ಭಿಕ್ಷೆ ಕೇಳಿದ ಮಾನಸಿಕ ಅಸ್ವಸ್ಥನ ಮೇಲೆ ಹಲ್ಲೆ
Team Udayavani, Nov 18, 2020, 7:36 PM IST
ಭಿಕ್ಷೆಗೆ ಬೇಡಿಕೆ ಇಟ್ಟು ಹಲ್ಲೆಗೊಳಗಾದ ವ್ಯಕ್ತಿಯನ್ನು ಸಾರ್ವಜನಿಕರು ಆಸ್ಪತ್ರೆಗೆ ಕರೆದೊಯ್ಯುತ್ತಿರುವುದು.
ಮಂಡ್ಯ: ಹಸಿವು ನೀಗಿಸಿಕೊಳ್ಳಲು ಭಿಕ್ಷೆ ಕೇಳಿದ ಮಾನಸಿಕ ಅಸ್ವಸ್ಥ ವ್ಯಕ್ತಿಗೆ ಮರದ ರಿಪೀಸ್ ಪಟ್ಟಿಯಿಂದ ಹಲ್ಲೆ ನಡೆಸಿರುವ ಘಟನೆ ಬುಧವಾರ ನಡೆದಿದೆ.
ಪಾಂಡವಪುರ ಪಟ್ಟಣದ ಡಾ.ರಾಜ್‌ಕುಮಾರ್ ವೃತ್ತದಲ್ಲಿರುವ ಶ್ರೀಕಂಠೇಶ್ವರ ಮೆಡಿಕಲ್ ಸ್ಟೋರ್‌ನಲ್ಲಿ ಮಾನಸಿಕ ಅಸ್ವಸ್ಥ ಭಿಕ್ಷೆ ನೀಡುವಂತೆ ಬೇಡಿಕೊಂಡಿದ್ದಾನೆ. ಭಿಕ್ಷೆ ನೀಡಲು ನಿರಾಕರಿಸಿದ ಅಂಗಡಿ ಮಾಲೀಕರು ಮುಂದೆ ಹೋಗುವಂತೆ ಸೂಚಿಸಿದರು. ಆದರೂ, ಅಸ್ವಸ್ಥ ವ್ಯಕ್ತಿ ಮುಂದೆ ಹೋಗದೆ ಹಲವು ಬಾರಿ ಭಿಕ್ಷೆ ನೀಡುವಂತೆ ಒತ್ತಾಯಿಸಿ ಬೇಡಿಕೊಂಡಿದ್ದಾನೆ. ಇದರಿಂದ ಕುಪಿತರಾದ ಅಂಗಡಿ ಮಾಲೀಕ ಶಿಲ್ಪ ಎಂಬುವವರು ಮರದ ರಿಪೀಸ್ ಪಟ್ಟಿಯಿಂದ ಭಿಕ್ಷುಕನ ಮೇಲೆ ಏಳೇಟು ಬಾರಿ ಹಲ್ಲೆ ನಡೆಸಿದ್ದಾರೆ.
ಹಲ್ಲೆಯಿಂದ ವ್ಯಕ್ತಿಯ ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತ ಸುರಿಯುತ್ತಿದ್ದನ್ನು ಕಂಡು ಸಾರ್ವಜನಿಕರು ಅಂಗಡಿ ಮಾಲೀಕರಿಗೆ ತೀವ್ರ ತರಾಟೆಗೆ ತೆಗೆದುಕೊಂಡು ಗಾಯಗೊಂಡ ವ್ಯಕ್ತಿಯನ್ನು ಅಸ್ಪತ್ರೆಗೆ ಕರೆದೊಯ್ಯುವಂತೆ ಹೇಳಿದರು. ಆದರೆ ಅಂಗಡಿ ಮಾಲೀಕರು ಸಾರ್ವಜನಿಕರ ಮಾತಿಗೆ ಸೊಪ್ಪು ಹಾಕಲಿಲ್ಲ.
ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವದಿಂದ ನರಳಾಡುತ್ತಿದ್ದ ವ್ಯಕ್ತಿಯನ್ನು ಸಾರ್ವಜನಿಕರೇ ಉಪವಿಭಾಗೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದರು. ವೈದ್ಯರು ತಲೆಗೆ ಹೊಲಿಗೆ ಹಾಕಿ ಚುಚ್ಚು ಮದ್ದು ನೀಡಿ ಕಳುಹಿಸಿದ್ದಾರೆ. ಅಸ್ವಸ್ಥ ವ್ಯಕ್ತಿ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಗ್ರಾಮದ ರಾಜೇಶ್‌ಗೌಡ(೩೮) ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.