ನನ್ನ ಸೋಲಿನ ಹಿಂದೆ ಕುತಂತ್ರ ಇತ್ತು: ನಿಖಿಲ್ ‌ಕುಮಾರಸ್ವಾಮಿ

Team Udayavani, Jan 22, 2021, 10:31 PM IST

ನನ್ನ ಸೋಲಿನ ಹಿಂದೆ ಕುತಂತ್ರ ಇತ್ತು: ನಿಖಿಲ್ ‌ಕುಮಾರಸ್ವಾಮಿ

ಮಂಡ್ಯ: ಕಳೆದ ಲೋಕಸಭೆ ಚುನಾವಣೆಯಲ್ಲಿ ತಾಂತ್ರಿಕವಾಗಿ ನಾನು ಸೋತಿದ್ದರೂ ಅದರ ಹಿಂದೆ ಕೆಲ ಪಕ್ಷಗಳ ಕುತಂತ್ರವೂ ಸೇರಿತ್ತು. ಪ್ರಸ್ತುತ ಸನ್ನಿವೇಶದಲ್ಲಿ ಸೋಲಿನ ಬಗ್ಗೆ ಪರಾಮರ್ಶೆ ಮಾಡುವುದು ಬೇಡ. ಮುಂದೆ ಒಳ್ಳೆಯ ಅವಕಾಶಗಳು ಸಿಗುವ ನಿರೀಕ್ಷೆ ಇದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಹೇಳಿದರು.

ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ೩೩ನೇ ಹುಟ್ಟುಹಬ್ಬದ ಸಮಾರಂಭ ಹಾಗೂ 33 ಪ್ರಗತಿಪರ ರೈತರನ್ನು ಸನ್ಮಾನಿಸಿ ಮಾತನಾಡಿದ ಅವರು, 2014 ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷದ ಪುಟ್ಟರಾಜು ಅವರು 5.25 ಲಕ್ಷ ಮತಗಳನ್ನು ಗಳಿಸಿ ಜಯ ಗಳಿಸಿದ್ದರು. 2019 ಲೋಕಸಭಾ ಚುನಾವಣೆಯಲ್ಲಿ ನಾನು 5.75 ಲಕ್ಷ ಮತಗಳನ್ನು ತೆಗೆದುಕೊಂಡಿದ್ದೇನೆ ಎಂದರು.

ಕಳೆದ ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ನನ್ನ ಸೋಲಿನ ಬಗ್ಗೆ ವಿಮರ್ಶೆ ಮಾಡುವುದು ಬೇಡ. ಪಕ್ಷದ ವರಿಷ್ಠರು ನನ್ನ ಮೇಲೆ ವಿಶ್ವಾಸ ವಿಟ್ಟು ರಾಜ್ಯ ಯುವ ಘಟಕದ ಜವಾಬ್ದಾರಿ ವಹಿಸಿದ್ದಾರೆ. ಅದನ್ನು ಸಮರ್ಥವಾಗಿ ನಿಭಾಯಿಸಬೇಕಾದ ಹೊಣೆಗಾರಿಕೆ ನನ್ನ ಮೇಲಿದ್ದು, ತಾವೆಲ್ಲರೂ ನನಗೆ ಶಕ್ತಿ ತುಂಬಬೇಕು ಎಂದು ಮನವಿ ಮಾಡಿದರು.

ರೈತ ಮತ್ತು ಜನಪರ ನಿಲುವನ್ನು ಹೊಂದಿರುವ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ. ಕುಮಾರಸ್ವಾಮಿ ಕುಟುಂಬದಿಂದ ಬಂದಿರುವ ನನಗೆ ರಾಮನಗರ, ಚನ್ನಪಟ್ಟಣ ಹಾಗೂ ಮಂಡ್ಯ ಜಿಲ್ಲೆಯ ಜನರು ಅತೀವ ಪ್ರೀತಿ-ವಿಶ್ವಾಸವನ್ನು ತೋರಿಸುತ್ತಿದ್ದಾರೆ. ಇದಕ್ಕೆ ಎಂದಿಗೂ ನಾನು ಚಿರಋಣಿಯಾಗಿದ್ದೇನೆ. ಜಿಲ್ಲೆಯ ರೈತರು ಹಾಗೂ ಜನರ ಹಿತ ಕಾಪಾಡಲು ನಾನು ಸದಾ ಬದ್ಧನಾಗಿದ್ದೇನೆ. ಈ ವಿಚಾರದಲ್ಲಿ ಎಂಥ ಸಮಯದಲ್ಲೂ ಸ್ಪಂದಿಸಲು ಸಿದ್ಧನಿದ್ದೇನೆ. ಜಿಲ್ಲೆಯ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದ ಸಂದರ್ಭದಲ್ಲಿ ಮೃತ ರೈತರ ಕುಟುಂಬಗಳಿಗೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರು ನೆರವಾಗಿದ್ದರು. ಅವರ ಮಾರ್ಗದರ್ಶನದಲ್ಲೇ ನಾನು ಮುನ್ನಡೆಯುತ್ತೇನೆ ಎಂದು ಭರವಸೆ ನೀಡಿದರು.

ಕಾರ್ಯಕ್ರಮಕ್ಕೂ ಮುನ್ನ ನಿಖಿಲ್‌ಕುಮಾರಸ್ವಾಮಿ ಭತ್ತದ ರಾಶಿಗೆ ಪೂಜೆ ಸಲ್ಲಿಸಿದರು. ನಂತರ ಅಂಬೇಡ್ಕರ್, ನಾಲ್ವಡಿ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಿದರು. ಸಮಾರಂಭದಲ್ಲಿ 33 ಪ್ರಗತಿಪರ ರೈತರನ್ನು ಅಭಿನಂದಿಸಲಾಯಿತು.

ಶಾಸಕರಾದ ಸಿ.ಎಸ್.ಪುಟ್ಟರಾಜು, ಕೆ.ಸುರೇಶ್‌ಗೌಡ, ಕೆ.ಅನ್ನದಾನಿ, ಡಿ.ಸಿ.ತಮ್ಮಣ್ಣ ಎನ್.ಅಪ್ಪಾಜಿಗೌಡ, ಕೆ.ಟಿ.ಶ್ರೀಕಂಠೇಗೌಡ ಮಾತನಾಡಿದರು. ಮಾಜಿ ಶಾಸಕಿ ಕಲ್ಪನಾಸಿದ್ದರಾಜು, ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಅಶೋಕ್, ಸದಸ್ಯರಾದ ಎಚ್.ಟಿ.ಮಂಜು, ಕಂಸಾಗರ ರವಿ ಸೇರಿದಂತೆ ಮತ್ತಿತರರಿದ್ದರು.­

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.