ಕೃಷಿ ಚಟುವಟಿಕೆಗಳಿಗೆ ತೊಂದರೆ ಇಲ್ಲ
ಜನಪ್ರತಿನಿಧಿಗಳು, ಅಧಿಕಾರಿಗಳ ಜತೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಸಭೆ
Team Udayavani, Apr 13, 2020, 4:34 PM IST
ಚಾಮರಾಜನಗರ: ಲಾಕ್‌ಡೌನ್ ಇರುವ ಪ್ರಸ್ತುತ ಸಂದರ್ಭದಲ್ಲಿ ಕೃಷಿ ಚಟುವಟಿಕೆಗಳಿಗೆ ನಿರ್ಬಂಧ ಹೇರದೇ ಕೃಷಿಕರಿಗೆ ಅನುಕೂಲ ಕಲ್ಪಿಸಬೇಕೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋವಿಡ್-19ರ ಹಿನ್ನೆಲೆಯಲ್ಲಿ ಕೃಷಿ, ತೋಟಗಾರಿಕೆ, ಕೃಷಿ ಉತ್ಪನ್ನಗಳ ಸರಕು ಸಾಗಣೆ ಚಟುವಟಿಕೆ ಸಂಬಂಧ ಜನಪ್ರತಿನಿಧಿಗಳು, ರೈತ ಮುಖಂಡರು ಹಾಗೂ ಹಿರಿಯ ಅಧಿಕಾರಿಗಳ ಜತೆ ನಡೆದ ಸಭೆಯಲ್ಲಿ ಮಾತನಾಡಿದರು. ಬಿತ್ತನೆ, ನಾಟಿ, ಉಳುಮೆ ಸೇರಿದಂತೆ ಕೃಷಿ
ಚಟುವಟಿಕೆಗಳಿಗೆ ಮುಕ್ತ ವಾತಾವರಣ ಕಲ್ಪಿಸಬೇಕು. ಕೃಷಿ, ತೋಟಗಾರಿಕೆಯಂತಹ ಪೂರಕ ಕಾರ್ಯಗಳಿಗೆ ಅಗತ್ಯವಿರುವ ಎಲ್ಲಾ ನೆರವು ನೀಡಬೇಕು. ಯಾವುದೇ ನಿರ್ಬಂಧ ಇರಬಾರದೆಂದು ಸಚಿವರು ತಿಳಿಸಿದರು.
ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಇತರೆ ಪರಿಕರಗಳನ್ನು ದಾಸ್ತಾನು ಮಾಡಿಕೊಳ್ಳಬೇಕು. ರಸಗೊಬ್ಬರ ಇತರೆ ಕೃಷಿ ಸಂಬಂಧಿತ
ಸಾಮಗ್ರಿಗಳನ್ನು ಮಾರಾಟ ಮಾಡುವವರು ಕೃತಕ ಅಭಾವ ಸೃಷ್ಟಿಸಬಾರದು ಎಂದು ಸೂಚಿಸಿದರು. ರೈತ ಮುಖಂಡರಾದ ಹೊನ್ನೂರು ಪ್ರಕಾಶ್, ಮಹೇಶ್ ಪ್ರಭು ಮತ್ತಿತರರು ಮಾತನಾಡಿ, ರೈತರು ಬೆಳೆದ ಕೃಷಿ ಉತ್ಪನ್ನಗಳಿಗೆ ಎಪಿಎಂಸಿಗಳಲ್ಲಿ ಮಧ್ಯವರ್ತಿಗಳಿಂದಾಗಿ ನಿರೀಕ್ಷಿತ ಮಟ್ಟದಲ್ಲಿ ದರ ಸಿಗುತ್ತಿಲ್ಲ. ರೈತರ ನೆರವಿಗೆ ಪೂರಕ ಅನುಕೂಲ ಕಲ್ಪಿಸಬೇಕೆಂದರು. ಹೂ ಬೆಳೆಗಾರರ ಕಷ್ಟದ ಪರಿಸ್ಥಿತಿಯ ಅರಿವು ಸರ್ಕಾರಕ್ಕಿದೆ. ಮುಖ್ಯಮಂತ್ರಿಯವರು ಈಗಾಗಲೆ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದರು.
ಶಾಸಕರಾದ ನರೇಂದ್ರ, ಮಹೇಶ್, ನಿರಂಜನಕುಮಾರ್ ಜಿಪಂ ಅಧ್ಯಕ್ಷ ಮಹೇಶ್, ಜಿಲ್ಲಾಧಿಕಾರಿ ಡಾ. ರವಿ, ಜಿಪಂ ಸಿಇಒ ನಾರಾಯಣರಾವ್, ಎಸ್ಪಿ ಆನಂದಕುಮಾರ್, ಎಡೀಸಿ ಆನಂದ್, ಎಸಿ ನಿಖೀತಾ, ಅಗ್ರಿ ಡಿಡಿ ಚಂದ್ರಕಲಾ, ತೋಟಗಾರಿಕೆ ಇಲಾಖೆ ಡಿಡಿ ಶಿವಪ್ರಸಾದ್ ರೈತ ಮುಖಂಡರಾದ ಡಾ. ಗುರುಪ್ರಸಾದ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ
Power Scarcity: ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್ ಖರೀದಿಗೆ ನಿರ್ಧಾರ: ಜಾರ್ಜ್
Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ
Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.