ಕೆ.ಆರ್.ಪೇಟೆ ಪುರಸಭೆಗೆ 500 ಮನೆ: ಸಚಿವ
Team Udayavani, Apr 17, 2022, 2:59 PM IST
ಕೆ.ಆರ್.ಪೇಟೆ: ಪಟ್ಟಣದ ಮುಸ್ಲಿಂ ಬ್ಲಾಕ್ ಕಾಲೋನಿಯಲ್ಲಿ ಕರ್ನಾಟಕ ಕೊಳೆಗೇರಿ ಮಂಡಳಿ ವತಿಯಿಂದ 500 ಮನೆಗಳ ನಿರ್ಮಾಣಕ್ಕೆ ಸಚಿವ ನಾರಾಯಣಗೌಡ ಭೂಮಿ ಪೂಜೆ ನೆರವೇರಿಸಿದರು.
ಪ್ರಧಾನಮಂತ್ರಿ ಆವಾಸ್ ಯೋಜನೆಯ ಸರ್ವರಿಗೂ ಸೂರು ಕಾರ್ಯಕ್ರಮದಡಿ ಕೇಂದ್ರ -ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ 6,25,000 ವೆಚ್ಚದಲ್ಲಿ ಮೂರೂವರೆ ಚದರ ವಿಸ್ತೀರ್ಣದ ಮನೆಗಳ ನಿರ್ಮಾಣ ವಸತಿ ರಹಿತ ಬಡಜನ ಯೋಜನೆ ಸದುಪಯೋಗಪಡಿಸಿಕೊಳ್ಳಲು ಮನವಿ ಮಾಡಿದರು.
ಸರ್ವರಿಗೂ ಸೂರು: ರಾಜ್ಯದಲ್ಲಿ ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿ ಆಶ್ರಯದಲ್ಲಿ 1.80 ಲಕ್ಷ ಮನೆಗಳು 2022-23ನೇ ಸಾಲಿನಲ್ಲಿ ನಿರ್ಮಾಣ ವಾಗುತ್ತಿದ್ದು ಕೆ.ಆರ್.ಪೇಟೆ ಪಟ್ಟಣದ ಜನತೆಗಾಗಿ 500 ಮನೆ ಮಂಜೂರು ಮಾಡಿಸಲಾಗಿದೆ. ಪಟ್ಟಣದ ಬಡಜನ , ಮಧ್ಯಮ ವರ್ಗದ ಕುಟುಂಬಗಳು ಸರ್ವರಿಗೂ ಸೂರು ಯೋಜನೆ ಸದ್ಬಳಕೆ ಮಾಡಿಕೊಳ್ಳಬೇಕೆಂದರು.
ಸಾಲ ಸೌಲಭ್ಯ: ಪ್ರಧಾನ ಮಂತ್ರಿ ಆವಾಸ್ ಯೋಜನೆ ಸರ್ವರಿಗೂ ಸೂರು ಕಾರ್ಯಕ್ರಮದಡಿ ಕೆ.ಆರ್.ಪೇಟೆ ಪುರಸಭೆಗೆ 31 ಕೋಟಿ ರೂ. ವೆಚ್ಚದಲ್ಲಿ 500 ಮನೆ ಮಂಜೂರಾಗಿವೆ. 6,25 ಲಕ್ಷ ರೂ. ವೆಚ್ಚದ ಮೂರೂವರೆ ಚದರ ವಿಸ್ತೀರ್ಣದ ಮನೆ ಪಡೆಯಲು ಪ್ರತೀ ಫಲಾನುಭವಿ ಯೋಜನೆ ವೆಚ್ಚದ ಶೇ.10ರಷ್ಟು ಹಣದ ಬಾಬ್ತು 62.500 ರೂ.ಗಳನ್ನು ಕೊಳಗೇರಿ ಅಭಿವೃದ್ಧಿ ಮಂಡಳಿಗೆ ಪಾವತಿಸಬೇಕು. ಪರಿಶಿಷ್ಟ ಜಾತಿ ಹಾಗೂ ವರ್ಗಗಳ ಜನರಿಗೆ 3.50 ಲಕ್ಷ ರೂ. ಸಹಾಯ ಧನ ದೊರೆತರೆ ಇತರೆ ಜನರಿಗೆ 2.70 ಲಕ್ಷ ರೂ. ಸಹಾಯ ಧನ ದೊರೆಯಲಿದೆ. ಬಾಕಿ ಹಣಕ್ಕೆ ರಾಷ್ಟ್ರೀಕೃತ ಬ್ಯಾಂಕುಗಳ ಮೂಲಕ ಸುಲಭವಾಗಿ ಸಾಲ ಸೌಲಭ್ಯ ದೊರೆಯಲಿದೆ ಎಂದು ಪುರಸಭೆ ಅಧ್ಯಕ್ಷೆ ಮಹಾದೇವಿ ನಂಜುಂಡ ಮಾಹಿತಿ ನೀಡಿದರು.
ಪಟ್ಟಣದಲ್ಲಿ ಸ್ವಂತ ಮನೆ ಹೊಂದಿಲ್ಲದ ಜನ ಯೋಜನೆ ಫಲಾನುಭವಿಗಳಾಗಿ ಸ್ವಂತ ಮನೆ ಕನಸನ್ನು ನನಸು ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ.ಶ್ರೀನಿ ವಾಸ್, ಜಿಪಂ ಮಾಜಿ ಉಪಾಧ್ಯಕ್ಷ ಶೀಳನೆರೆ ಅಂಬ ರೀಶ್, ಪುರಸಭೆ ಅಧ್ಯಕ್ಷೆ ಮಹಾದೇವಿ, ಉಪಾಧ್ಯಕ್ಷೆ ಗಾಯತ್ರಿ, ಸದಸ್ಯರಾದ ಶಾಮಿಯಾನ ತಿಮ್ಮೇಗೌಡ, ಕೆ.ಎಸ್.ರಾಜೇಶ್, ಎಚ್.ಆರ್.ಲೋಕೇಶ್, ಶುಭಾ ಗಿರೀಶ್, ಶೋಭಾದಿನೇಶ್, ಮುಖ್ಯಾಧಿಕಾರಿ ಕು ಮಾರ್, ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿ ಕಾರ್ಯಪಾಲಕ ಎಂಜಿನಿಯರ್ ಜಿ.ಹರೀಶ್, ಎಇಇ ಬೋರಯ್ಯ, ಸಹಾಯಕ ಎಂಜಿನಿ ಯರ್ ನಂದೀಶ್, ಪುರಸಭೆ ಸಹಾಯಕ ಎಂಜಿನಿ ಯರ್ ಮಧುಸೂದನ್, ಪರಿಸರ ಎಂಜಿನಿಯರ್ ಅರ್ಚನಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.