ರಾಷ್ಟ್ರೀಯ ಹೆದ್ದಾರಿಗೆ ನಾಲ್ವಡಿ ಹೆಸರಿಡಿ
Team Udayavani, Dec 25, 2022, 5:09 PM IST
ಮಂಡ್ಯ: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275ಕ್ಕೆ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡುವಂತೆ ವಿಧಾನ ಪರಿಷತ್ ಸದಸ್ಯರಾದ ದಿನೇಶ್‌ಗೂಳಿಗೌಡ, ಮಧು ಜಿ.ಮಾದೇ ಗೌಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಅಖಂಡ ಕರ್ನಾಟಕದ ಅಭ್ಯುದಯಕ್ಕೆ ಶ್ರಮಿಸಿದ ವರಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪಾತ್ರ ಗಣನೀಯ. ಅವರು ಹಾಕಿಕೊಟ್ಟ ದೂರದೃಷ್ಟಿ ಯೋಜನೆಗಳಿಂದ ಇಂದು ನಾವೆಲ್ಲಾ ನಡೆಯುತ್ತಿದ್ದೇವೆ. ಅವರ ಅಂದಿನ ಅದೆಷ್ಟೋ ಕೊಡುಗೆ ಕೋಟ್ಯಂತರ ಜನರಿಗೆ ಲಾಭವಾಗಿದೆ ಎಂದು ತಿಳಿಸಿದ್ದಾರೆ.
ಪರಿಶೀಲಿಸುವ ಭರವಸೆ ನೀಡಿದ ಸಿಎಂ: ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ನಿತಿನ್ ಗಡ್ಕರಿಗೂ ಪತ್ರ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಪತ್ರ ಬರೆದಿರುವ ಅವರು, ಕೃಷ್ಣರಾಜಸಾಗರ ಅಣೆಕಟ್ಟು ಬೆಂಗಳೂರಿಗೆ ಕುಡಿವ ನೀರು, ಶಿವನ ಸಮುದ್ರ ಜಲ ವಿದ್ಯುತ್ ಯೋಜನೆ, ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆ, ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ರಸ್ತೆಬದಿಗೆ ದಾರಿದೀಪ ಅಳವಡಿಕೆ, ಭದ್ರಾವತಿ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ, ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ, ಬಾಲ್ಯ ವಿವಾಹ ನಿಷೇಧ, ಕೆ.ಆರ್.ಆಸ್ಪತ್ರೆ, ಶ್ರೀಗಂಧದ ಎಣ್ಣೆ ಕಾರ್ಖಾನೆ, ಮೈಷುಗರ್ ಕಾರ್ಖಾನೆ ಸೇರಿ ನೂರಾರು ಸಮಾಜಮುಖೀ ಕಾರ್ಯ ಮಾಡುವ ಮೂಲಕ ಮಹತ್ವದ ಯೋಜನೆ ಜಾರಿಗೆ ತಂದಿದ್ದನ್ನು ರಾಷ್ಟ್ರಪಿತ ಮಹಾತ್ಮ ಗಾಂಧೀ ಜಿಯವರೂ ಪ್ರಶಂಸೆ ಮಾಡಿರು ವುದು ಇತಿಹಾಸದ ಪುಟದಲ್ಲಿ ದಾಖಲಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ನಾಲ್ವಡಿ ಒಡೆಯರ್ ಭದ್ರ ಬುನಾದಿ ಹಾಕಿದ್ದಾರೆ: ಶಿಕ್ಷಣ, ಕೃಷಿ, ಕೈಗಾರಿಕೆ, ನೀರಾವರಿ, ಸಾಮಾಜಿಕ, ಶೋಷಿತ, ಬಡವರ ಮತ್ತು ನಿರ್ಗತಿಕರ ಹಾಗೂ ನೂರಾರು ಕೆರೆ ನಿರ್ಮಿಸಿ ಕೃಷಿ ಚಟುವಟಿಕೆಗೆ ನೀರ ನ್ನೊದಗಿಸುವ ಬಗ್ಗೆ ಅಪಾರ ಕಳಕಳಿ ಹೊಂದಿದ್ದರು. ಅವರ ಸಾಧನೆಗಳೇ ಇಂದಿಗೂ ಹೇಳುತ್ತಿವೆ. ಅಂದಿನ ಕಾಲದಲ್ಲೇ ಪ್ರಜಾಪ್ರಭುತ್ವದ ಮಾದರಿಯಲ್ಲೇ ಕಾರ್ಯನಿರ್ವಹಿಸಿ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿಕೊಟ್ಟಿದ್ದಾರೆಂದರು.
ಹೆಸರಿಡಲು ಶಿಫಾರಸು ಮಾಡಲು ಮನವಿ: ಕನ್ನಂಬಾಡಿ ಅಣೆಕಟ್ಟು ನಿರ್ಮಿಸಲು ನಾಲ್ವಡಿ ಅವರು ತಮ್ಮ ಕುಟುಂಬದ ಸ್ವಂತ ಬಂಗಾರ ಮಾರಾಟ ಮಾಡಿ ಹಣ ಹೊಂದಿಸಿ ಕೊಟ್ಟರು. ಇವರ ಅಭಿವೃದ್ಧಿ ದೃಷ್ಟಿಕೋನ ಮತ್ತು ತ್ಯಾಗವನ್ನು ಬೆಂಗಳೂರಿನಿಂದ ಮೈಸೂರಿನವರೆಗೆ ಲಕ್ಷಾಂತರ ಕುಟುಂಬ ಮರೆಯಲಾಗದು. ಅವರ ಆಳ್ವಿಕೆ ಉಜ್ವಲ ಪುಷ್ಪವಾಗಿ ರೈತಾಪಿ ವರ್ಗದ ಮೇಲೆ ಅಪಾರವಾದ ಗೌರವ, ಪ್ರೀತಿ, ವಿಶ್ವಾಸವಿಟ್ಟು ದುಡಿಯುವ ಕೈಗಳ ಪರ ತೀರ್ಮಾನವನ್ನು ನಾಲ್ವಡಿ ಕೃಷ್ಣರಾಜ ಒಡೆಯರ್ ಅಂದಿನ ಕಾಲದಲ್ಲೇ ಮಾಡಿರುವುದು ಯುವ ಪೀಳಿಗೆಗೆ ಮಾದರಿ. ದೇಶದ ಇತಿಹಾಸದಲ್ಲೇ ಇವರ ಆಡಳಿತ ಸುವರ್ಣಾಕ್ಷರದಲ್ಲಿ ಬರೆದಿದೆ. ಇಂತಹ ಆದರ್ಶ ಆಡಳಿತಗಾರರ ಹೆಸರು ಮುಂದಿನ ಪೀಳಿಗೆಗೆ ಶಾಶ್ವತವಾಗಿ ಉಳಿಯಲು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ-275ಕ್ಕೆ ಅವರ ಹೆಸರನ್ನಿಡುವುದು ಈ ಭಾಗದ ಜನರ ಅಭಿಲಾಷೆ. ಆದ್ದರಿಂದ ನಾಲ್ವಡಿ ಅವರ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಮನವಿ ಮಾಡಿದ್ದಾರೆ.
ಸಚಿವರಿಗೂ ಮನವಿ: ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಸಚಿವ ಕೆ.ಸಿ.ನಾರಾಯಣಗೌಡ ಅವರಿಗೂ ಮನವಿ ಮಾಡಿದ್ದಾರೆ. ಇದಕ್ಕೆ ಸ್ಪಂದಿಸಿರುವ ಸಚಿವರಾದ ಕೆ.ಗೋಪಾಲಯ್ಯ ಹಾಗೂ ಕೆ.ಸಿ.ನಾರಾಯಣ ಗೌಡ, ಒಡೆಯರ ಹೆಸರನ್ನು ನಾಮಕರಣ ಮಾಡುವ ಬಗ್ಗೆ ಕೇಂದ್ರ ಸಚಿವರಿಗೆ ಶಿಫಾರಸು ಮಾಡುವಂತೆ ಸಿಎಂಗೆ ಮನವಿ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ
Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.