ರೈತನಷ್ಟು ಕಷ್ಟ ಜೀವಿ ಮತ್ತೂಬ್ಬರಿಲ್ಲ


Team Udayavani, Apr 6, 2022, 1:57 PM IST

ರೈತನಷ್ಟು ಕಷ್ಟ ಜೀವಿ ಮತ್ತೂಬ್ಬರಿಲ್ಲ

ವಿಜಯಪುರ: ಒಂದು ಕಡೆ ರೇಷ್ಮೆ ಬೆಳೆದು ಮತ್ತೂಂದು ಕಡೆ ಹೈನುಗಾರಿಕೆ ಮಾಡಿಕೊಂಡು ಕುಟುಂಬ ನಿರ್ವ ಹಣೆಯ ಜೊತೆ ಪಶುಪಾಲನೆಯನ್ನು ಮಾಡುತ್ತಿರುವ ರೈತ ನಿಜವಾಗಿಯೂ ಕಷ್ಟ ಜೀವಿ ಎಂದು ವೈದ್ಯಕೀಯ ಸಚಿವ ಡಾ.ಕೆ. ಸುಧಾಕರ್‌ ಹೇಳಿದರು.

ಪಟ್ಟಣ ಸಮೀಪದ ಯಲಿಯೂರು ಗ್ರಾಮದಲ್ಲಿ ನೂತನ ಪಶು ಚಿಕಿತ್ಸಾಲಯ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

ರೈತರ ಕಷ್ಟವನ್ನು ಅರಿತ ಬಿಜೆಪಿ ಸರ್ಕಾರ ಒಂದು ಲೀಟರ್‌ ಹಾಲಿಗೆ 5 ರೂ. ಪ್ರೋತ್ಸಾಹ ಧನ ನೀಡುತ್ತಿದ್ದಾರೆ. 2008ರಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ. 2 ರೂ. ಪ್ರೋತ್ಸಾಹ ಧನ ನೀಡುವಲ್ಲಿ ಆರಂಭವಾಗಿ ಇಂದು ಒಂದು ಲೀಟರ್‌ ಹಾಲಿಗೆ 5 ರೂ. ಪ್ರೋತ್ಸಾಹ ಧನ ಸಿಗುವಂತಾಗಿದೆ. ಇದರೊಂದಿಗೆ ಹಾಲು ಒಕ್ಕೂಟವೂ ಪ್ರೋತ್ಸಾಹ ಧನ ನೀಡುತ್ತಿದ್ದಾರೆ. ಆದರೆ ಬೇಸಿಗೆಯಲ್ಲಿ ಹಾಲಿನ ಗುಣ ಮಟ್ಟ ಕಾಪಾಡಿಕೊಳ್ಳುವುದು ಅತಿ ಮುಖ್ಯವಾದ ವಿಚಾರ ಎಂದು ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೆವಾ ಇಲಾಖೆ ಇವರ ಸಹಯೋಗದಲ್ಲಿ ಆರ್‌.ಐ.ಡಿ.ಎಫ್. ಯೋಜನೆಯಡಿ ತಾಲೂಕಿನ ಯಲಿಯೂರು, ಆವತಿ, ತಿಂಡ್ಲು, ಕನ್ನಮಂಗಲ ಮತ್ತು ನಲ್ಲೂರು ಗ್ರಾಮಗಳಲ್ಲಿ ನೂತನ ಪಶು ಚಿಕಿತ್ಸಾಲಯ ಕಟ್ಟಡ ನಿರ್ಮಾಣಗೊಂಡಿದೆ. ಸಚಿವ ಎಂಟಿಬಿ ನಾಗರಾಜ್‌ ಮಾತನಾಡಿ, ರೈತ ದೇಶದ ಬೆನ್ನೆಲುಬು, ಅನ್ನದಾತ ಎಂದು ಹೇಳುತ್ತೇವೆ. ಸರ್ಕಾರವು ರೈತರಿಗೆ ಹಲವಾರು ಯೋಜನೆಗಳನ್ನು ನೀಡಿದೆ. ಆದರೂ ರೈತರಿಗೆ ಮತ್ತಷ್ಟು ಸೌಲಭ್ಯಗಳನ್ನು ಕಲ್ಪಿಸಬೇಕಿದೆ. ರೈತ ಇಂದು ಅಲ್ಪ ಮಟ್ಟಿಗೆ ನೆಮ್ಮದಿಯ ಜೀವನ ನಡೆಸುತ್ತಿದ್ದಾನೆ ಎಂದರೆ ಹೈನುಗಾರಿಕೆ ಅಥವಾ ರೇಷ್ಮೆ ಬೆಳೆಯುತ್ತಿರುವುದರಿಂದ. ಆದರೂ ರೇಷ್ಮೆ ಬೆಲೆ ಯಲ್ಲಿ ಆಗುತ್ತಿರುವ ಏರುಪೇರು ರೈತರನ್ನು ಕಂಗಾಲು ಮಾಡಿದೆ. ಒಂದಲ್ಲ ಒಂದು ರೀತಿಯಲ್ಲಿ ರೈತ ಕಷ್ಟ ಅನುಭವಿಸುತ್ತಿದ್ದಾನೆ. ಬೆಲೆ ಇದ್ದಾಗ ಬೆಳೆ ಇಲ್ಲ. ಬೆಳೆ ಚೆನ್ನಾಗಿ ಬಂದರೆ ಬೆಲೆ ಇರುವುದಿಲ್ಲ. ಎರಡೂ ಇದ್ದರೆ, ನೀರು, ವಿದ್ಯುತ್‌ ಸಮಸ್ಯೆ ಕಾಡುತ್ತದೆ. ರೈತರ ಜೀವನ ಎಂದಿಗೂ ಕಷ್ಟದಾಯಕ ಎಂದು ತಿಳಿಸಿದರು.

ಶಾಸಕ ನಿಸರ್ಗ ನಾರಾಯಣಸ್ವಾಮಿ ಮಾತನಾಡಿ, ಮನುಷ್ಯರಿಗೆ ಆರೋಗ್ಯದ ಸಮಸ್ಯೆ ಉಂಟಾದಾಗ ಆಂಬ್ಯುಲೆನ್ಸ್‌ ಸೇವೆ, ಚಿಕಿತ್ಸೆ ಸಿಗುತ್ತದೆಯೋ ಅದೇ ರೀತಿ ಪ್ರಾಣಿಗಳಿಗೂ ತಕ್ಷಣ ತುರ್ತು ಚಿಕಿತ್ಸೆಗಾಗಿ ಆಂಬ್ಯುಲೆನ್ಸ್‌ ಮತ್ತು ಉತ್ತಮ ಗುಣಮಟ್ಟದ ಪಶು ವೈದ್ಯ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ಯಲಿಯೂರು ಗ್ರಾಮಕ್ಕೆ ಎಲ್ಲ ರೀತಿಯ ಸೌಲಭ್ಯ ಒದಗಿಸಿದ್ದು, ಇಂದು ಪಶು ಚಿಕಿತ್ಸಾಲಯಕ್ಕೂ ನೂತನ ಕಟ್ಟಡ ಉದ್ಘಾಟನೆ ಮಾಡಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಯಲಿಯೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸೊಣ್ಣೇಗೌಡ, ಉಪಾಧ್ಯಕ್ಷೆ ಪವಿತ್ರ ಸೋಮಶೇಖರ್‌, ಜಿಲ್ಲಾಧಿಕಾರಿ ಶ್ರೀನಿವಾಸ್‌, ಅಪರ ಜಿಲ್ಲಾಧಿಕಾರಿ ವಿಜಯಾ ರವಿಕುಮಾರ್‌, ಜಿಲ್ಲಾ ಪೊಲೀಸ್‌ ಅಧೀಕ್ಷಕ ಡಾ.ಕೋನವಂಶಿಕೃಷ್ಣ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರೇವಣಪ್ಪ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕ ಡಾ.ನಾಗರಾಜ್, ಮುಖ್ಯ ಪಶು ವೈದ್ಯಾಧಿಕಾರಿ ಡಾ.ನಾರಾಯಣಸ್ವಾಮಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಸಂತಕುಮಾರ್‌, ತಹಶೀಲ್ದಾರ್‌ ಶಿವರಾಜ್, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಅನಂತಕುಮಾರಿ, ಮಾಜಿ ಅಧ್ಯಕ್ಷ ಬಿ.ರಾಜಣ್ಣ, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಶಶಿಕಲಾ, ಜೆಡಿಎಸ್‌ ತಾಲೂಕು ಅಧ್ಯಕ್ಷ ಮುನೇಗೌಡ, ಟಿ.ಎ.ಪಿ.ಸಿ.ಎಂ.ಎಸ್‌ ಅಧ್ಯಕ್ಷ ನಾರಾ ಯಣಸ್ವಾಮಿ, ಮತ್ತಿತರರು ಇದ್ದರು.

ಟಾಪ್ ನ್ಯೂಸ್

BBK-11: ಬಿಗ್ ಬಾಸ್ ಮನೆಗೆ ಖ್ಯಾತ ಯೂಟ್ಯೂಬರ್ ಎಂಟ್ರಿ

BBK-11: ಬಿಗ್ ಬಾಸ್ ಮನೆಗೆ ಖ್ಯಾತ ಯೂಟ್ಯೂಬರ್ ಎಂಟ್ರಿ

1-sadsad

Lokayukta ADGP ಚಂದ್ರಶೇಖರ್ ಬ್ಲಾಕ್‌ಮೇಲರ್, ಕ್ರಿಮಿನಲ್:ಎಚ್‌ಡಿಕೆ ಕೆಂಡಾಮಂಡಲ

BBK-11: ಬಿಗ್ ಬಾಸ್ ಮನೆಗೆ ಬಂದರು ಸೀರಿಯಲ್ ಸುಂದರಿಯರು

BBK-11: ಬಿಗ್ ಬಾಸ್ ಮನೆಗೆ ಬಂದರು ಸೀರಿಯಲ್ ಸುಂದರಿಯರು

M-Kharge-illeness

J-K Election: ಚುನಾವಣಾ ಪ್ರಚಾರ ಭಾಷಣ ನಡುವೆಯೇ ಅಸ್ವಸ್ಥರಾದ ಮಲ್ಲಿಕಾರ್ಜುನ್‌ ಖರ್ಗೆ!

1-shah

Rahul Gandhi ಗ್ಯಾರಂಟಿಗಳು ಕರ್ನಾಟಕ, ಹಿಮಾಚಲದಲ್ಲಿ ಫಸಲು ನೀಡಿವೆ: ಅಮಿತ್ ಶಾ

6

World Heart Day: ನಿಮ್ಮ ಹೃದಯ ಜೀವಕ್ಕೆ ಕುತ್ತಾಗುವ ಮುನ್ನ ಎಚ್ಚೆತ್ತುಕೊಳ್ಳೋಣ

1-jjk

Nasrallah ಹ*ತ್ಯೆ ಖಂಡಿಸಿ ಕಾಶ್ಮೀರದಲ್ಲಿ ಬೃಹತ್ ಪ್ರತಿಭಟನೆ; ಮಾಜಿ ಸಿಎಂ ಮುಫ್ತಿ ಬೆಂಬಲ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BIO-METRIC

Model for Schools: ಮಂಡ್ಯ ಸರಕಾರಿ ಶಾಲೆಗೆ ಫೇಸ್‌ ಬಯೋಮೆಟ್ರಿಕ್‌!

HDK-1

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನಾನು ಒತ್ತಾಯಿಸಲ್ಲ: ಕೇಂದ್ರ ಸಚಿವ ಎಚ್‌ಡಿಕೆ 

Pandavapura ಸಾಲ ಬಾಧೆ ತಾಳಲಾರದೇ ರೈತ ಆತ್ಮಹತ್ಯೆ

Pandavapura ಸಾಲ ಬಾಧೆ ತಾಳಲಾರದೇ ರೈತ ಆತ್ಮಹತ್ಯೆ

Nagamangala ಕಿರಣ್‌ ಅಂತಿಮ ದರ್ಶನ ಪಡೆದ ನಿಖಿಲ್‌ ಕುಮಾರಸ್ವಾಮಿ

Nagamangala ಕಿರಣ್‌ ಅಂತಿಮ ದರ್ಶನ ಪಡೆದ ನಿಖಿಲ್‌ ಕುಮಾರಸ್ವಾಮಿ

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK-11: ಬಿಗ್ ಬಾಸ್ ಮನೆಗೆ ಖ್ಯಾತ ಯೂಟ್ಯೂಬರ್ ಎಂಟ್ರಿ

BBK-11: ಬಿಗ್ ಬಾಸ್ ಮನೆಗೆ ಖ್ಯಾತ ಯೂಟ್ಯೂಬರ್ ಎಂಟ್ರಿ

1-sadsad

Lokayukta ADGP ಚಂದ್ರಶೇಖರ್ ಬ್ಲಾಕ್‌ಮೇಲರ್, ಕ್ರಿಮಿನಲ್:ಎಚ್‌ಡಿಕೆ ಕೆಂಡಾಮಂಡಲ

7

Mangaluru: ಟ್ರಾಫಿಕ್‌ ಸಿಗ್ನಲ್‌ ಕಾರ್ಯಾಚರಣೆ ಯಾವಾಗ?; ಇಲಾಖೆಗೆ ಸಿಕ್ಕಿಲ್ಲ ಕಂಟ್ರೋಲ್‌

BBK-11: ಬಿಗ್ ಬಾಸ್ ಮನೆಗೆ ಬಂದರು ಸೀರಿಯಲ್ ಸುಂದರಿಯರು

BBK-11: ಬಿಗ್ ಬಾಸ್ ಮನೆಗೆ ಬಂದರು ಸೀರಿಯಲ್ ಸುಂದರಿಯರು

M-Kharge-illeness

J-K Election: ಚುನಾವಣಾ ಪ್ರಚಾರ ಭಾಷಣ ನಡುವೆಯೇ ಅಸ್ವಸ್ಥರಾದ ಮಲ್ಲಿಕಾರ್ಜುನ್‌ ಖರ್ಗೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.