Nagamangala ಕಿರಣ್ ಅಂತಿಮ ದರ್ಶನ ಪಡೆದ ನಿಖಿಲ್ ಕುಮಾರಸ್ವಾಮಿ
ಎಚ್‌ಡಿಕೆಯಿಂದ ಕಿರಣ್ ಪತ್ನಿಗೆ ಕೆಲಸ ಕೊಡಿಸುವ ಭರವಸೆ
Team Udayavani, Sep 22, 2024, 8:12 PM IST
ಮಂಡ್ಯ: ನಾಗಮಂಗಲ ತಾಲೂಕಿನ ಬದ್ರಿಕೊಪ್ಪಲು ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಉಂಟಾದ ಗಲಭೆ ಹಿನ್ನೆಲೆಯಲ್ಲಿ ಬಂಧನ ಭೀತಿಯಿಂದ ಗ್ರಾಮ ತೊರೆದಿದ್ದ ಗ್ರಾಮದ ನಿವಾಸಿ, ಮೃತ ಕಿರಣ್ ಅಂತಿಮ ದರ್ಶನವನ್ನು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪಡೆದರು. ಬಳಿಕ ಪೋಷಕರಿಗೆ ಸಾಂತ್ವನ ಹೇಳಿ, ಆರ್ಥಿಕ ಸಹಾಯ ಮಾಡಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ನಾಗಮಂಗಲದಲ್ಲಿ ನಡೆದಿರುವಂಥ ಘಟನೆ ಜೀರ್ಣಿಸಿಕೊಳ್ಳಲು ಆಗುವುದಿಲ್ಲ. 28 ವರ್ಷದ ಕಿರಣ್ ಎಂಬ ಯುವಕ ಬಹಳ ಉತ್ಸುಕತೆಯಿಂದ ಪ್ರತಿ ವರ್ಷ ಗಣೇಶ ವಿಸರ್ಜನೆಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದರು. ಬಿ.ಕಾಂ ಓದಿದ್ದ ಕಿರಣ್‌ಗೆ ನಾಗಮಂಗಲ ಮಾಜಿ ಶಾಸಕ ಸುರೇಶ್ ಗೌಡರು ಯಾವುದಾದರೂ ಕಂಪನಿಯಲ್ಲಿ ಕೆಲಸ ಕೊಡಿಸಬೇಕೆಂಬ ವಿಷಯವನ್ನು ಕುಮಾರಸ್ವಾಮಿ ಬಳಿ ಪ್ರಸ್ತಾಪಿಸಿದ್ದರೆಂದು ತಿಳಿಸಿದರು.
ಗಲಭೆಯಿಂದ ಕಿರಣ್‌ಗೆ ಮಾನಸಿಕವಾಗಿ ನೋವಾಗಿತ್ತು. ಕಿರಣ್ ತಂದೆಯವರು ಮತ್ತು ಸ್ನೇಹಿತರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನು ನೋಡಿ ಕಿರಣ್ ಆರೋಗ್ಯದಲ್ಲಿ ಏರುಪೇರಾಗಿ ಸಾವನ್ನಪ್ಪಿದ್ದಾರೆ. ಇದು ನಿಜಕ್ಕೂ ದುಃಖಕರ ಸಂಗತಿ ಎಂದರು.
ಕಿರಣ್ ಪತ್ನಿಗೆ ಕೆಲಸ ಕೊಡಿಸುವ ಭರವಸೆ: ಕಿರಣ್‌ಗೆ ಸಣ್ಣ ಮಗುವಿದೆ. ಆತನ ಹೆಂಡತಿ ಸಹ ಕಂಗಾಲಾಗಿದ್ದಾರೆ. ಅವರ ಜತೆ ಕುಮಾರಣ್ಣ ದೂರವಾಣಿ ಮೂಲಕ ಮಾತನಾಡಿ, ಕಿರಣ್ ಪತ್ನಿಗೆ ಕೆಲಸಕೊಡಿಸುವ ಭರವಸೆ ನೀಡಿದ್ದಾರೆಂದು ನಿಖಿಲ್ ತಿಳಿಸಿದರು.
ಯುವ ಘಟದ ರಾಜ್ಯಾಧ್ಯಕ್ಷರಾದ ಶ್ರೀ @Nikhil_Kumar_k ಅವರು ಇಂದು, ನಾಗಮಂಗಲದ ಬದ್ರಿ ಕೊಪ್ಪಲಿನ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆಯಿಂದ ಗ್ರಾಮ ತೊರೆದಿದ್ದ ಮೃತ ಕಿರಣ್ ಅವರ ಅಂತಿಮ ದರ್ಶನ ಪಡೆದು, ಪೋಷಕರಿಗೆ ಸಾಂತ್ವನ ಹೇಳಿದರು.
ಈ ಸಂದರ್ಭದಲ್ಲಿ ನಾಗಮಂಗಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ಸುರೇಶ್ ಗೌಡ… pic.twitter.com/DlQ2lOqnlp
— Janata Dal Secular (@JanataDal_S) September 22, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು
ಹೊಸ ಸೇರ್ಪಡೆ
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
T20 Ranking: ಬರೋಬ್ಬರಿ 69 ಸ್ಥಾನ ಮೇಲಕ್ಕೇರಿದ ಭಾರತೀಯ ಬ್ಯಾಟರ್
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.