ಅಧಿಕಾರಿಗಳಿಂದ ಕಡತ ನಾಪತ್ತೆ ಹೈಡ್ರಾಮ: ಆರೋಪ
ನಿವೇಶನ ರಹಿತರಿಗೆ ಭೂಮಿ ಮಂಜೂರು ಮಾಡದಿದ್ದರೆ ಅ.12ರಿಂದ ಧರಣಿ: ಗ್ರಾಪಂ ಮಾಜಿ ಸದಸ್ಯ ಬಿ.ಕೆ.ಸತೀಶ್
Team Udayavani, Oct 10, 2020, 3:20 PM IST
ಮಂಡ್ಯ: ತಾಲೂಕು ಕಚೇರಿಯಲ್ಲಿ ಬೂದನೂರು ನಿವೇಶನ ರಹಿತರಿಗೆಭೂಮಿ ಮಂಜೂರು ಮಾಡುವ ಸಂಬಂಧದ ಕಡತಗಳನ್ನೇ ಅಧಿಕಾರಿ ಗಳು ಬಚ್ಚಿಟ್ಟು ಕಳೆದು ಹೋಗಿದೆ ಎನ್ನುತ್ತಿದ್ದಾರೆ ಎಂದು ಬೂದನೂರು ಗ್ರಾಪಂ ಮಾಜಿ ಸದಸ್ಯ ಬಿ.ಕೆ.ಸತೀಶ್ ಗಂಭೀರ ಆರೋಪ ಮಾಡಿದರು.
ಜಿಲ್ಲಾಧಿಕಾರಿ ಕಚೇರಿಗೆ ಬೂದನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವೇಶನ ರಹಿತರಿಗೆ ಗುರುತಿಸಿರುವ ಭೂಮಿ ಸಂಬಂಧ ಮಾಹಿತಿ ಹಕ್ಕಿನಡಿ ಅರ್ಜಿ ಸಲ್ಲಿಸಲಾಗಿತ್ತು. ಜಿಲ್ಲಾಧಿಕಾರಿ ಅವರುತಾಲ್ಲೂಕು ಕಚೇರಿಯಿಂದ ಮಾಹಿತಿ ಪಡೆಯಿರಿ ಎಂದು ಪತ್ರ ಬರೆದು ತಿಳಿಸಿದ ಮೇರೆಗೆ ತಾಲ್ಲೂಕುಕಚೇರಿಗೆ ತೆರಳಿ ವಿಚಾರಿಸಿದಾಗ ಅಧಿಕಾರಿ ಗಳು ಕಡತಗಳು ನಾಪತ್ತೆಯಾಗಿವೆ ಎಂದುಹೇಳುತ್ತಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಗೊಂದಲ ಸೃಷ್ಟಿ: ಕಳೆದ 4 ವರ್ಷಗಳಿಂದ ಬೂದನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ 50 ಎಕರೆ ಸರ್ಕಾರಿ ಭೂಮಿ ಇದ್ದು, ನಿವೇಶನ ರಹಿತರಿಗೆ 2 ಎಕರೆ ಮಂಜೂರು ಮಾಡುವ ಸಂಬಂಧಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದಾರೆ. ಆ.2ರಂದು ನಿವೇಶನರಹಿತರು ಪ್ರತಿಭಟನಾ ಧರಣಿ ನಡೆಸುವ ಮುನ್ನಾ ಆ.1 ರಂದುಬೂದನೂರು ಗ್ರಾಮಕ್ಕೆ ಬಂದ ಉಪವಿಭಾಗಾಧಿಕಾರಿ ಮತ್ತು ತಹಶೀಲ್ದಾರ್ ಅವರಿಗೆ ಸ್ಥಳೀಯ ರಾಜಕೀಯ ಪ್ರಭಾವಿಗಳು ಹಾಗೂ ಪುಡಾರಿಗಳು ರೈತರ ಕೃಷಿ ಭೂಮಿಯನ್ನು ಆಶ್ರಯ ನಿವೇಶನಕ್ಕೆ ವಶಪಡಿಸಿ ಕೊಳ್ಳಲಾಗುತ್ತಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿ ಗೊಂದಲ ಸೃಷ್ಟಿಸಿದ್ದಾರೆ ಎಂದು ಆರೋಪಿಸಿದರು.
ಗ್ರಾಮದ ಸರ್ವೆ ನಂ. 190/ಪಿ10ನ 6.20ಎಕರೆ ಭೂಮಿಯೇ ಕಾಣುತ್ತಿಲ್ಲ ಎಂದು ಪೂರ್ವ ದಿಕ್ಕಿನಲ್ಲಿರುವ ಭೂಮಿಯ ಪರಿಶೀಲನೆನಡೆಸದೇ ಪಶ್ಚಿಮ ದಿಕ್ಕಿನಲ್ಲಿರುವ ಭೂಮಿಯನ್ನು ಎಸಿ, ತಹಶೀಲ್ದಾರ್ ಅವರಿಗೆ ತೋರಿಸಿ ವಂಚಿಸಲಾಗಿದೆ ಎಂದು ಗಂಭೀರ ಆರೋಪ ಮಾಡಿದರು.
ಕ್ರಮ ಕೈಗೊಳ್ಳಲು ಆಗ್ರಹ: ಬೂದನೂರು ಗ್ರಾಮದ ದಲಿತರ ಇನಾಮು, ಸರ್ಕಾರಿ ಶಾಲೆ ಹಾಗೂ ಸಾರ್ವಜನಿಕ ದಾರಿಗಳನ್ನು ಕಬಳಿಸಿರುವ ಭೂಗಳ್ಳರು ಬಡವರ ನಿವೇಶನ ಭೂಮಿಯನ್ನು ಕಬಳಿಸಲು ಸಂಚು ರೂಪಿಸಿದ್ದಾರೆ. ಇದರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ತಾಲೂಕು ಆಡಳಿತ ಮೇಲೆ ಸಂಪೂರ್ಣ ನಂಬಿಕೆ ಇಲ್ಲದಂತಾಗಿದ್ದು, ಖುದ್ದಾಗಿ ಜಿಲ್ಲಾಧಿಕಾರಿಗಳೇ ಕೂಡಲೇ ಸುಳ್ಳು ಮಾಹಿತಿನೀಡುತ್ತಿರುವರಾಜಸ್ವ ನಿರೀಕ್ಷಕ, ಗ್ರಾಮ ಲೆಕ್ಕಿಗರು ಹಾಗೂ ಭೂಮಾಪನ ಇಲಾಖೆಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಬೇಕು. ಬೂದನೂರುಗ್ರಾಪಂ ವ್ಯಾಪ್ತಿಯಲ್ಲಿ ಗುರುತಿಸಿರುವ ಸರ್ಕಾರಿ ಭೂಮಿಯನ್ನು 1-5ಮಾಡಿರುವ ಪ್ರಕಾರ ಅಳತೆ ಹದ್ದುಬಸ್ತ್ ಮಾಡಿ ನಿವೇಶನ ರಹಿತರಿಗೆ ಭೂಮಿ ನೀಡಬೇಕು. ತಕ್ಷಣವೇ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಿವೇಶನರಹಿತರ ಸಭೆ ನಡೆಸಬೇಕು. ಬೂದನೂರು ಆಶ್ರಯ ನಿವೇಶನಕ್ಕೆ ಸಂಬಂಧಿಸಿದಂತೆ ಮಾಡಿರುವ ಆದೇಶ ಮತ್ತು ಆಗಿರುವ ಕ್ರಮಗಳ ನಕಲು ಪ್ರತಿ ನೀಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ನ್ಯಾಯ ಸಿಗುವವರೆಗೂ ಜಿಲ್ಲಾಧಿಕಾರಿ ಕಚೇರಿ ಬಳಿ ಅ.12ರಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿದರು. ಗೋಷ್ಠಿಯಲ್ಲಿ ವಕೀಲ ಜೆ.ರಾಮಯ್ಯ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.