ಮಂಡ್ಯ ಉಸ್ತುವಾರಿ ವಹಿಸಲು ಸಚಿವರ ಹಿಂದೇಟು


Team Udayavani, Feb 20, 2023, 1:35 PM IST

ಮಂಡ್ಯ ಉಸ್ತುವಾರಿ ವಹಿಸಲು ಸಚಿವರ ಹಿಂದೇಟು

ಮಂಡ್ಯ: ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಹೊರಟಿರುವ ಕೇಸರಿ ಪಾಳೆಯದಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ವಹಿಸಿಕೊಳ್ಳಲು ಸಚಿವರು ಹಿಂದೇಟು ಹಾಕುತ್ತಿದ್ದಾರೆ. ಇದು ಬಿಜೆಪಿ ಪಕ್ಷಕ್ಕೂ ಹಾಗೂ ಸರ್ಕಾರಕ್ಕೂ ತಲೆನೋವು ತಂದಿದೆ.

ಹಳೇ ಮೈಸೂರು ಭಾಗದ ಮಂಡ್ಯ ಜಿಲ್ಲೆಯಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲುವ ಗುರಿ ಹಾಕಿಕೊಂಡಿರುವ ಬಿಜೆಪಿ ರಾಜಕೀಯ ರಣತಂತ್ರ ಹೆಣೆಯುತ್ತಿದೆ. ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಂಡ್ಯಕ್ಕೆ ಭೇಟಿ ನೀಡಿ, ರಾಜಕೀಯ ರಣಕಹಳೆ ಮೊಳಗಿಸಿದ್ದಾರೆ. ಅಲ್ಲದೆ, ನಿರಂತರವಾಗಿ ಮಂಡ್ಯ ಜಿಲ್ಲೆಯನ್ನೇ ಟಾರ್ಗೆಟ್‌ ಮಾಡಿಕೊಂಡಿರುವ ಬಿಜೆಪಿ ಪ್ರಮುಖ ಸಮಾವೇಶಗಳನ್ನು ಮಂಡ್ಯದಿಂದಲೇ ಆರಂಭಿಸುತ್ತಿದ್ದಾರೆ. ಆದರೆ, ಮಂಡ್ಯ ಉಸ್ತುವಾರಿ ಸಚಿವ ಸ್ಥಾನ ನೇಮಕ ಕಗ್ಗಂಟಾಗಿ ಪರಿಣಮಿಸಿದೆ.

ಐದು ಬಾರಿ ಬದಲಾವಣೆ: ಕಳೆದ ನಾಲ್ಕು ವರ್ಷಗಳಲ್ಲಿ ಸುಮಾರು 5 ಬಾರಿ ಉಸ್ತುವಾರಿ ಸಚಿವರ ಬದಲಾವಣೆ ಮಾಡಲಾಗಿದೆ. 2019ರಲ್ಲಿ ಅಧಿಕಾರಕ್ಕೆ ಬಂದ ಬಿ.ಎಸ್‌.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಮೊದಲು ಆರ್‌.ಅಶೋಕ್‌ ಉಸ್ತುವಾರಿಯಾಗಿದ್ದರು. ನಂತರ 2020ರ ಕೆ.ಆರ್‌.ಪೇಟೆ ಉಪ ಚುನಾವಣೆಯಲ್ಲಿ ಗೆದ್ದ ಕೆ.ಸಿ.ನಾರಾಯಣಗೌಡರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಲಾಯಿತು. ನಂತರ ಬಂದ ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದಲ್ಲೂ ಕೆಲಕಾಲ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ನಾರಾಯಣಗೌಡ ಕಾರ್ಯನಿರ್ವಹಿಸಿದರು.

ನಂತರ 2021ರಲ್ಲಿ ಮತ್ತೆ ಕೆ.ಸಿ.ನಾರಾಯಣ ಗೌಡರನ್ನು ಬದಲಾಯಿಸಿ ಅಬಕಾರಿ ಸಚಿವ ಕೆ. ಗೋಪಾಲಯ್ಯಗೆ ಹಾಸನದ ಜತೆಗೆ ಮಂಡ್ಯ ಜಿಲ್ಲೆಯ ಹೆಚ್ಚುವರಿ ನೀಡಲಾಯಿತು. ಇದೀಗ 2023ರ ಜನವರಿ ಯಲ್ಲಿ ಕೆ.ಗೋಪಾಲಯ್ಯ ಅವರನ್ನು ಬದಲಾಯಿಸಿ ಮತ್ತೆ ಆರ್‌.ಅಶೋಕ್‌ಗೆ ನೀಡಲಾಯಿತು.

ವಿಮುಕ್ತಿಗೊಳಿಸಿ ಎಂದ ಅಶೋಕ್‌: ಆರ್‌.ಅಶೋಕ್‌ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡುತ್ತಿದ್ದಂತೆ ಜಿಲ್ಲಾ ಬಿಜೆಪಿ ಪಾಳೇಯದಲ್ಲಿ ಅಸಮಾಧಾನ ಭುಗಿಲೆದ್ದಿತು. ಆರ್‌.ಅಶೋಕ್‌ ವಿರುದ್ಧ ಸ್ವಪಕ್ಷದ ಕಾರ್ಯಕರ್ತರೇ ರಾತ್ರೋರಾತ್ರಿ ಗೋಬ್ಯಾಕ್‌ ಅಶೋಕ್‌, ಬಾಯ್ಕಟ್‌ ಅಶೋಕ್‌ ಎಂಬ ಗೋಡೆ ಬರಹ, ಪೋಸ್ಟರ್‌ಗಳು ಹರಿದಾಡಿದವು. ಸಚಿವ ಆರ್‌. ಅಶೋಕ್‌ ಜೆಡಿಎಸ್‌ ಜೊತೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಬಿಜೆಪಿ ಬೆಳೆಯಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದವು.

ಇದರಿಂದ ಬೇಸರಗೊಂಡಿರುವ ಆರ್‌.ಅಶೋಕ್‌, ಜವಾಬ್ದಾರಿ ಹೆಚ್ಚಿರುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ವಿಮುಕ್ತಿಗೊಳಿಸುವಂತೆ ಸಿಎಂಗೆ ಪತ್ರ ಬರೆದಿದ್ದರು.

ಚುನಾವಣೆ ಸೋಲಿಗೆ ನಾರಾಯಣಗೌಡ ಬದಲಾವಣೆ: ಕಳೆದ ಬಾರಿ ನಡೆದ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹೀನಾಯವಾಗಿ ಸೋತ ಹಿನ್ನೆಲೆಯಲ್ಲಿ ದಿಢೀರನೆ ಸರ್ಕಾರ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ಕೆ.ಸಿ.ನಾರಾಯಣಗೌಡರನ್ನು ಬದಲಾವಣೆ ಮಾಡಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಾಯಿತು. ಚುನಾವಣೆಯಲ್ಲಿ ಸಚಿವ ಕೆ.ಸಿ. ನಾರಾಯಣಗೌಡ, ಕಾಂಗ್ರೆಸ್‌ ಜತೆ ಹೊಂದಾಣಿಕೆ ಮಾಡಿಕೊಂಡ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲಿಗೆ ಕಾರಣವಾಯಿತು ಎಂಬ ಆರೋಪಗಳು ಕೇಳಿ ಬಂದಿದ್ದವು.

ದಿಢೀರನೆ ಗೋಪಾಲಯ್ಯ ಬದಲಾವಣೆ: ಕಳೆದ ಆರು ತಿಂಗಳಿನಿಂದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಕೆ.ಗೋಪಾಲಯ್ಯ ಅವರನ್ನು ಕಳೆದ ಜನವರಿಯಲ್ಲಿ ದಿಢೀರ್‌ ಬದಲಾವಣೆ ಮಾಡಲಾಯಿತು. ಹಳೇ ಮೈಸೂರು ಭಾಗದ ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ಸ್ಥಾನ ಗಳಿಸಬೇಕು ಎಂಬ ಹಿನ್ನೆಲೆಯಲ್ಲಿ 2022ರ ಡಿಸೆಂಬರ್‌ನ ಕೊನೇ ವಾರದಲ್ಲಿ ಅಮಿತ್‌ ಶಾ ಜಿಲ್ಲೆಗೆ ಭೇಟಿ ನೀಡಿದ ಒಂದೇ ತಿಂಗಳಲ್ಲಿ ಉಸ್ತುವಾರಿ ಬದಲಾಯಿಸಲಾಗಿತ್ತು. ಆ ಜಾಗಕ್ಕೆ ಹಾಗೂ ಪಕ್ಷ ಸಂಘಟನೆಗಾಗಿಯೇ ಆರ್‌.ಅಶೋಕ್‌ ಅವರನ್ನು ಮತ್ತೆ ನೇಮಕ ಮಾಡಲಾಯಿತು. ಆದರೆ, ಅದೂ ಫಲಿಸದಂತಾಗಿದೆ.

ಜವಾಬ್ದಾರಿ ಯಾರ ಹೆಗಲಿಗೆ? : ಚುನಾವಣೆ ಹತ್ತಿರವಾಗುತ್ತಿರುವುದರಿಂದ ಮಂಡ್ಯದಲ್ಲಿ ಕೇಸರಿ ಬಾವುಟ ಹಾರಿಸಲು ಮುಂದಾಗಿರುವ ಬಿಜೆಪಿ ಸಮರ್ಥ ಸಚಿವರನ್ನೇ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡುವ ಅನಿವಾರ್ಯತೆ ಎದುರಾಗಿದೆ. ಈಗಾಗಲೇ ಸಚಿವರಾದ ಆರ್‌.ಅಶೋಕ್‌, ಕೆ.ಸಿ.ನಾರಾಯಣಗೌಡ ಬೇಡ ಎಂದಿದ್ದಾರೆ. ಉಳಿದಿರುವುದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವಶ§ನಾರಾಯಣ ಹಾಗೂ ಕೆ.ಗೋಪಾಲಯ್ಯ ಅವರಿಗೆ ನೀಡಬೇಕಾಗಿದೆ. ಇಲ್ಲದಿದ್ದರೆ ಬೇರೆ ಸಚಿವರಿಗೆ ಜವಾಬ್ದಾರಿ ನೀಡಬೇಕಾಗಿದೆ. ಒಟ್ಟಾರೆ ಯಾರು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಲಿದ್ದಾರೆ ಕಾದು ನೋಡಬೇಕು.

ಬೇಸತ್ತು ಉಸ್ತುವಾರಿ ಬೇಡ ಎಂದ ಸಚಿವ ನಾರಾಯಣಗೌಡ : ಮೂರು ತಿಂಗಳಿಗೊಮ್ಮೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗುತ್ತಿದೆ. ಆದ್ದರಿಂದ ನನಗೆ ಸದ್ಯಕ್ಕೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬೇಡ. ಅಲ್ಲದೆ, ನನಗೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ನೀಡಿರುವುದರಿಂದ ಅಲ್ಲಿ ಸಾಕಷ್ಟು ಕೆಲಸಗಳನ್ನು ಮಾಡುತ್ತಿದ್ದೇನೆ. ಅಲ್ಲಿಯೂ ಅರ್ಧ ಕೆಲಸ, ಇಲ್ಲಿಯೂ ಅರ್ಧ ಕೆಲಸವಾಗಲಿದೆ. ಇದರಿಂದ ಯಾವ ಕೆಲಸಗಳನ್ನು ಪೂರ್ಣಗೊಳಿಸಲು ಸಾಧ್ಯವಿಲ್ಲ. ಆದ್ದರಿಂದ ನನಗೆ ಮಂಡ್ಯ ಉಸ್ತುವಾರಿ ಬೇಡ. ಯಾರೇ ಬಂದರೂ ಅವರಿಗೆ ಸಹಕಾರ ನೀಡುವೆ ಎಂದು ಸಚಿವ ಕೆ.ಸಿ.ನಾರಾಯಣಗೌಡ ಹೇಳಿದ್ದಾರೆ.

ಸಿಎಂ ನಿರ್ಧರಿಸಲಿ ಎಂದ ಸಚಿವ ಡಾ.ಅಶ್ವತ್ಥನಾರಾಯಣ : ಇತ್ತೀಚೆಗೆ ಸಾತನೂರಿನ ಕಂಬದ ನರಸಿಂಹಸ್ವಾಮಿ ದೇವಾಲಯ ಆವರಣದಲ್ಲಿ ನಡೆದ ಮಹಾಶಕ್ತಿ ಕೇಂದ್ರದ ಸಮಾವೇಶದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಅವರು, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡುವುದು ಸಿಎಂಗೆ ಬಿಟ್ಟ ವಿಚಾರ. ಅವರಿಗೆ ಅಧಿಕಾರವಿದೆ. ಯಾರಿಗೆ ಬೇಕಾದರೂ ಕೊಡಬಹುದು. ನನಗೆ ರಾಮನಗರದಲ್ಲಿ ರಾಮದೇವರ ಬೆಟ್ಟ ಅಭಿವೃದ್ಧಿಪಡಿಸುವ ಜವಾಬ್ದಾರಿ ಇದೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಉಸ್ತುವಾರಿ ವಹಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ.

– ಎಚ್‌.ಶಿವರಾಜು

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

2047ಕ್ಕೆ ವಿಕಸಿತ ಭಾರತ ನಿರ್ಮಾಣ: ಉಪರಾಷ್ಟ್ರಪತಿ

Vice President: 2047ಕ್ಕೆ ವಿಕಸಿತ ಭಾರತ ನಿರ್ಮಾಣ: ಜಗದೀಪ್‌ ಧನಕರ್‌

20-mandya

Mahadevapura: ಲಿಫ್ಟ್ ಗುಂಡಿಗೆ ಬಿದ್ದ ಬಾಲಕ ಸಾವು

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya1

Mandya: ಸಾಹಿತ್ಯ ಸಮ್ಮೇಳನ ಸಂಭ್ರಮಕ್ಕೆ ಕೊರತೆಯಾಗದಂತೆ ಮಿತಿಯಲ್ಲಿ ಖರ್ಚು ಮಾಡಿ: ಸಚಿವ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.