ಅತ್ಯಾಚಾರಿಗೆ ಗಲ್ಲು ವಿಧಿಸಿ: ವಿಪಕ್ಷ ನಾಯಕ ಸಿದ್ದರಾಮಯ್ಯ
Team Udayavani, Oct 19, 2022, 11:07 PM IST
ಮಂಡ್ಯ/ಮಳವಳ್ಳಿ: ಟ್ಯೂಷನ್ ಸೆಂಟರ್ ಕೆಲಸಗಾರನಿಂದ ಅತ್ಯಾಚಾರಕ್ಕೊಳಗಾಗಿ ಕೊಲೆಗೀಡಾದ ಪಟ್ಟಣದ 10 ವರ್ಷದ ಬಾಲಕಿ ಮನೆಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬುಧವಾರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಪರಿಹಾರ ವಿತರಿಸಿದರು.
ಬಳಿಕ ಮಾತನಾಡಿದ ಅವರು, ಮಗುವಿನ ಮೇಲೆ ಇಂಥ ಕೃತ್ಯ ಎಸಗಿರುವಾತನಿಗೆ ಗಲ್ಲು ವಿಧಿಸಬೇಕು ಎಂದು ಆಗ್ರಹಿಸಿದರು.
3 ಲಕ್ಷ ರೂ. ಪರಿಹಾರ
ಸಿದ್ದರಾಮಯ್ಯ 2 ಲಕ್ಷ ರೂ., ಕೆಪಿಸಿಸಿ ಉಪಾಧ್ಯಕ್ಷ ಎನ್. ಚಲುವರಾಯ ಸ್ವಾಮಿ ಹಾಗೂ ಪರಿಷತ್ ಸದಸ್ಯ ಮರಿತಿಬ್ಬೇ ಗೌಡ ತಲಾ 50 ಸಾ. ರೂ. ಪರಿಹಾರ ನೀಡಿದರು.
ಜಮೀರ್‌ನಿಂದ 5 ಲ. ರೂ.
ಬಾಲಕಿ ಮನೆಗೆ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ 5 ಲಕ್ಷ ರೂ. ಪರಿಹಾರ ನೀಡಿ ದರು. ಬಳಿಕ ಮಾತನಾಡಿದ ಅವರು, ಮಗುವಿನ ಮೇಲೆ ರಾಕ್ಷಸೀಯ ಕೃತ್ಯ ಎಸಗಿರುವಾತನನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿದರು.
ಸರಕಾರದ 10 ಲ. ರೂ. ಪರಿಹಾರ ವಿತರಣೆ
ಬಾಲಕಿಯ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಬಿಡುಗಡೆಯಾಗಿರುವ 10 ಲಕ್ಷ ರೂ. ಪರಿಹಾರದ ಚೆಕ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ವಿತರಿಸಿದರು. ಬಾಲಕಿಯ ಮನೆಗೆ ಶಾಸಕ ಡಾ| ಕೆ. ಅನ್ನದಾನಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಜತೆಗೆ ಭೇಟಿ ನೀಡಿ ಅವರು ಚೆಕ್ ಹಸ್ತಾಂತರಿಸಿದರು. ಬಳಿಕ ಮಾತನಾಡಿದ ಅವರು, ಪುಟ್ಟ ಕಂದಮ್ಮನಿಗೆ ನ್ಯಾಯ ಒದಗಿಸಲು ಸಿಎಂ ವಿಶೇಷ ಮುತುವರ್ಜಿ ವಹಿಸಿದ್ದಾರೆ. ಸರಕಾರ ಕೊನೆಯವರೆಗೂ ನೊಂದ ಕುಟುಂಬದೊಂದಿಗೆ ಇರಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.