ಕ್ವಾರಂಟೈನ್‌ಗೆ ವಿರೋಧಿಸಿದ ಸ್ಥಳೀಯರು
Team Udayavani, May 10, 2020, 5:38 PM IST
ನಾಗಮಂಗಲ: ಮುಂಬೈನಿಂದ ಆಗಮಿಸಿದ್ದ ವ್ಯಕ್ತಿಯೋರ್ವನನ್ನು ಕ್ವಾರಂಟೈನ್ ಮಾಡಲು ಬೆಳ್ಳೂರು ಕ್ರಾಸ್ ಬಳಿ ಇರುವ ಎಸ್‌ಎಲ್‌ವಿ ಸಮುದಾಯ ಭವನ ಪರೀಕ್ಷಿಸಲು ತೆರಳಿದ ತಾಲೂಕು ಟಾಸ್ಕ್ಫೋರ್ಸ್ ಸಮಿತಿಗೆ ಬೆಳ್ಳೂರು ಕ್ರಾಸ್‌ನಲ್ಲಿ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.
ಅಂತರ ರಾಜ್ಯದಿಂದ ಬಂದ ವ್ಯಕ್ತಿಯನ್ನು ಕ್ವಾರಂಟೈನ್ ಮಾಡಲು ಅಧಿಕಾರಿಗಳು ಕರೆ ತಂದಿದ್ದ ಸುದ್ದಿ ತಿಳಿದು ಅಕ್ಕಪಕ್ಕ ಗ್ರಾಮಸ್ಥರು ಅಧಿಕಾರಿಗಳ ಕ್ರಮವನ್ನು ಖಂಡಿಸಿ ವಿರೋಧ ವ್ಯಕ್ತಪಡಿಸಿದರು. ಮುಂಬೈ ಮತ್ತು ಹೊರ ರಾಜ್ಯಗಳಿಂದ ಕರೆತರುವ ಯಾರನ್ನೂ ನಮ್ಮ ತಾಲೂಕಿನಲ್ಲಿ ಕ್ವಾರಂಟೈನ್ ಮಾಡಬೇಡಿ ಎಂದು ಪೊಲೀಸರೊಂದಿಗೆ ವಾಗ್ವಾದಕ್ಕಿಳಿದರು. ಕ್ವಾರೆಂಟೈನ್‌ಗೆ ಮುಂದಾಗಿರುವ ಅಧಿಕಾರಿಗಳು. ತಾಲೂಕು ಆಡಳಿತ, ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಕ್ರಮವನ್ನು ಖಂಡಿಸಿ ತೀವ್ರ ವಿರೋಧ ವ್ಯಕ್ತಪಡಿಸಿದರು.
ಸಾರ್ವಜನಿಕರ ವಿರೋಧದಿಂದ ಬೇಸತ್ತ ಅಧಿಕಾರಿಗಳು ಕರೆತಂದಿದ್ದವರನ್ನು ಹೋಂ ಕ್ವಾರಂಟೈನ್ ಮಾಡಿ ಕೈತೊಳೆದುಕೊಂಡರು. ಇತ್ತೀಚೆಗೆ ನಾಗಮಂಗಲದ ಕದಬಹಳ್ಳಿ, ಸೋಮನಹಳ್ಳಿ ಮತ್ತು ಕೋಟೆಬೆಟ್ಟದಲ್ಲಿ ಗ್ರಾಮಸ್ಥರು ಮುಂಬೈನಿಂದ ಬಂದವರ ಕ್ವಾರಂಟೈನ್‌ಗೆ ಸ್ಥಳೀಯರ ವಿರೋಧದಿಂದ ಅಧಿಕಾರಿಗಳಿಗೆ ತಲೆ ನೋವಾಗಿ ಪರಿಣಮಿಸಿದೆ.
ಹೊರ ರಾಜ್ಯಗಳಿಂದ ಬಂದವರಿಗೆ ಕೋವಿಡ್ ಪರೀಕ್ಷೆ ಮಾಡಿಸಿ, ಪಾಸಿಟೀವ್ ಬಂದರೆ ಅಂತಹವರನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುವುದು. ನೆಗೆಟಿವ್ ಬಂದವರನ್ನು ಮಾತ್ರ ತಾಲೂಕಿನ ವಿವಿಧ ಹೋಟೆಲ್, ಲಾಡ್ಜ್ಗಳಲ್ಲಿಟ್ಟು ನಿಗಾ ವಹಿಸಲಾಗುವುದು –ಕುಂಇ ಅಹಮದ್, ತಹಶೀಲ್ದಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.