ನೀರಿನ ಘಟಕ ದುರಸ್ತಿಗೆ ಕ್ರಮವಹಿಸಿಲ್ಲ

Team Udayavani, Jan 10, 2023, 3:48 PM IST

tdy-17

ಮದ್ದೂರು: ಜಲ ಜೀವನ್‌ ಮಿಷನ್‌ ಯೋಜನೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳು ಅದ್ವಾನಗೊಂಡಿದ್ದರೂ, ಇದುವರಿಗೂ ಕ್ರಮವಹಿಸದ ಜಿಪಂ ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸಂಸ್ಥೆಗೆ ದೂರು ದಾಖಲಿಸುವುದಾಗಿ ತಾಲೂಕು ಗ್ರಾಪಂ ಸದಸ್ಯರ ಒಕ್ಕೂಟದ ಅಧ್ಯಕ್ಷ ಜಿ.ಎನ್‌.ಸತ್ಯ ತಿಳಿಸಿದರು.

ಪಟ್ಟಣದ ತಾಪಂ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಗ್ರಾಪಂ ಸದಸ್ಯರ ಒಕ್ಕೂಟದ ಪದಾಧಿಕಾರಿಗಳ ಹಾಗೂ ಪಿಡಿಒ ಮತ್ತು ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ತಾಲೂಕಿನಲ್ಲಿ ಜಲ ಜೀವನ್‌ ಯೋಜನೆಯ ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿದೆ. ಕಳಪೆ ಗುಣಮಟ್ಟದ ಕಾಮಗಾರಿ ನಡೆಯುವ ಜತೆಗೆ ಯಾವುದೇ ಕಾಮಗಾರಿಯನ್ನು ಪೂರ್ಣಗೊಳಿಸದೆ, ನಿರ್ಲಕ್ಷ್ಯ ವಹಿಸಿರುವ ಗ್ರಾಮೀಣ ಕುಡಿಯುವ ನೀರು ಎಇಇ ಕೋದಂಡ ರಾಮ ಅವರನ್ನು ತರಾಟೆಗೆ ತೆಗೆದುಕೊಂಡರು.

ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿಗೊಳಿಸುವಂತೆ ಮತ್ತು ಜಲ ಜೀವನ್‌ ಯೋಜನೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಪ್ರತಿಯೊಬ್ಬರಿಗೂ ಶುದ್ಧ ಕುಡಿಯುವ ನೀರು ಪೂರೈಕೆಗೆ ಹಲವು ಬಾರಿ ಮನವಿ ಮಾಡಿದ್ದರೂ, ಕ್ರಮವಹಿಸದ ಹಿನ್ನೆಲೆಯಲ್ಲಿ ಲೋಕಾಯುಕ್ತ ತನಿಖೆಗೆ ಒಕ್ಕೂಟವು ನಿರ್ಣಯ ಕೈಗೊಂಡಿರುವುದಾಗಿ ಹೇಳಿದರು. ಗ್ರಾಪಂನಲ್ಲಿ ಲಕ್ಷಾಂತರ ತೆರಿಗೆ ಹಣ ಬಾಕಿ: 42 ಗ್ರಾಪಂ ವ್ಯಾಪ್ತಿಗಳಲ್ಲಿ ಕರ್ತವ್ಯ ನಿರ್ವಹಿಸುವ ಪಿಡಿಒಗಳು ಸಮರ್ಪಕವಾಗಿ ಕರ್ತವ್ಯ ನಿರ್ವಹಣೆ ಮಾಡದ ಹಿನ್ನೆಲೆಯಲ್ಲಿ ಪ್ರತಿ ಗ್ರಾಪಂನಲ್ಲಿ ಲಕ್ಷಾಂತರ ತೆರಿಗೆ ಹಣ ಬಾಕಿ ಉಳಿದಿದೆ. ಇದರಿಂದಾಗಿ ಗ್ರಾಮದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದೆ. ಯಾವುದೇ ತೆರಿಗೆಯನ್ನು ಪಾವತಿಸದಿದ್ದರೂ ಉಳ್ಳವರಿಗೆ ಪರವಾನಗಿ ನೀಡುತ್ತಿದೆ. ಬಡ ವರ್ಗದವರು, ಕೂಲಿ ಕಾರ್ಮಿಕರು ಇನ್ನಿತರೆ ಸೌಲಭ್ಯ ಪಡೆಯಲು ಕಚೇರಿಗೆ ತೆರಳಿದರೆ, ತೆರಿಗೆ ಪಾವತಿಸುವ ಜತೆಗೆ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವುದಾಗಿ ಆರೋಪಿಸಿದರು.

ಕಾಟಾಚಾರಕ್ಕೆ ನೋಟಿಸ್‌: ತಾಲೂಕಿನ ಕೌಡ್ಲೆ ಗ್ರಾಮದಲ್ಲಿರುವ ಅಕ್ಷರ ವಿದ್ಯಾ ಸಂಸ್ಥೆಯು ಹಲವು ವರ್ಷಗಳಿಂದಲೂ ತೆರಿಗೆ ಪಾವತಿಸದೆ ಲಕ್ಷಾಂತರ ರೂ. ಬಾಕಿ ಉಳಿಸಿಕೊಂಡಿದೆ. ಸ್ಥಳೀಯ ಅಧಿಕಾರಿಗಳು ಅವರೊಂದಿಗೆ ಶಾಮೀಲಾಗಿದ್ದು, ಕೇವಲ ಕಾಟಾಚಾರಕಷ್ಟೇ ನೋಟಿಸ್‌ ನೀಡಿ ವಾಪಸ್ಸಾಗುವ ಅಧಿಕಾರಿಗಳು ತೆರಿಗೆ ವಸೂಲಾತಿಗೆ ಮುಂದಾಗದೆ, ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವುದಾಗಿ ದೂರಿದರು.

ಕೂಡಲೇ ಗ್ರಾಪಂ ಅಧ್ಯಕ್ಷರು ಸೇರಿದಂತೆ ಸದಸ್ಯರು, ಪಿಡಿಒಗಳ ಸಭೆ ಕರೆದು ಗ್ರಾಮಗಳಲ್ಲಿರುವ ಮೂಲ ಸೌಲಭ್ಯಗಳ ಕೊರತೆ ಮತ್ತು ಅಭಿವೃದ್ಧಿ ಕಾರ್ಯಗಳ ಬಗ್ಗೆ ಮೇಲಧಿಕಾರಿಗಳು ಚರ್ಚೆ ನಡೆಸುವಂತೆ ಮತ್ತು ತಾಪಂ ಸಾಮಾನ್ಯ ಸಭೆಯಲ್ಲಿ ಕೈಗೊಂಡ ನಿರ್ಣಯಗಳನ್ನು ಸ್ಥಳೀಯ ಚುನಾಯಿತ ಪ್ರತಿನಿಧಿಗಳೊಟ್ಟಿಗೆ ಚರ್ಚಿಸಿ, ಅಂಗೀಕರಿಸಲು ಅಗತ್ಯ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

ತಾಲೂಕಿನ ವಿವಿಧ ಗ್ರಾಪಂ ಪಿಡಿಒಗಳು, ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಪಂ ಸದಸ್ಯರ ಒಕ್ಕೂಟದ ಪದಾಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡು ಕೈಗೊಳ್ಳ ಬೇ ಕಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಿದರು. ನರೇಗಾ ಯೋಜನೆ ವ್ಯವಸ್ಥಾಪಕ ಮಂಜುನಾಥ್‌, ಒಕ್ಕೂಟದ ಅಧ್ಯಕ್ಷ ಸತ್ಯಪ್ಪ, ಉಪಾಧ್ಯಕ್ಷ ಮಾದರಹಳ್ಳಿ ಕೃಷ್ಣ, ಪದಾಧಿಕಾರಿಗಳಾದ ರಾಮಕೃಷ್ಣ, ಮಹೇಶ್‌, ದಯಾನಂದ, ಶಿವಲಿಂಗಯ್ಯ, ನಳಿನಿ, ಚಂದ್ರಶೇಖರ್‌, ವಿಜಿಕುಮಾರ್‌, ನಂದೀಶ್‌ಗೌಡ, ಜಗದೀಶ್‌ ಹಾಜರಿದ್ದರು.

ಟಾಪ್ ನ್ಯೂಸ್

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.