ಸಚಿವ ನಾರಾಯಣಗೌಡ ಅವರು ಮಾಸ್ ಲೀಡರ್: ಅರುಣ್ ಸಿಂಗ್
Team Udayavani, Sep 1, 2021, 2:06 PM IST
ಕೆಆರ್ ಪೇಟೆ: ರಾಜ್ಯದ ಯುವಜನ ಸಬಲೀಕರಣ ಹಾಗೂ ರೇಷ್ಮೆ ಸಚಿವರಾದ ನಾರಾಯಣಗೌಡ ಮಾಸ್ ಲೀಡರ್ ಆಗಿದ್ದಾರೆ .. ನಾರಾಯಣಗೌಡ ನೇತೃತ್ವದಲ್ಲಿ ಮಂಡ್ಯ ಜಿಲ್ಲೆಯಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ 04 ಶಾಸಕರು ಗೆಲುವು ಸಾಧಿಸಲಿದ್ದಾರೆ.. ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ ಮಾಸ್ ಲೀಡರ್..2023ರ ವಿಧಾನಸಭಾ ಚುನಾವಣೆಯಲ್ಲಿ 140ಕ್ಕೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ. ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ಪಕ್ಷವನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಪಕ್ಷದ ಸಂಘಟನೆಗೆ ಒತ್ತು ನೀಡಲಾಗಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು…
ರಾಜ್ಯ ಬಿಜೆಪಿ ಉಸ್ತುವಾರಿಗಳಾದ ಅರುಣ್ ಸಿಂಗ್ ಅವರು ಇಂದು ಮೈಸೂರಿನಿಂದ ಚನ್ನರಾಯಪಟ್ಟಣಕ್ಕೆ ಹೋಗುವ ಮಾರ್ಗದ ಮಧ್ಯದಲ್ಲಿ ಕೆ.ಆರ್.ಪೇಟೆಯಲ್ಲಿ ಸಚಿವ ನಾರಾಯಣಗೌಡರ ನಿವಾಸಕ್ಕೆ ಭೇಟಿ ನೀಡಿ ತಮ್ಮನ್ನು ಭೇಟಿಯಾದ ಪತ್ರಕರ್ತರೊಂದಿಗೆ ಮಾತನಾಡಿದರು…
ಮಂಡ್ಯ ಜಿಲ್ಲೆಯಲ್ಲಿ ನಾರಾಯಣಗೌಡರ ನೇತೃತ್ವದಲ್ಲಿ ಬಿಜೆಪಿ ಪಕ್ಷವು ತನ್ನ ಖಾತೆಯನ್ನು ತೆರೆದಿದೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಪಕ್ಷದ ಸಂಘಟನೆಗೆ ಒತ್ತು ನೀಡುವ ಜೊತೆಗೆ ಮಂಡ್ಯ ಜಿಲ್ಲೆಯಲ್ಲಿ ಸಚಿವ ನಾರಾಯಣಗೌಡರ ನೇತೃತ್ವದಲ್ಲಿ ಕನಿಷ್ಠ 4 ಶಾಸಕ ಸ್ಥಾನಗಳನ್ನು ಗೆಲ್ಲಲು ಕಾರ್ಯತಂತ್ರ ರೂಪಿಸಲಾಗುವುದು. ಸಚಿವ ನಾರಾಯಣಗೌಡ ಮಾಸ್ ಲೀಡರ್ ಆಗಿದ್ದಾರೆ. ಅವರ ನೇತೃತ್ವದಲ್ಲಿ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡಲಾಗುವುದು ಎಂದು ಅರುಣ್ ಸಿಂಗ್ ಹೇಳಿದರು…
ಇದನ್ನೂ ಓದಿ:ನಾರಾಯಣಗುರುಗಳ 167ನೇ ಜಯಂತ್ಯುತ್ಸವ ಆಚರಣೆ
ಈ ಸಂದರ್ಭದಲ್ಲಿ ಅರುಣ್ ಸಿಂಗ್ ಅವರಿಗೆ ಮೈಸೂರು ರೇಷ್ಮೆ ಜುಬ್ಬಾಪೈಜಾಮ ಬಟ್ಟೆಗಳನ್ನು ಕೊಡುಗೆಯಾಗಿ ನೀಡಿದ ಸಚಿವ ನಾರಾಯಣಗೌಡ ಹೃದಯಸ್ಪರ್ಶಿಯಾಗಿ ಸನ್ಮಾನಿಸಿ ಗೌರವಿಸಿದರು…
ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾ ಬಿಜೆಪಿ ಉಸ್ತುವಾರಿ ಮಾಜಿ ಸಚಿವ ಎ.ಮಂಜು, ಜಿಲ್ಲಾ ಬಿಜೆಪಿ ಅಧ್ಯಕ್ಷ ಕೆ.ಜೆ.ವಿಜಯಕುಮಾರ್, ವಿಧಾನಪರಿಷತ್ ಸದಸ್ಯರಾದ ತುಳಸಿಮುನಿರಾಜಗೌಡ, ಸಿದ್ಧರಾಜು, ಮೂಡಾ ಅಧ್ಯಕ್ಷ ಕೆ.ಶ್ರೀನಿವಾಸ್, ತಾಲ್ಲೂಕು ಬಿಜೆಪಿ ಅಧ್ಯಕ್ಷ ಪರಮೇಶ್ ಅರವಿಂದ್, ರಾಜ್ಯ ಬಿಜೆಪಿ ಮಹಿಳಾ ಘಟಕದ ಉಪಾಧ್ಯಕ್ಷೆ ಪ್ರಮೀಳಾ ವರದರಾಜೇಗೌಡ, ನಗರ ಬಿಜೆಪಿ ಮಹಿಳಾ ಅಧ್ಯಕ್ಷೆ ಚಂದ್ರಕಲಾರಮೇಶ್, ತಾಲ್ಲೂಕು ಬಿಜೆಪಿ ಮಹಿಳಾ ಅಧ್ಯಕ್ಷೆ ಲತಾಮುರಳಿ, ಹೆಗ್ಗಡಹಳ್ಳಿ ಲಕ್ಷ್ಮಮ್ಮ, ಹೊಸಹೊಳಲು ಜಯಮ್ಮ, ತಾಲ್ಲೂಕು ಬಿಜೆಪಿ ಓಬಿಸಿ ಅಧ್ಯಕ್ಷ ಸಾರಂಗಿನಾಗರಾಜು, ಎಸ್.ಸಿ ಮೋರ್ಚಾ ಅಧ್ಯಕ್ಷ ರವಿಶಿವಕುಮಾರ್, ರಾಜ್ಯ ಮಾನವ ಹಕ್ಕುಗಳ ಹೋರಾಟ ಸಮಿತಿಯ ಅಧ್ಯಕ್ಷ ಕರ್ತೇನಹಳ್ಳಿ ಸುರೇಶ್, ರಾಜ್ಯ ಎಸ್.ಟಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಅಗ್ರಹಾರಬಾಚಹಳ್ಳಿ ಜಗಧೀಶ್, ತಾಲ್ಲೂಕು ಕಾರ್ಯದರ್ಶಿ ಭಾರತಿಪುರ ಪುಟ್ಟಣ್ಣ, ಮೀನಾಕ್ಷಿ ಪುಟ್ಟರಾಜು, ಸಾರಂಗಿ ಮಂಜುನಾಥಗೌಡ, ಮಂಡ್ಯ ನಾಗೇಶ್, ಸಂತೇಬಾಚಹಳ್ಳಿ ಮರೀಗೌಡ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.