ನಾಡ ಕಚೇರಿ ನಿವೇಶನ ಒತ್ತುವರಿ ತೆರವು ಕಾರ್ಯಾಚರಣೆ
Team Udayavani, Dec 13, 2019, 2:33 PM IST
ಭಾರತೀನಗರ: ನಾಡಕಚೇರಿಗೆ ಮಂಜೂರಾಗಿದ್ದ ಸ್ಥಳ ಒತ್ತುವರಿ ತಹಶೀಲ್ದಾರ್ ನಾಗೇಶ್ ಸ್ಥಳದಲ್ಲಿ ಹಾಜರಿದ್ದು ತೆರವುಗೊಳಿಸಿದರು.
ಗ್ರಾಮದ ನಿವಾಸಿ ಲಕ್ಷ್ಮಮ್ಮ ಒತ್ತುವರಿ ಮಾಡಿ ಕೊಂಡಿದ್ದ ಸ್ಥಳದಲ್ಲಿ ಶೌಚಾಲಯ ನಿರ್ಮಿಸಿದ್ದರು. ಬುಧವಾರ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಸ್ಥಳಕ್ಕೆ ಭೇಟಿ ನೀಡಿ ತೆರವುಗೊಳಿಸುವಂತೆ ಉಪ ತಹಶೀಲ್ದಾರ್ ಸೋಮಶೇಖರ್ ಅವರಿಗೆ ಸೂಚನೆ ನೀಡಿದ್ದರು.
ಗುರುವಾರ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ನಾಗೇಶ್ ನೇತೃತ್ವದಲ್ಲಿ ನಾಡಕಚೇರಿ ನಿವೇಶನ ತೆರವು ಗೊಳಿಸಲು ಸರ್ವೆ ನಡೆಸಿ ಗುರುತು ಹಾಕಿ, ತೆರವು ಗೊಳಿಸಿದರು. ನಾಡಕಚೇರಿಗೆ ಮಂಜೂರಾಗಿದ್ದ ಜಾಗ ಗುರುತು ಮಾಡಿ ಸಂಬಂಧ ಪಟ್ಟಿ ಎಂಜಿನಿಯರ್‌ಗೆ ಹಸ್ತಾಂತರಿಸಿ ಕಟ್ಟಡ ನಿರ್ಮಾಣ ಮಾಡುವಂತೆ ತಹಶೀಲ್ದಾರ್ ಸೂಚಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ನಾಗೇಶ್ ಮಾತನಾಡಿ, ಈ ಭಾಗದಲ್ಲಿ ಮೂರೂಕಾಲು ಗುಂಟೆ ಜಾಗವಿತ್ತು. ಅದರಲ್ಲಿ ಒತ್ತುವರಿ ಮಾಡಿಕೊಂಡಿದ್ದ ಒಂದು ಗುಂಟೆ ತೆರವುಗೊಳಿಸಿ ನಾಡಕಚೇರಿ ಕಟ್ಟಡ ನಿರ್ಮಾಣಕ್ಕೆ ಸ್ಥಳ ಗುರುತಿಸಲಾಗಿದೆ. ನಿರ್ಮಿತಿ ಕೇಂದ್ರದವರು ಕೂಡಲೇ ಕಟ್ಟಡ ನಿರ್ಮಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವರು ಎಂದು ತಿಳಿಸಿದರು. ರಾಜಸ್ವ ನಿರೀಕ್ಷಕರಾದ ಮಹೇಶ್, ರಾಜಶೇಖರ್, ಗ್ರಾಮ ಲೆಕ್ಕಾಧಿಕಾರಿಗಳಾದ ರವಿ, ನವೀನ್, ಬೀರೇಶ್, ರುದ್ರೇಶ್, ಸುರೇಶ್, ಸೌಮ್ಯ, ಸಾಸಪ್ಪ, ಗೋವಿಂದಶೆಟ್ಟಿ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್ ಬೆಳ್ಳುಳ್ಳಿ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.