Valmiki Corporation Scam ನಾಗೇಂದ್ರ, ದದ್ದಲ್ ಹೆಸರು ಏಕಿಲ್ಲ : ವಿಜಯೇಂದ್ರ ಪ್ರಶ್ನೆ
Team Udayavani, Aug 7, 2024, 6:47 AM IST
ಮಂಡ್ಯ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಎಸ್‌ಸಿ, ಎಸ್‌ಟಿ ಸಮುದಾಯದ 187 ಕೋಟಿ ರೂ. ಲೂಟಿ ಹೊಡೆದ ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವನಗೌಡ ದದ್ದಲ್ ಅವರನ್ನು ಹಗರಣದ ಆರೋಪಪಟ್ಟಿಯಿಂದ ಕೈಬಿಟ್ಟಿರು ವುದು ಯಾಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಶ್ನಿಸಿದರು.
ಮದ್ದೂರಿನಲ್ಲಿ ನಡೆದ ಪಾದ ಯಾತ್ರೆಯ ಸಂದರ್ಭದಲ್ಲಿ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರಕಾರ ಭ್ರಷ್ಟರ ರಕ್ಷಣೆಗೆ ನಿಂತಿದೆ. ಕಾಂಗ್ರೆಸ್ ಅಧಿ ಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಿದೆ. ಭ್ರಷ್ಟ ಸಿಎಂ ಸಿದ್ದರಾಮಯ್ಯನವರು ರಾಜೀನಾಮೆ ನೀಡುವವರೆಗೂ ಬಿಜೆಪಿ-ಜೆಡಿಎಸ್ ಹೋರಾಟ ಮುಂದು ವರಿಯಲಿದೆ ಎಂದು ಕಿಡಿಕಾರಿದರು.
ದಲಿತರು, ಪರಿಶಿಷ್ಟ ಜಾತಿ, ಪಂಗಡದ ಹೆಸರು ಹೇಳಿಕೊಂಡು ಸಿಎಂ ಸಿದ್ದರಾಮಯ್ಯ ಈ ವರ್ಗ ಕ್ಕಾಗಿ ಮೀಸಲಿಟ್ಟಿರುವ ಹಣವನ್ನು ಲೂಟಿ ಮಾಡಿದ್ದಾರೆ. ಇಂತಹ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿರಬೇಕೆ? ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ಶಾಸಕ ಬಸವನಗೌಡ ದದ್ದಲ್ ಅವರನ್ನು ಅಪರಾ ಧಿ ಎಂದು ಮಾಡಿದರೆ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ನಂಬರ್ ವನ್ ಅಪರಾಧಿ ಯಾಗುತ್ತಾರೆ. ಅದಕ್ಕಾಗಿ ಚಾರ್ಜ್ ಶೀಟ್‌ನಿಂದ ಕೈಬಿಟ್ಟಿದ್ದಾರೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.