ನಾಳೆ 9 ಕೋಟಿ ರೈತರ ಖಾತೆಗೆ ಹಣ ಜಮೆ


Team Udayavani, Dec 24, 2020, 2:05 PM IST

ನಾಳೆ 9 ಕೋಟಿ ರೈತರ ಖಾತೆಗೆ ಹಣ ಜಮೆ

ಮಂಡ್ಯ: ಬಿಜೆಪಿ ವತಿಯಿಂದ ಡಿ.25ರಂದು ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ರಾಜ್ಯದ್ಯಂತ ಕಿಸಾನ್‌ ಸಮ್ಮಾನ್‌ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ದೇಶದ 9 ಕೋಟಿ ರೈತ ಬಾಂಧವರಿಗೆ ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿಯಲ್ಲಿ 18 ಸಾವಿರಕೋಟಿ ರೂ. ನೇರವಾಗಿ ರೈತರ ಬ್ಯಾಂಕ್‌ ಖಾತೆಗಳಿಗೆಮಧ್ಯಾಹ್ನ 11.45ರಲ್ಲಿ ವರ್ಗಾಯಿಸಿ, ನಂತರ 12ಕ್ಕೆರೈತರನ್ನು ಉದ್ದೇಶಿಸಿ ಮಾತನಾಡಲಿದ್ದು, ಎಲ್ಲ ದೃಶ್ಯ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ನೇರ ಪ್ರಸಾರವಾಗಲಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ನೇರ ಪ್ರಸಾ ರವೀಕ್ಷಣೆ : ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಯುತ್ತಿರುವುದರಿಂದ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಲ್ಲ ಜಿಲ್ಲೆ, ಮಂಡಲ,ಎಪಿಎಂಸಿ, ಸಹಕಾರ ಸಂಘ-ಸಂಸ್ಥೆಗಳು ಹಾಗೂ ಶಕ್ತಿ ಕೇಂದ್ರಗಳಲ್ಲಿ ಬಿಜೆಪಿಯ ಪದಾಧಿಕಾರಿಗಳು ರೈತರನ್ನುಆಹ್ವಾನಿಸಿ,ಅಟಲ್‌ಜೀಅವರಭಾವಚಿತ್ರಕ್ಕೆಪುಷ್ಪಾರ್ಚನೆಮಾಡಿ, ಪ್ರಧಾನ ಮಂತ್ರಿಗಳ ಭಾಷಣದ ನೇರ ಪ್ರಸಾರ ವೀಕ್ಷಣೆ ಮಾಡಲಿದ್ದಾರೆ ಎಂದರು.

ಇದಕ್ಕೂ1 ಗಂಟೆ ಮುಂಚಿತವಾಗಿ ಚುನಾಯಿತ ಪ್ರತಿ ನಿಧಿಗಳು ಹಾಗೂ ಪದಾಧಿಕಾರಿಗಳು ರೈತ ಸಭೆಗಳನ್ನುಆಯೋಜಿಸಿ, ಕೇಂದ್ರ ಸರ್ಕಾರ ಕೃಷಿ ಕಲ್ಯಾಣಕ್ಕಾಗಿಹಾಗೂ ರೈತಆರ್ಥಿಕ ಸಬಲೀಕರಣಕ್ಕಾಗಿ ತೆಗೆದುಕೊಂಡಿರುವ ಕೃಷಿ ಸುಧಾರಣಾ ನೀತಿ, ರೈತಪರಯೋಜನೆಗಳಬಗ್ಗೆ ಜಾಗೃತಿ ಮೂಡಿಸಲಿದ್ದಾರೆ ಎಂದು ಹೇಳಿದರು.

ವಿವಿಧ ಯೋಜನೆ ಜಾರಿ: ಕೇಂದ್ರ ಸರ್ಕಾರ ರೈತರಿಗಾಗಿ ಬೇವು ಲೇಪಿತ ಯೂರಿಯಾ, ಬೀಜ್‌-ಸೆ-ಬಜಾರ್‌ ತಕ್‌’, 2022ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸುವ ಯೋಜನೆ, ಕಿಸಾನ್‌ ಕಾರ್ಡ್‌ಗಳ ವಿತರಣೆ, ರಸ ಗೊಬ್ಬರ ಉತ್ಪಾದನೆಯಲ್ಲಿ ಸ್ವಾವಲಂಬನೆ, ಮಣ್ಣಿನ ಫಲವತ್ತತೆ ಕಾರ್ಡ್‌ ವಿತರಣೆ, ಅಟಲ್‌ ಪೆನÒನ್‌ಯೋಜನೆ, ಪ್ರಧಾನಮಂತ್ರಿ ಫಸಲ್‌ ಬಿಮಾ ಯೋಜನೆ,ರೈತರ ಪಂಪ್‌ಸೆಟ್‌ಗಳಿಗೆ ಸೋಲಾರ್‌ ವಿದ್ಯುತ್‌ ಜೋಡಣೆ,ಆತ್ಮನಿರ್ಭರ ಭಾರ ತಯೋಜನೆಯಡಿಯಲ್ಲಿ 1 ಲಕ್ಷ ಕೋಟಿ ಮೊತ್ತ ಕೃಷಿ ಸೌಲಭ್ಯಕ್ಕಾಗಿ ಮೀಸಲು,ಕಬ್ಬು ಬೆಳೆಗಾರರಿಗೆ ಸಬ್ಸಿಡಿ ಹಣ, ಪಶು ಸಂಗೋಪನಾ ಮೂಲಸೌಕರ್ಯನಿ, ಎಣ್ಣೆಕಾಳುಗಳ ಎಂಎಸ್‌ಪಿಯಲ್ಲಿಶೇ.59ರಷ್ಟು ಹೆಚcಳ ‌, ಭತ ¤ ಮñು¤ ‌ ಗೋದಿ ಎಂಎಸ್‌ ಪಿಯಲ್ಲಿ ಹೆಚ್ಚಳ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ವಿವರಿಸಿದರು.ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜೆ.

ವಿಜಯ್‌ ಕುಮಾರ್‌, ರೈತ ಮೋರ್ಚಾದ ರಾಜ್ಯ  ಉಪಾಧ್ಯಕ್ಷಕೆ.ಎಸ್‌.ನಂಜುಂಡೇಗೌಡ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜೋಗಿಗೌಡ, ಜಿಲ್ಲಾ ವಕ್ತಾರ ಕೆ.ಕಾಳೇಗೌಡ,ಮಾಧ್ಯಮ ಪ್ರಮುಖ್‌ ಎಂ.ಕೆ.ನಾಗಾನಂದ್‌ ಹಾಜರಿದ್ದರು.

ರೈತರ ಹೋರಾಟ ದಾರಿ ತಪ್ಪಿದೆ :  ದೆಹಲಿಯಲ್ಲಿ ನಡೆಯುತ್ತಿರುವ ಹೋರಾಟ ರೈತರಹೋರಾಟವಲ್ಲ. ರೈತರ ಹೋರಾಟ ದಾರಿ ತಪ್ಪಿದ್ದು, ಎಪಿಎಂಸಿ ಹಾಗೂ ಭೂ ಸುಧಾರಣೆ ಕಾಯ್ದೆಯಿಂದ ದಲ್ಲಾಳಿಗಳಿಗೆ ನಷ್ಟವಾಗಲಿದೆ. ಆ ದೃಷ್ಟಿಯಿಂದ ರೈತರನ್ನು ಎತ್ತಿಕಟ್ಟಿ ಹೋರಾಟ ಮಾಡಲಾಗುತ್ತಿದೆ.ಹೋರಾಟ ದಾರಿ ತಪ್ಪುತ್ತಿರುವ ಬಗ್ಗೆ ಅಲ್ಲಿನ ರೈತರೇ ಹೇಳಿದ್ದಾರೆ.ಕೇಂದ್ರದ ಮಂತ್ರಿಗಳು ಹಲವಾರು ಬಾರಿ ಮಾತುಕತೆ ನಡೆಸಿದ್ದರೂ ಪ್ರಯೋಜನವಾಗಿಲ್ಲ. ಕಾಯ್ದೆಗಳಿಗೆ ತಿದ್ದುಪಡಿ ತರುತ್ತೇವೆ ಎಂದರೂ ಕೇಳುತ್ತಿಲ್ಲ. ಸಂಪೂರ್ಣ ಕಾಯ್ದೆ ರದ್ದು ಮಾಡುವಂತೆ

ಒತ್ತಾಯಿಸುತ್ತಿದ್ದಾರೆ. ಅಲ್ಲದೆ, ನಕ್ಸಲ್‌ ಪ್ರಕರಣಗಳಿರುವವರನ್ನು ಬಿಡುಗಡೆ ಮಾಡಬೇಕೆಂಬಒತ್ತಾಯವನ್ನೂ ಸೇರಿಸಿದ್ದಾರೆ. ಇದು ರಾಜಕೀಯಪ್ರೇರಿತವಾಗಿದೆ. ಇದನ್ನು ರೈತರ ಹೋರಾಟ ಎಂದುಹೇಗೆ ಹೇಳಲು ಸಾಧ್ಯ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಪ್ರಶ್ನಿಸಿದರು.

ಬಿಜೆಪಿ-ಜೆಡಿಎಸ್‌ ವಿಲೀನ ಚರ್ಚೆ ಇಲ್ಲ  :

ಬಿಜೆಪಿ-ಜೆಡಿಎಸ್‌ ವಿಲೀನಗೊಳ್ಳಲಿವೆ ಎಂಬ ಸುದ್ದಿ ಗಳು ಸುಳ್ಳು. ಆ ರೀತಿಯ ಯಾವುದೇ ಚರ್ಚೆಗಳು ನಡೆದಿಲ್ಲ. ವಿಷಯಾಧಾರಿತ ಬೆಂಬಲ ನೀಡಲಾಗುವುದು ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರ ಸ್ವಾಮಿ ಅವರೇ ಸ್ಪಷ್ಟಪಡಿಸಿದ್ದಾರೆ. ಇದು ಅನಗತ್ಯ ಎಂದು ಅಶ್ವತ್ಥನಾರಾಯಣಹೇಳಿದರು.

ಸಚಿವರನ್ನು ಕೇಳಿ: ಕೋವಿಡ್ ಸಂದರ್ಭದಲ್ಲಿ ರೇಷ್ಮೆ ಬೆಳೆಗಾರರಿಗೆಕೆ.ಜಿ. ರೇಷ್ಮೆಗೂಡಿಗೆ 50 ರೂ. ಪ್ರೋತ್ಸಾಹ ಧನ ನೀಡುತ್ತೇವೆ ಎಂದು ಹೇಳಿದ್ದರು. ಆದರೆ, ಇದುವರೆಗೂ ಜಿಲ್ಲೆಯ ಯಾವೊಬ್ಬ ರೈತರಿಗೂ ಹಣ ಬಂದಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅದರ ಬಗ್ಗೆ ನನಗೆ ಮಾಹಿತಿ ಇಲ್ಲ. ನೀವು ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವಕೆ .ಸಿ.ನಾರಾಯಣಗೌಡರನ್ನೇ ಕೇಳಬೇಕು ಎಂದು ಜಾರಿಕೊಂಡರು.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

14

Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ

Suicide 3

Maddur; ಕೆಲಸದ ಒತ್ತಡ: ಎಂಜಿನಿಯರ್‌ ಆತ್ಮಹ*ತ್ಯೆ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.