ತನಿಖೆ ಚುರುಕುಗೊಳಿಸಿದ ಸಿಐಡಿ ಅಧಿಕಾರಿಗಳು 


Team Udayavani, Jul 13, 2023, 3:10 PM IST

ತನಿಖೆ ಚುರುಕುಗೊಳಿಸಿದ ಸಿಐಡಿ ಅಧಿಕಾರಿಗಳು 

ಮಂಡ್ಯ: ನಾಗಮಂಗಲ ಸಾರಿಗೆ ನೌಕರ ಚಾಲಕ ಕಂ ನಿರ್ವಾಹಕ ಜಗದೀಶ್‌ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗಮಂಗಲದಲ್ಲಿ ಬೀಡು ಬಿಟ್ಟಿರುವ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಈಗಾಗಲೇ ಚಾಲಕ ಜಗದೀಶ್‌ ಮೈಸೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗ, ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಐಸಿಯುನಿಂದ ವಿಶೇಷ ವಾರ್ಡ್ ಗೆ ಶಿಫ್ಟ್‌ ಮಾಡಲಾಗಿದೆ.

ಹೇಳಿಕೆ ಪಡೆಯಲಿರುವ ಅಧಿಕಾರಿಗಳು: ಚಾಲಕ ಜಗದೀಶ್‌ ಚೇತರಿಕೆ ಹಿನ್ನೆಲೆ ವಾರ್ಡ್‌ಗೆ ಶಿಫ್ಟ್‌ ಮಾಡಲಾಗಿದ್ದು, ಸಿಐಡಿ ಅಧಿಕಾರಿಗಳು ಹೇಳಿಕೆ ಪಡೆಯ ಲಿದ್ದಾರೆ. ಈಗಾಗಲೇ ಜಗದೀಶ್‌ ಕುಟುಂಬಸ್ಥರ ಹೇಳಿಕೆ ಪಡೆದಿರುವ ಅಧಿಕಾರಿಗಳು, ಜಗದೀಶ್‌ ಹೇಳಿಕೆ ಅತ್ಯಂತ ಪ್ರಮುಖವಾಗಿದೆ. ಆದ್ದರಿಂದ ವಿಚಾರಣೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಡೆತ್‌ನೋಟ್‌ ಬಗ್ಗೆಯೂ ವಿಚಾರಣೆ: ಚಾಲಕ ಜಗದೀಶ್‌ ಡೆತ್‌ನೋಟ್‌ ಬರೆದಿದ್ದ ಎನ್ನಲಾಗಿರುವ ಪತ್ರದ ಬಗ್ಗೆಯೂ ಈಗಾಗಲೇ ಸಿಐಡಿ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ತನಿಖೆ ಸಂದರ್ಭದಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕಾರ್ಯಕರ್ತರು ವಿಡಿಯೋ, ಆಡಿಯೋ ಹರಿಬಿಟ್ಟಿರುವ ಹಿನ್ನೆಲೆ ಬಗ್ಗೆಯೂ ಹಾಗೂ ವಿಡಿಯೋ, ಆಡಿಯೋ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.

ಜು.21ರೊಳಗೆ ವರದಿ ಸಲ್ಲಿಸಲು ಚಿಂತನೆ: ಐಡಿ ಐಜಿಪಿ ಪ್ರವೀಣ್‌ ಮಧುಕರ್‌ ಪವಾರ್‌ ನೇತೃತ್ವದಲ್ಲಿ ನಡೆಯುತ್ತಿರುವ ತನಿಖೆ ವರದಿಯನ್ನು ಜು.21ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸುವ ಹಿನ್ನೆಲೆಯಲ್ಲಿ ತೀವ್ರಗತಿ ತನಿಖೆ ನಡೆಯುತ್ತಿದೆ. ಇದರಲ್ಲಿ ಆತ್ಮಹತ್ಯೆ ಯತ್ನ ನಡೆದ ದಿನವೇ ಕೆಎಸ್‌ಆರ್‌ಟಿಸಿ ಘಟಕದ ಅಧಿಕಾರಿ ನೀಡಿದ ಹೇಳಿಕೆ ಬಗ್ಗೆಯೂ ತನಿಖೆ ನಡೆಯುತ್ತಿದೆ.

ಐಜಿಪಿ, ಎಸ್ಪಿಗೆ ಸುರೇಶ್‌ಗೌಡ ದೂರು: ನಾಗಮಂಗಲ ಟೌನ್‌ ಪೊಲೀಸರ ವಿರುದ್ಧ ಮಾಜಿ ಶಾಸಕ ಕೆ.ಸುರೇಶ್‌ಗೌಡ ದೂರು ನೀಡಿದ್ದಾರೆ. ದಕ್ಷಿಣ ವಲಯ ಐಜಿಪಿಗೆ ಹಾಗೂ ಜಿಲ್ಲಾ ಎಸ್ಪಿಗೆ ಲಿಖೀತ ದೂರು ನೀಡಿ ಕ್ರಮಕ್ಕೆ ಆಗ್ರಹಿಸಿದ್ದಾರೆ. ಚಾಲಕ ಜಗದೀಶ್‌ ಅವರನ್ನು ಭೇಟಿ ಮಾಡಿರುವ ಪೊಲೀಸ್‌ ಇಲಾಖೆ ಸುಪರ್ದಿಯಲ್ಲಿರುವ ಸಿಸಿಟಿವಿ ದ್ಯಶ್ಯಾವಳಿಗಳನ್ನು ಖಾಸಗಿ ವ್ಯಕ್ತಿಗಳಿಗೆ ನೀಡುವ ಮೂಲಕ ಗೌರವ ಧಕ್ಕೆ ಉಂಟು ಮಾಡಿ ಕರ್ತವ್ಯ ಲೋಪವೆಸಗಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು. ನಾಗಮಂಗಲ ಟೌನ್‌ ಇನ್ಸ್‌ಪೆಕ್ಟರ್‌ ಹಾಗೂ ಪೊಲೀಸ್‌ ಉಪ ನಿರೀಕ್ಷಕರು ನೀಡಿದ್ದಾರೆ ಎಂದು ಆರೋಪಿಸಿದ್ದು, ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಮೊನ್ನೆ ಕಾಂಗ್ರೆಸ್‌ ಕಾರ್ಯಕರ್ತರು ಮಾಜಿ ಶಾಸಕ ಕೆ.ಸುರೇಶ್‌ಗೌಡ ಹಾಗೂ ಬೆಂಬಲಿಗರು ಚಾಲಕ ಜಗದೀಶ್‌ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್‌ ತಡೆದಿದ್ದಾರೆ ಎನ್ನಲಾದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಅದಾದ ಬಳಿಕ ಜೆಡಿಎಸ್‌ ಕಾರ್ಯಕರ್ತರು ಆಡಿಯೋ ಬಿಡುಗಡೆ ಮಾಡಿ ಆರೋಪ ಮಾಡಿದ್ದರು.

ಜಗದೀಶ್‌ ಆರೋಗ್ಯದಲ್ಲಿ ಚೇತರಿಕೆ: ಪತ್ನಿ ಪಾವನ: ನನ್ನ ಪತಿಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಐಸಿಯುನಿಂದ ವಿಶೇಷ ವಾರ್ಡ್‌ಗೆ ಶಿಫ್ಟ್‌ ಮಾಡಲಾಗಿದೆ ಎಂದು ಪತ್ನಿ ಪಾವನ “ಉದಯವಾಣಿ’ಗೆ ತಿಳಿಸಿದರು. ಚೇತರಿಕೆ ಕಂಡಿರುವ ಜಗದೀಶ್‌ ಅವರು ಸ್ವಲ್ಪ ಮಾತನಾಡು ತ್ತಿದ್ದಾರೆ. ಆದರೆ, ಕಾರಣ ಏನು ಎಂಬುದು ಇನ್ನೂ ನನ್ನ ಬಳಿಯೂ ಹೇಳುತ್ತಿಲ್ಲ. ನಾನೂ ಹೆಚ್ಚೇನೂ ಕೇಳಿಲ್ಲ. ಘಟನೆ ಬಗ್ಗೆ ನಾನು ಏನೂ ಹೇಳಲು ಸಾಧ್ಯವಿಲ್ಲ. ಅವರೇ ಹೇಳಬೇಕು ಎಂದು ತಿಳಿಸಿದರು.

ಟಾಪ್ ನ್ಯೂಸ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

2047ಕ್ಕೆ ವಿಕಸಿತ ಭಾರತ ನಿರ್ಮಾಣ: ಉಪರಾಷ್ಟ್ರಪತಿ

Vice President: 2047ಕ್ಕೆ ವಿಕಸಿತ ಭಾರತ ನಿರ್ಮಾಣ: ಜಗದೀಪ್‌ ಧನಕರ್‌

20-mandya

Mahadevapura: ಲಿಫ್ಟ್ ಗುಂಡಿಗೆ ಬಿದ್ದ ಬಾಲಕ ಸಾವು

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya1

Mandya: ಸಾಹಿತ್ಯ ಸಮ್ಮೇಳನ ಸಂಭ್ರಮಕ್ಕೆ ಕೊರತೆಯಾಗದಂತೆ ಮಿತಿಯಲ್ಲಿ ಖರ್ಚು ಮಾಡಿ: ಸಚಿವ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

9

Bunts Hostel, ಕರಂಗಲ್ಪಾಡಿ ಜಂಕ್ಷನ್‌: ಶಾಶ್ವತ ಡಿವೈಡರ್‌ ನಿರ್ಮಾಣ ಕಾಮಗಾರಿ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.