ಮತದಾರರ ಪಟ್ಟಿಗೆ ಹೆಸರು ನೋಂದಾಯಿಸಿ: ರೂಪಾ
Team Udayavani, Jan 7, 2020, 2:24 PM IST
ಶ್ರೀರಂಗಪಟ್ಟಣ: 18 ವರ್ಷ ತುಂಬಿದ ಯುವಕ/ ಯುವತಿಯರು ಮತದಾರರ ಪಟ್ಟಿಗೆ ತಮ್ಮ ಹೆಸರು ನೋಂದಾಯಿಸಿಕೊಳ್ಳುವಂತೆ ತಹಶೀಲ್ದಾರ್ ರೂಪಾ ಹೇಳಿದರು.
ಶ್ರೀರಂಗನಾಥ ದೇವಾಲಯದ ಮುಂದೆ ಮಿಂಚಿನ ನೋಂದಣಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, 1ನೇ ಜನವರಿ 2020ಕ್ಕೆ 18 ವರ್ಷ ತುಂಬಿದವರು, ಹೊಸದಾಗಿ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿಕೊಳ್ಳುವವರು ಹೆಸರು ನೋಂದಾಯಿಸಿ ಕೊಳ್ಳಬಹುದು. ಜ.6ರಿಂದ 3 ದಿನ ಮಿಂಚಿನ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಶ್ರೀರಂಗಪಟ್ಟಣ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೊತ್ತತ್ತಿ ಹೋಬಳಿ 1,2,3 ಕ್ಕೆ ಒಳಪಡುವ ಮತ್ತು ತಾಲೂಕಿನ ಪ್ರಥಮ ದರ್ಜೆ ಕಾಲೇಜು, ತಾಲೂಕು ಕಚೇರಿ ಮತ್ತು ತಾಲೂಕಿನ ಆಯಾಯ ಬಿಎಲ್‌ಒ ಕೇಂದ್ರಗಳಲ್ಲಿ ನಮೂನೆ-6ರ ಅರ್ಜಿ ಫಾರಂ ಜೊತೆಗೆ ಎಸ್ಸೆಸ್ಸೆಲ್ಸಿ ಅಂಕಪಟ್ಟಿ ನಕಲು, ಇತ್ತೀಚಿನ ಭಾವಚಿತ್ರ, ಆಧಾರ್‌ಕಾರ್ಡ್ ನಕಲು ಹಾಗೂ ಪಡಿತರ ಚೀಟಿ ನಕಲು ಸ್ವೀಕರಿಸಲಾಗುತ್ತದೆ. ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕೋರಿದರು.
ಪಟ್ಟಣದ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು ಜಾಗೃತಿ ಬ್ಯಾನರ್ ಹಿಡಿದು ಪಟ್ಟಣದ ಮುಖ್ಯಬೀದಿ, ಬಸ್ ನಿಲ್ದಾಣಗಳಲ್ಲಿ ಜಾಗೃತಿ ಮೂಡಿಸಿದರು. ತಾಪಂ ಇಒ ನಾಗಲಕ್ಷ್ಮೀ, ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಹಾಗೂ ವಿದ್ಯಾರ್ಥಿಗಳು ಜಾಥಾದಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.