ಮೈಷುಗರ್‌: 7 ವರ್ಷದ ಆಡಿಟ್‌ನೊಂದಿಗೆ ಸಭೆ ನಡೆಸಿ

Team Udayavani, Oct 31, 2022, 4:15 PM IST

ಮೈಷುಗರ್‌: 7 ವರ್ಷದ ಆಡಿಟ್‌ನೊಂದಿಗೆ ಸಭೆ ನಡೆಸಿ

ಮಂಡ್ಯ: ಮೈಷುಗರ್‌ ಕಾರ್ಖಾನೆಯ 2014- 15ನೇ ಸಾಲಿನ 81ನೇ ವಾರ್ಷಿಕ ಷೇರುದಾರರ ಆನ್‌ಲೈನ್‌ ಸಭೆಯನ್ನು ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ವ್ಯವಸ್ಥಾಪಕ ನಿರ್ದೇಶಕರು ಕರೆದಿರುವುದನ್ನು ರದ್ದುಪಡಿಸಿ ಮೌಖೀಕ, ಭೌತಿಕ ಸಭೆ ನಡೆಸಬೇಕು ಎಂದು ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಒತ್ತಾಯಿಸಿದೆ.

ನಗರದ ಪ್ರವಾಸಿ ಮಂದಿರದಲ್ಲಿ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರ ಸಭೆ ನಡೆಸಲಾಯಿತು.

ನಿರ್ಣಯ: ವಿಧಾನ ಪರಿಷತ್‌ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಮಾತನಾಡಿ, ಕಳೆದ ವರ್ಷ ಕೊರೊನಾ ಸಂದರ್ಭದಲ್ಲೂ ಆನ್‌ಲೈನ್‌ ಸಭೆ ಕರೆದಾಗಲೇ ನಾವು ವಿರೋಧಿಸಿದ್ದೆವು. ಈ ವರ್ಷ ಯಾವುದೇ ಕೊರೊನಾ ಇಲ್ಲ. ಆದ್ದರಿಂದ ಮೌಖೀಕ, ಭೌತಿಕ ಸಭೆ ಕರೆಯಬೇಕು ಎಂದು ನಿರ್ಣಯಿಸಲಾಗಿದೆ ಎಂದು ತಿಳಿಸಿದರು.

ನ.3ರಂದು ನಿಗದಿಯಾಗಿರುವ ಸಭೆಯ ವಾರ್ಷಿಕ ಮಾಹಿತಿ ಪುಸ್ತಕದ ಆಹ್ವಾನ ಶೇ.95ರಷ್ಟು ಷೇರುದಾರರಿಗೆ ತಲುಪಿಲ್ಲ. ಆಹ್ವಾನ ಪುಸ್ತಕದಲ್ಲಿ ಸಮಗ್ರ ಮಾಹಿತಿ ಮುದ್ರಣವಾಗಿಲ್ಲ. ಆಗಿದ್ದರೂ ಇಂಗ್ಲಿಷ್‌ ಭಾಷೆಯಲ್ಲಿ ಮುದ್ರಣ ಮಾಡಲಾಗಿದೆ. ಭೌತಿಕ ಸಭೆಯನ್ನು ಮಂಡ್ಯದ ಮೈಷುಗರ್‌ ಕಾರ್ಖಾನೆ ಆವರಣದಲ್ಲಿಯೇ ನಡೆಸಬೇಕು. 7 ವರ್ಷದ ಆಡಿಟ್‌ ವರದಿಯೊಂದಿಗೆ ಸಭೆ ಕರೆಯಬೇಕು ಎಂದು ಒತ್ತಾಯಿಸಿದರು.

ಎಚ್ಚರಿಕೆ: ಈಗ ನಿಗದಿ ಮಾಡಿರುವ ಆನ್‌ಲೈನ್‌ ಸಭೆಯನ್ನು ಕೂಡಲೇ ಮುಂದೂಡಬೇಕು. ಈ ಬಗ್ಗೆ ಸಕ್ಕರೆ ಸಚಿವರಿಗೆ, ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕರ ಗಮನಕ್ಕೆ ತರಲಾಗಿದೆ. ಒಂದು ಪಕ್ಷ ಆನ್‌ಲೈನ್‌ ಸಭೆ ನಡೆಸಿದರೆ ಕಂಪನಿ ಆವರಣದಲ್ಲಿಯೇ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು. ಪೂರ್ಣ ಪ್ರಮಾಣದಲ್ಲಿ ಸಕ್ಕರೆ ಕಾರ್ಖಾನೆ ಚಾಲನೆಯಾಗಲು ಕೆಲವು ಲೋಪದೋಷಗಳಿವೆ. ಅವುಗಳನ್ನು ನಿವಾರಿಸಬೇಕು. ಈಗಿರುವ ಕಬ್ಬು ನುರಿಸಲು ಕೋ-ಜನ್‌ ಸಾಮರ್ಥ್ಯವಿಲ್ಲ. ಪರ್ಯಾಯವಾಗಿ 10ರಿಂದ 15 ಮೆಗಾವ್ಯಾಟ್‌ನ ಟರ್ಬೈನ್‌ ಅಳವಡಿಸುವಂತೆ ಈಗಾಗಲೇ ಸರ್ಕಾರಕ್ಕೆ ಎಂಡಿ ಮನವಿ ಮಾಡಿದ್ದಾರೆ.

ಸರ್ಕಾರ ಅನುಷ್ಠಾನಕ್ಕೆ ತರಬೇಕು. ಕಬ್ಬು ವಿಭಾಗ ಪರಿಣಾಮಕಾರಿ ಕೆಲಸ ಮಾಡುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸಬೇಕು. ಅಲ್ಲದೆ, ಕಾರ್ಖಾನೆ ತಾಂತ್ರಿಕ ದೋಷ ಸರಿಪಡಿಸಬೇಕು ಎಂದು ಆಗ್ರಹಿಸಿದರು.

ವಿರೋಧಿಸಿದ್ದೇವೆ: ರೈತ ನಾಯಕಿ ಸುನಂದಜಯರಾಂ ಮಾತನಾಡಿ, ಆನ್‌ಲೈನ್‌ ಸಭೆ ಮೂರ್ಖತನದ ಪರಮಾವಧಿ. ಈ ಬಗ್ಗೆ ಸಕ್ಕರೆ ಮಂತ್ರಿ, ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರದ ಮೂಲಕ ನಮ್ಮ ವಿರೋಧ ವ್ಯಕ್ತಪಡಿಸಿದ್ದೇವೆಂದರು. ಸರ್ಕಾರ ಘೋಷಣೆ ಮಾಡಿರುವಂತೆ 50 ಕೋಟಿ ರೂ. ಅನುದಾನ ಕಾರ್ಖಾನೆಗೆ ಇನ್ನೂ ಬಿಡುಗಡೆಯಾಗಿಲ್ಲ. ಜತೆಗೆ ಹೆಚ್ಚುವರಿ ಖರ್ಚು ವೆಚ್ಚ ಭರಿಸಲು ಹಣ ಬಿಡುಗಡೆ ಮಾಡಬೇಕು. ಆಗ ಮಾತ್ರ ಕಾರ್ಖಾನೆ ಲಾಭದಾಯಕವಾಗಿ ನಡೆಯಲು ಸಾಧ್ಯ. ಅಲ್ಲದೆ, ರೈತರ ಕಬ್ಬನ್ನು ಸಂಪೂರ್ಣವಾಗಿ ಅರೆಯಲು ಸಾಧ್ಯ. ನಮ್ಮ ಹೋರಾಟಕ್ಕೆ ಎಲ್ಲ ಸಂಘಟನೆಗಳು ಹಾಗೂ ರೈತ ಬಾಂಧವರು ಕೈಜೋಡಿಸುವ ಮೂಲಕ ಸರ್ಕಾರದ ಮೇಲೆ ಒತ್ತಡ ಹಾಕಬೇಕಾಗಿದೆ ಎಂದು ತಿಳಿಸಿದರು.

ರೈತಸಂಘ (ಮೂಲ ಸಂಘಟನೆ)ದ ಜಿಲ್ಲಾಧ್ಯಕ್ಷ ಇಂಡುವಾಳು ಚಂದ್ರಶೇಖರ್‌, ಮುಖಂಡರಾದ ಕೆ.ಬೋರಯ್ಯ, ಕೆ.ಎಸ್‌.ಸುಧಿಧೀರ್‌ಕುಮಾರ್‌, ಕೃಷ್ಣಪ್ರಕಾಶ್‌, ಮುದ್ದೇಗೌಡ, ಕನ್ನಡ ಸೇನೆ ಮಂಜುನಾಥ್‌, ಸಿಐಟಿಯು ಸಿ.ಕುಮಾರಿ ಮತ್ತಿತರರಿದ್ದರು.

ಟಾಪ್ ನ್ಯೂಸ್

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

2047ಕ್ಕೆ ವಿಕಸಿತ ಭಾರತ ನಿರ್ಮಾಣ: ಉಪರಾಷ್ಟ್ರಪತಿ

Vice President: 2047ಕ್ಕೆ ವಿಕಸಿತ ಭಾರತ ನಿರ್ಮಾಣ: ಜಗದೀಪ್‌ ಧನಕರ್‌

20-mandya

Mahadevapura: ಲಿಫ್ಟ್ ಗುಂಡಿಗೆ ಬಿದ್ದ ಬಾಲಕ ಸಾವು

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya1

Mandya: ಸಾಹಿತ್ಯ ಸಮ್ಮೇಳನ ಸಂಭ್ರಮಕ್ಕೆ ಕೊರತೆಯಾಗದಂತೆ ಮಿತಿಯಲ್ಲಿ ಖರ್ಚು ಮಾಡಿ: ಸಚಿವ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.