಹುದು. ಯಾವುದೇ ಕಾಮಗಾರಿಗಳ ಕ್ರಿಯಾಯೋಜನೆಗಳಿಗೆ ನಗರಸಭೆ ಸಾಮಾನ್ಯ ಸಭೆಯಲ್ಲಿ ಅನುಮೋದನೆ ಪಡೆಯಬೇಕು. ಆದರೆ, ಸ್ಥಳೀಯ ಸಂಸ್ಥೆಗಳ ವರಿಷ್ಠರ ಆಯ್ಕೆ ಪ್ರಕ್ರಿಯೆಯೇ ನಡೆದಿಲ್ಲ. ಹೀಗಾಗಿ ಸಾಮಾನ್ಯ ಸಭೆಗಳು ನಡೆದಿಲ್ಲ. ಹೊಸ ಕಾಮಗಾರಿಗಳು ಆರಂಭವಾಗಿಲ್ಲ. ಅಭಿವೃದ್ದಿ ಕಾರ್ಯಗಳು ನೆನೆಗುದಿಗೆ ಬಿದ್ದಿವೆ. ಚುನಾವಣಾ ನೀತಿ ಸಂಹಿತೆ ನೆಪದಲ್ಲಿ ಅಧಿಕಾರಿಗಳ ಅಂಧಾ ದರ್ಬಾರ್‌ ನಡೆದಿದೆ ಎನ್ನುವುದು ನಗರಸಭೆಗೆ ಆಯ್ಕೆಯಾಗಿರುವ ಜನಪ್ರತಿನಿಧಿಗಳ ಅನಿಸಿಕೆಯಾಗಿದೆ.

ಕಾಯದೇ ವಿಧಿ ಇಲ್ಲ: ಈ ಮಧ್ಯೆ ಮಾ.10ರಂದು ದಿಢೀರನೆ ಲೋಕಸಭೆ ಸಾರ್ವತ್ರಿಕ ಚುನಾವಣೆಯ ಅಧಿಸೂಚನೆಯೂ ಪ್ರಕಟವಾಗಿತು. ಈಗಾಗಲೇ ರಾಜ್ಯದಲ್ಲಿ ಎರಡು ಹಂತದ ಚುನಾವಣೆ (ಏ.18 ಮತ್ತು 23) ಮುಗಿದಿದೆ. ಮೇ 23ರಂದು ಮತ ಎಣಿಕೆಯೊಂದಿಗೆ ಫಲಿತಾಂಶ ಪ್ರಕಟಗೊಳ್ಳಲಿದೆ. ಆ ಬಳಿಕ ಐದು ದಿನಗಳ ನಂತರ ಮೇ 27ರಂದು ಚುನಾವಣಾ ನೀತಿ ಸಂಹಿತೆ ಅಂತ್ಯಗೊಳ್ಳಲಿದೆ. ಹೀಗಾಗಿ ಅಲ್ಲಿವರೆಗೆ ಕಾಯದೇ ವಿಧಿ ಇಲ್ಲ.

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆದ್ದಿರುವವರು ಹೆಸರಿಗಷ್ಟೇ ಸದಸ್ಯರು. ಆದರೆ, ಅವರಿಗೆ ಯಾವುದೇ ಅಧಿಕಾರವಿಲ್ಲ. ಅಧಿಕಾರಾವ ಧಿಯೂ ಆರಂಭವಾಗಿಲ್ಲ. ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಯಾಗಿ ನಂತರ ನಡೆಯುವ ಮೊದಲ ಸಾಮಾನ್ಯ ಸಭೆ ನಡೆಯುವ ದಿನದಿಂದ ಹೊಸ ಸದಸ್ಯರ ಅಧಿಕಾರವಧಿ ಅಧಿಕೃತವಾಗಿ ಆರಂಭವಾಗಲಿದೆ.

ಅಧಿಕಾರಿಗಳ ಕಾರ್ಯವೈಖರಿಗೆ ಕನ್ನಡಿ: ನಗರಸಭೆಗೆ ವರಿಷ್ಠರ ಆಯ್ಕೆ ನಡೆಯದಿರುವುದರಿಂದ ಬೃಹತ್‌ ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಾಗದಂತಾಗಿದೆ. ಹತ್ತು ತಿಂಗಳ ಹಿಂದೆ ಬಜೆಟ್‌ನಲ್ಲಿ ಘೋಷಣೆಯಾದ 50 ಕೋಟಿ ರೂ. ಹಣಕ್ಕೆ ಈಗ ಯೋಜನಾ ವರದಿ ಯನ್ನು ಸಿದ್ಧಪಡಿಸಲಾಗುತ್ತಿದೆ ಎಂದರೆ ಇದು ಅಧಿ ಕಾರಿಗಳ ಕಾರ್ಯವೈಖರಿಗೆ ಹಿಡಿದ ಕನ್ನಡಿಯಂತಾಗಿದೆ.

ಲೋಕಸಭೆ ಚುನಾವಣೆ ಘೋಷಣೆಯಾದ ನಂತರದಲ್ಲಿ ನಗರಸಭೆಯ ಮೂವರು ಆಯುಕ್ತರು ಬದಲಾಗಿದ್ದಾರೆ. ಯಾರೊಬ್ಬರಿಗೂ ನಗರಸಭೆ ಕಾಮಗಾರಿಗಳು ಯಾವ ಹಂತದಲ್ಲಿವೆ, ಯಾವ ಯಾವ ಯೋಜನೆಯಡಿ ಏನೇನು ಕೆಲಸ ನಡೆಯುತ್ತಿವೆ ಎಂಬುದರ ಅರಿವಿಲ್ಲ. ವರ್ಗಾವಣೆ ಯಾಗಿ ಬಂದ ನಂತರದಲ್ಲಿ ಚುನಾವಣಾ ಕೆಲಸ- ಕಾರ್ಯಗಳಿಗೆ ನಿಯೋಜನೆಗೊಂಡ ಅಧಿಕಾರಿಗಳಿಗೆ ಇಂದಿಗೂ ನಗರಸಭೆ ಆಡಳಿತದತ್ತ ಗಮನಹರಿಸುವುದಕ್ಕೆ ಸಾಧ್ಯವಾಗಿಲ್ಲ.

ಹದಿನಾಲ್ಕನೇ ಹಣಕಾಸು ಯೋಜನೆಯಡಿ ಕೆಲವೊಂದು ರಸ್ತೆ, ಚರಂಡಿ ಕಾಮಗಾರಿಗಳು ನಡೆಯುತ್ತಿರುವುದನ್ನು ಹೊರತುಪಡಿಸಿದರೆ ಬಹು ನಿರೀಕ್ಷೆಯ ಯೋಜನೆಗಳೆಲ್ಲವೂ ಹಳ್ಳ ಹಿಡಿದಿವೆ. ಹೊಸದಾಗಿ ಆಯ್ಕೆಯಾಗಿರುವ ಸದಸ್ಯರಿಗೆ ಅಧಿಕಾರಿಗಳು ಬೆಲೆ ಕೊಡುತ್ತಿಲ್ಲ. ವರಿಷ್ಠರ ಚುನಾವಣೆ ನಡೆಯದಿರುವುದು ಹಾಗೂ ಚುನಾವಣೆ ನೀತಿ ಸಂಹಿತೆಯೂ ಇದಕ್ಕೆ ಕಾರಣವಾಗಿರಬಹುದು. ವಾರ್ಡ್‌ಗಳಲ್ಲಿ ಬೀದಿ ದೀಪ ದುರಸ್ತಿ, ಶುಚಿತ್ವದ ಕೆಲಸವನ್ನಷ್ಟೇ ಮಾತ್ರ ಮಾಡಿಸಲು ಅವಕಾಶ ಕಲ್ಪಿಸಲಾಗಿದೆ.

● ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.