ಮಾರ್ಗೋನಹಳ್ಳಿ ಸರ್ಕಾರಿ ಶಾಲೆಗೆ ಬೇಕಿದೆ ಕಾಯಕಲ್ಪ
ಶಾಲಾ ಆವರಣವೇ ದನದ ಕೊಟ್ಟಿಗೆ, ವಾಹನ ನಿಲ್ದಾಣ • ಕುಸಿಯುವ ಹಂತದಲ್ಲಿ ಶಾಲಾ ಕಟ್ಟಡ
Team Udayavani, Jun 24, 2019, 11:47 AM IST
ಕೆ.ಆರ್.ಪೇಟೆ ತಾಲೂಕಿನ ಮಾರ್ಗೋನಹಳ್ಳಿ ಗ್ರಾಮದ ಶಾಲಾ ಆವರಣದಲ್ಲಿ ದನಗಳನ್ನು ಕಟ್ಟಿ ಹಾಕಿರುವುದು.
ಕೆ.ಆರ್.ಪೇಟೆ: ಮುಖ್ಯಮಂತ್ರಿಗಳು ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯಮಾಡುವ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಯೋಜನೆ ರೂಪಿಸುತ್ತಿದ್ದೇನೆ ಎಂದು ಹೇಳುತ್ತಿದ್ದಾರೆ. ಆದರೆ ಅವರ ಗಮನಕ್ಕೆ ಅಧಿಕಾರಿಗಳು, ಶಾಸಕರು ಸರ್ಕಾರಿ ಶಾಲೆಗಳಲ್ಲಿ ಕನಿಷ್ಠ ಮೂಲ ಸೌಲಭ್ಯಗಳಲ್ಲದೆ ಇರುವ ಬಗ್ಗೆ ಮಾಹಿತಿ ನೀಡಿ ಗ್ರಾಮೀಣ ಭಾಗದ ಶಾಲೆಗಳ ಅಭಿವೃದ್ಧಿಗೆ ಕೈಜೊಡಿಸಬೇಕಿದೆ.
ಗ್ರಾಮೀಣ ಭಾಗದಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ ಎಂಬುದು ಒಂದು ಆರೋಪವಾದರೆ, ಬಹುತೇಕ ಸರ್ಕಾರಿ ಶಾಲಾ ಕಟ್ಟಡಗಳು ಯಾವಾಗಬೇಕಾದರೂ ಕುಸಿದು ಬೀಳುವ ಆತಂಕದಲ್ಲಿದೆ. ಇದಕ್ಕೆ ಉದಾರಹಣೆ ಎಂಬಂತೆ ತಾಲೂಕಿನ ಮಾರ್ಗೋನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಶಾಲಾ ಕಟ್ಟಡ ಕುಸಿದು ಬಿದ್ದಿದ್ದು, ದಶಕಗಳೆ ಕಳೆದಿದೆ. ಶಾಲಾ ಆವರಣವನ್ನು ದನದ ಕೊಟ್ಟಿಗೆ, ವಾಹನಗಳನ್ನು ನಿಲ್ಲಿಸುವ ನಿಲ್ದಾಣವಾಗಿ ಬಳಕೆಯಾಗುತ್ತಿದ್ದು ಇಂತಹ ಪರಿಸ್ಥಿತಿಯಲ್ಲಿ ಮಕ್ಕಳು ಸರ್ಕಾರಿ ಶಾಲೆಗಳಲ್ಲಿ ಓದಲು ಸಾಧ್ಯವಿಲ್ಲಾ ಎಂಬ ಸ್ಥಿತಿ ನಿರ್ಮಾಣವಾಗಿದೆ.
ಪಾಠ ಮಾಡಲು ಸಮಯ ಕೊಡಿ? : ಸರ್ಕಾರ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಶಾಲೆಯನ್ನು ತೆರೆದಿದೆ ಇಲ್ಲಿ ಈಗ ಮುಖ್ಯವಾಗಿ ಮಕ್ಕಳ ಕೊರತೆ ಕಂಡುಬರುತ್ತಿದೆ. ಇದಕ್ಕೆ ಪ್ರಮುಖ ಕಾರಣ ಗ್ರಾಮೀಣ ಭಾಗದ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಮತ್ತು ಮೂಲಭೂತ ಸೌಲಭ್ಯಗಳು ಸಿಗದಿರುವುದು. ಒಂದರಿಂದ ಐದನೆ ತರಗತಿ ಇರುವ ಶಾಲೆಯಲ್ಲಿ 12 ರಿಂದ 30 ಮಕ್ಕಳು ಇರುವುದನ್ನು ನಾವು ತಾಲೂಕಿನಲ್ಲಿ ಕಾಣಬಹುದಾಗಿದೆ. ಇಲ್ಲಿಗೆ ಸರ್ಕಾರ ಇಬ್ಬರು ಶಿಕ್ಷಕರನ್ನು ನೇಮಕ ಮಾಡುತ್ತಾರೆ. ಇದರಲ್ಲಿ ಒಬ್ಬರು ಮಕ್ಕಳಿಗೆ ಬಿಸಿಯೂಟದ ಸಿದ್ಧತೆ ಹಾಗೂ ಪ್ರತಿದಿನ ದಾಖಲು ಮಾಡಬೇಕಾಗಿರುವ ಸುಮಾರು 17 ವಿಷಯಗಳನ್ನು ಕಡತಗಳಿಗೆ ನಮೂದಿಸುವುದರಲ್ಲಿ ಸಮಯ ಮುಗಿದು ಹೋಗುತ್ತದೆ. ಇನ್ನುಳಿದ ಒಬ್ಬ ಶಿಕ್ಷಕರು ಐದು ತರಗತಿ ಮಕ್ಕಳಿಗೆ ಎಷ್ಟು ಪಾಠ ಮಾಡಲು ಸಾಧ್ಯ ಎಂಬುದನ್ನು ಬಿಡಿಸಿ ಹೇಳುವ ಅವಶ್ಯಕತೆಯಿಲ್ಲ.
ಮುರಿದು ಬಿದ್ದಿರುವ ಶಾಲಾ ಕಟ್ಟಡ ತಾಲೂಕಿನ ಮಾರ್ಗೋನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಶಾಲೆಯ ಕಟ್ಟಡ ಅರ್ಧಭಾಗಕ್ಕೆ ಕುಸಿದು ಬಿದ್ದು ದಶಕಗಳೆ ಕಳೆದಿದ್ದರೂ ಅದನ್ನು ಸರಿಪಡಿಸುವ ಬದಲು ಬದಲಿ ಕೊಠಡಿ ವ್ಯವಸ್ಥೆ ಮಾಡಿಕೊಂಡು ಮಕ್ಕಳಿಗೆ ಪಾಠ ಮಾಡಲಾಗುತ್ತಿದೆ. ಶಾಲೆ ಕಾಂಪೌಂಡ್ ಗೋಡೆ ಕುಸಿದು ಬಿದ್ದು ಕೇವಲ ನಾಮಫಲಕ ಮಾತ್ರ ಉಳಿದುಕೊಂಡಿದೆ. ಶಾಲಾ ಕಟ್ಟಡ ಅರ್ಧ ಭಾಗ ಕುಸಿದು ಬಿದ್ದಿದೆ. ಇದನ್ನು ಗ್ರಾಮಕ್ಕೆ ಮೊದಲ ಸಾರಿ ಭೇಟಿ ನೀಡುವವರು ಗಮನಿಸಿದರೆ ಯಾವುದೋ ಸ್ಮಾರಕದಂತೆ ಭಾಸವಾಗುತ್ತದೆ. ಆದರೆ ವಾಸ್ತವವಾಗಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಚುನಾಯಿತ ಜನ ಪತ್ರತಿನಿಧಿಗಳ ನಿರ್ಲಕ್ಷ್ಯದಿಂದ ಶಾಲಾ ಕಟ್ಟಡ ದುರಸ್ತಿಯಾಗಿಲ್ಲ ಎಂಬುದು ಗ್ರಾಮಸ್ಥರ ಆರೋಪವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.