ನರೇಗಾದಡಿ ಉದ್ಯೋಗ ನೀಡಿ ವಲಸೆ ತಪ್ಪಿಸಿ


Team Udayavani, Jan 26, 2019, 9:45 AM IST

krishna.jpg

ಮೈಸೂರು: ಬೇಸಿಗೆ ತೀವ್ರವಾದಂತೆ ಮೈಸೂರು ಮತ್ತು ಚಾಮರಾಜ ನಗರ ಜಿಲ್ಲೆಗಳ ನಗರ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದ್ದು, ಈ ಬಗ್ಗೆ ಜಾಗೃತೆವಹಿಸಿ, ಎರಡೂ ಜಿಲ್ಲೆಗಳಲ್ಲಿ ನರೇಗಾ ಕಾರ್ಯಕ್ರಮದಲ್ಲಿ ಹೆಚ್ಚು ಅನುದಾನ ಬಳಸಿಕೊಂಡು ಜನರಿಗೆ ಉದ್ಯೋಗ ನೀಡುವ ಮೂಲಕ ವಲಸೆ ಹೋಗುವುದನ್ನು ತಪ್ಪಿಸಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು.

ಮೈಸೂರು ಜಿಪಂ ಸಭಾಂಗಣದಲ್ಲಿ ಶುಕ್ರವಾರ ಎರಡೂ ಜಿಲ್ಲೆಗಳ ಬರ ಪರಿಸ್ಥಿತಿ ಕುರಿತು ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಿದರು. ರಾಜ್ಯದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಮೈಸೂರು ಮತ್ತು ಚಾಮರಾಜ ನಗರ ಜಿಲ್ಲೆಗಳಲ್ಲಿ ಸದ್ಯಕ್ಕೆ ಬರ ಮತ್ತು ಕುಡಿಯುವ ನೀರಿಗೆ ಅಂತಹ ಸಮಸ್ಯೆ ಇಲ್ಲ. ಆದರೆ, ನರೇಗಾ ಕಾರ್ಯಕ್ರಮದಲ್ಲಿ ಎರಡೂ ಜಿಲ್ಲೆಗಳಲ್ಲಿ ಮಾನವ ದಿನಗಳ ಸೃಜನೆ ತೃಪ್ತಿಕರವಾಗಿಲ್ಲ. ಹೆಚ್ಚು ಹಣ ಬಳಸಿಕೊಳ್ಳುವ ಅವಕಾಶವಿದೆ. ಇದರ ಸದುಪಯೋಗಪಡೆದುಕೊಂಡು ಬಡಜನರಿಗೆ ಉದ್ಯೋಗ ಒದಗಿಸಿಕೊಡಿ ಎಂದು ಸೂಚಿಸಿದರು.

50 ಲಕ್ಷ ರೂ.ಬಿಡುಗಡೆ: ಹಿಂಗಾರು ಹಂಗಾಮಿನಲ್ಲಿ ಬರ ಘೋಷಣೆ ಮಾಡಿರುವ ಮೊದಲ ಹಂತದ 100 ತಾಲೂಕುಗಳಿಗೆ ಎರಡು ಕಂತುಗಳಲ್ಲಿ ತಲಾ 50 ಲಕ್ಷ ರೂ. ಬಿಡುಗಡೆ ಮಾಡಿದೆ. ಅದರಂತೆ ಚಾಮರಾಜ ನಗರ ಜಿಲ್ಲೆಯ ಯಳಂದೂರು ಮತ್ತು ಕೊಳ್ಳೇಗಾಲ ತಾಲೂಕುಗಳಿಗೆ ಎರಡು ಕಂತುಗಳಲ್ಲಿ 50 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ.

ಮುಂಗಾರು ಹಂಗಾಮಿನ ಬರ ಘೋಷಣೆ ಮಾಡಿದ ತಾಲೂಕುಗಳಿಗೆ ತಲಾ 1 ಕೋಟಿ ರೂ. ನೀಡಲಾಗಿದೆ. ಬರ ಘೋಷಣೆಯಾಗದ ತಾಲೂಕುಗಳಿಗೆ 25 ಲಕ್ಷ ರೂ. ಬಿಡುಗಡೆ ಮಾಡಿದೆ ಎಂದರು. ಚಾಮರಾಜ ನಗರ ಜಿಲ್ಲೆಯಲ್ಲಿ ನರೇಗಾದಡಿ 29 ಸಾವಿರ ಜನರಿಗೆ ಉದ್ಯೋಗ ನೀಡಿ, 16 ಲಕ್ಷ ಮಾನವ ದಿನ ಸೃಜಿಸಲಾಗಿದೆ. ಬರದ ಕಾರಣಕ್ಕೆ ಹೆಚ್ಚುವರಿಯಾಗಿ 3.50 ಲಕ್ಷ ಮಾನವ ದಿನಗಳನ್ನು ಕೊಡಲಾಗಿದ್ದು, ಅದನ್ನು ಬಳಸಿಕೊಳ್ಳಿ. ಜನರು ವಲಸೆ ಹೋಗಲು ಬಿಡಬೇಡಿ ಎಂದು ತಾಕೀತು ಮಾಡಿದರು.

2 ಕೋಟಿ ರೂ.: ನರೇಗಾದಲ್ಲಿ ಸಮುದಾಯ ಆಧಾರಿತ ಕೆಲಸಗಳನ್ನು ಹೆಚ್ಚು ಮಾಡಿ, ಚಾಮರಾಜ ನಗರ ಜಿಲ್ಲೆಯ ನೀರಿನ ಅಭಾವ ಇರುವ 16 ಗ್ರಾಮಗಳಿಗೆ 2 ದಿನಗಳಲ್ಲಿ ಟ್ಯಾಂಕರ್‌ ಮೂಲಕ ನೀರು ಸರಬರಾಜಿಗೆ ಕ್ರಮಕೈಗೊಳ್ಳಿ, ಅವಶ್ಯಕತೆ ಇರುವ ಕಡೆಗಳಲ್ಲಿ ಖಾಸಗಿ ಬೋರ್‌ವೆಲ್‌ಗ‌ಳನ್ನು ಬಾಡಿಗೆಗೆ ತೆಗೆದುಕೊಳ್ಳಲು ಪ್ರಯತ್ನ ಮಾಡಿ, ಟಾಸ್ಕ್ಫೋರ್ಸ್‌ನಲ್ಲಿರುವ 2 ಕೋಟಿ ರೂ. ಬಳಸಿಕೊಳ್ಳಿ ಎಂದರು.

ಬೆಂಬಲ ಬೆಲೆಯಡಿ ಭತ್ತ ಖರೀದಿಸುವ ವಿಚಾರದಲ್ಲಿ ರೈಸ್‌ ಮಿಲ್‌ಗ‌ಳ ಮೇಲೆ ಸರ್ಕಾರ ಸಂಪೂರ್ಣವಾಗಿ ಅವಲಂಬನೆಯಾಗುವುದು ಸರಿಯಲ್ಲ. ಇದರಿಂದ ರೈತರಿಗೆ ತೊಂದರೆಯಾಗುತ್ತದೆ. ಪರ್ಯಾಯ ಕ್ರಮಗಳ ಸಾಧ್ಯತೆ ಬಗ್ಗೆ ಆಹಾರ ಇಲಾಖೆ ಕಾರ್ಯದರ್ಶಿ ಜೊತೆಗೆ ಮಾತುಕತೆ ನಡೆಸುವುದಾಗಿ ತಿಳಿಸಿದರು.

ಹಣ ಬಿಡುಗಡೆ: ಕುಡಿಯುವ ನೀರು ಸರಬರಾಜಿಗಾಗಿ ನಗರಪ್ರದೇಶಗಳಿಗೆ ಒಂದು ವಾರದಲ್ಲಿ 50 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ. ಶಾಸಕರ ಅಧ್ಯಕ್ಷತೆಯ ಟಾಸ್ಕ್ಫೋರ್ಸ್‌ ಮಾದರಿಯಲ್ಲೇ ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿಗಳಿಗೂ ಹಣ ಬಿಡುಗಡೆ ಮಾಡುವುದಾಗಿ ಹೇಳಿದರು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಚಾಮರಾಜ ನಗರ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ, ಶಾಸಕರಾದ ತನ್ವೀರ್‌ಸೇs್, ಅಶ್ವಿ‌ನ್‌ಕುಮಾರ್‌, ಡಾ.ಯತೀಂದ್ರ ಸಿದ್ದರಾಮಯ್ಯ, ಅನಿಲ್‌ ಚಿಕ್ಕಮಾದು, ಬಿ.ಹರ್ಷ ವರ್ಧನ, ಸಂಸದ ಪ್ರತಾಪ್‌ ಸಿಂಹ, ಮೇಯರ್‌ ಪುಷ್ಪಲತಾ ಜಗನ್ನಾಥ್‌, ಮೈಸೂರು ಜಿಪಂ ಅಧ್ಯಕ್ಷ ಸಾ.ರಾ.ನಂದೀಶ್‌, ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್‌.ಕೆ.ಅತೀಕ್‌ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

ಬರ ಪರಿಸ್ಥಿತಿ ವರದಿ ಬೇಗ ಕಳುಹಿಸಲು ಸೂಚನೆ

ಮೈಸೂರು: ಮುಂಗಾರು ಹಂಗಾಮಿನಲ್ಲಿ ಘೋಷಣೆಯಾದ ಬರ ಪ್ರದೇಶಗಳನ್ನು ಮುಂದಿನ 6 ತಿಂಗಳ ತನಕ ಬರ ಎಂದೇ ಪರಿಗಣಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೃಷ್ಣ ಭೈರೇಗೌಡ ಹೇಳಿದರು. ಮೈಸೂರು ಜಿಪಂ ಸಭಾಂಗಣದಲ್ಲಿ ಎರಡೂ ಜಿಲ್ಲೆಗಳ ಬರ ಪರಿಸ್ಥಿತಿ ಕುರಿತು ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಿದರು.ಜನವರಿ ಕೊನೆ ವಾರದಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ ಕೊಡಲು ತೀರ್ಮಾನಿಸಲಾಗಿತ್ತು. ಆದರೆ, ಜಿಲ್ಲಾಧಿಕಾರಿಗಳಿಂದ ವರದಿ ಬರುವುದು ತಡವಾದ್ದರಿಂದ ಕೊಡಲಾಗಿಲ್ಲ. ರಾಜ್ಯದ ಬರಪೀಡಿತ 15 ಜಿಲ್ಲೆಗಳ ಪೈಕಿ 13 ಜಿಲ್ಲೆಗಳ ಸರ್ವೆ ಮುಗಿದಿದೆ. ಮೈಸೂರು-ಚಾಮರಾಜನಗರ ಬಾಕಿ ಇದ್ದು, ಬೇಗ ಸರ್ವೆ ಕಾರ್ಯ ಮುಗಿಸಿ ವರದಿ ಕೊಡಿ. ಜಂಟಿ ಕೃಷಿ ನಿರ್ದೇಶಕರು ಕೊಟ್ಟಿರುವ ವರದಿಯ ಮೇಲೆ ನಂಬಿಕೆ ಇಲ್ಲ. ಹೀಗಾಗಿ ಜಿಲ್ಲಾಧಿಕಾರಿಗಳೇ ವರದಿ ಕಳುಹಿಸಿಕೊಡಿ ಎಂದರು.

ಮೇವು ಶೇಖರಣೆ ಮಾಡಿ: ಸದ್ಯ ಮೇವಿಗೆ ತೊಂದರೆ ಇಲ್ಲದಿದ್ದರೂ ಮುಂಬರುವ ದಿನಗಳನ್ನು ಗಮನದಲ್ಲಿಟ್ಟುಕೊಂಡು ಮೇವು ಶೇಖರಣೆಗೆ ಆದ್ಯತೆ ನೀಡಿ, ಕೆಲವು ರೈತರು ಗದ್ದೆಯಲ್ಲೇ ಭತ್ತದ ಹುಲ್ಲಿಗೆ ಬೆಂಕಿ ಹಾಕುತ್ತಾರೆ. ಇದರಿಂದ ಮೇವಿನ ಸಮಸ್ಯೆ ಹೆಚ್ಚಾಗುತ್ತದೆ. ಹೀಗಾಗಿ ಅದನ್ನು ಖರೀದಿ ಮಾಡಿ ಶೇಖರಣೆ ಮಾಡಬೇಕು ಎಂದರು. ಮೈಸೂರು ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ವಿಜಯನಗರ 4ನೇ ಹಂತದಲ್ಲಿ ನಿರ್ಮಿಸಿರುವ ಟ್ಯಾಂಕ್‌ಗೆ ನೀರನ್ನು ತುಂಬಿಸುವ ಕಾರ್ಯ 15 ದಿನದ ಒಳಗೆ ಆಗಬೇಕು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ , ಸಂಬಂಧಿಸಿದ ಇಂಜಿನಿಯರ್‌ಗೆ ಸೂಚಿಸಿದರು.

ಟಾಪ್ ನ್ಯೂಸ್

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

7

Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು

Karkala: ತಿಂಗಳ ಹಿಂದೆ ಮೃತಪಟ್ಟಿದ್ದ ಪತಿ, ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿಯೂ ವಿದ್ಯುತ್ ಆಘಾತದಿಂದ ಮೃ*ತ್ಯು

Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.