ನರೇಗಾ ಯೋಜನೆಯಿಂದ ಪ್ರತಿ ಮನೆ ಬಾಗಿಲಿಗೆ ಕೆಲಸ
Team Udayavani, Jun 29, 2021, 3:58 PM IST
ಮಂಡ್ಯ: ಪ್ರತಿಯೊಂದು ಹಳ್ಳಿಗಳಲ್ಲಿ ಜನರು ತಮ್ಮ ಮನೆ ಬಾಗಿಲು ಗಳಲ್ಲೇ ಕೆಲಸ ಮಾಡಲು ಅವಕಾಶ ಕಲ್ಪಿಸುವ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ದೊರೆಯುವ ಪ್ರಯೋಜನಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ತಿಳಿಸಿದರು.
ತಾಲೂಕಿನ ಇಂಡುವಾಳು ಗ್ರಾಮ ಪಂಚಾಯಿತಿಯ ಮೊಳೆ ಕೊಪ್ಪಲು ಗ್ರಾಮದಲ್ಲಿ ಜಿಪಂ ವತಿಯಿಂದ ಹಮ್ಮಿಕೊಳ್ಳಲಾಗಿದ್ದ “ಜಾಬ್‌ಕಾರ್ಡ್ ಮೇಳ’ದಲ್ಲಿ ಅರ್ಹ ಫಲಾನುಭವಿಗಳಿಗೆ ಜಾಬ್ ಕಾರ್ಡ್ ವಿತರಿಸಿ ಮಾತನಾಡಿದ ಅವರು, ಜನರು ತಾವು ಇರುವ ಊರುಗಳಲ್ಲೇ ಕೆಲಸ ಪಡೆದು ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಂಡು ಆರ್ಥಿಕವಾಗಿ ಸಬಲರಾಗಬಹುದು ಎಂದರು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯೋಜನೆಯಲ್ಲಿ ಸಿಗುವ ಪ್ರಯೋಜನಗಳನ್ನು ಪಡೆಯಲು ಮುಂದಾಗಬೇಕು.ಕೋವಿಡ್ ಮೂರನೇ ಅಲೆ ಬಂದರೆ ಅದನ್ನು ಎದುರಿಸಲು ಹೆಚ್ಚಿನ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಜನಸಮುದಾಯಕ್ಕೆ ನರೇಗಾ ವರದಾನ: ಜಿಪಂ ಸಿಇಒ ಜಿಆರ್‌ಜೆ ದಿವ್ಯಪ್ರಭು ಮಾತನಾಡಿ, ಕೋವಿಡ್ ಸಂಕಷ್ಟದಿಂದ ಗ್ರಾಮಗಳಿಗೆ ವಲಸೆ ಬಂದಿರುವ, ಸಂಕಷ್ಟಕ್ಕೀಡಾಗಿರುವಜನಸಮುದಾಯಕ್ಕೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯೂ ವರದನವಾಗಲಿದೆ ಎಂದು ತಿಳಿಸಿದರು.
ಏಕಕಾಲಕ್ಕೆ ಅಭಿಯಾನಕ್ಕೆ ಚಾಲನೆ: ಕೋವಿಡ್-19 ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವವರು ಹಾಗೂ ವಲಸಿಗರನ್ನು ದೃಷ್ಟಿಯಲ್ಲಿಟ್ಟುಕೊಂಡು ನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ನೀಡುವ ಸಲುವಾಗಿ ಜಾಬ್ ಕಾರ್ಡ್ ಮೇಳ ಆಯೋಜಿಸಲಾಗಿದೆ.
ಬಡ ಕುಟುಂಬಗಳಿಗೆ ಉದ್ಯೋಗ ಕಲ್ಪಿಸುವ ಸಲುವಾಗಿ ಹಾಗೂ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲ233 ಗ್ರಾಪಂಗಳಲ್ಲಿ ಏಕಕಾಲಕ್ಕೆ ಜಾಬ್ ಕಾರ್ಡ್ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದರು.
ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕಾಮಗಾರಿ ಆದೇಶ ಅಭಿಯಾನ, ಕಾಮಗಾರಿಗೆ ಚಾಲನೆ, ಕಾಮಗಾರಿ ಮುಕ್ತಾಯ ಗೊಳಿಸುವ, ಆಸ್ತಿ ಬಳಕೆ ಅಭಿಯಾನ ಹಮ್ಮಿಕೊಳ್ಳಲಾಗುವುದು. ಗ್ರಾಮ ಪಂಚಾಯಿತಿಗಳ ಚುನಾಯಿತ ಪ್ರತಿನಿಧಿಗಳು ಕೈಜೋಡಿಸಿದರೆ ನರೇಗಾ ಯೋಜನೆ ಯಶಸ್ಸು ಕಾಣಲಿದೆ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಅರ್ಹ ಫಲಾನುಭವಿಗಳಿಗೆ ಜಾಬ್ ಕಾರ್ಡ್ ವಿತರಿಸಲಾಯಿತು. ಗ್ರಾಪಂ ಅಧ್ಯಕ್ಷೆ ತನುಜಾ,ಉಪಾಧ್ಯಕ್ಷೆ ಮಮತಾ, ತಾಪಂ ಇಒ ವೇಣು, ಸಹಾಯಕನಿರ್ದೇಶಕ ಶ್ರೀನಿವಾಸ್, ಪಿಡಿಒ ದಯಾನಂದ್, ಜನವಾದಿ ಸಂಘಟನೆಯ ದೇವಿ, ಜಿಲ್ಲಾ ಐಇಸಿ ಸಂಯೋಜಕಿ ರೇಖಾ ಕೀಲಾರ, ತಾಲೂಕು ಸಂಯೋಜಕಿ ಆಶಾ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.