ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ವಿರೋಧ


Team Udayavani, Jun 21, 2020, 5:09 AM IST

bhu-sudharane

ಮಂಡ್ಯ: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಸ್ತೆ ತಡೆ ನಡೆಸುತ್ತಿದ್ದ ರೈತರನ್ನು ಪೊಲೀಸರು ಶನಿವಾರ ಬಂಧಿಸಿದರು. ಕರ್ನಾಟಕ ರಾಜ್ಯ ರೈತ ಸಂಘದ (ಮೂಲ ಸಂಘಟನೆ) ಅಧ್ಯಕ್ಷ ಬೋರಾಪುರ ಶಂಕರೇ ಗೌಡ, ಪ್ರಧಾನ ಕಾರ್ಯದರ್ಶಿ ಎಸ್‌.ಮಂಜೇಶ್‌ ಗೌಡ, ಕಾರ್ಯಾಧ್ಯಕ್ಷ ಇಂಡುವಾಳು ಚಂದ್ರಶೇ ಖರ್‌, ಉಪಾಧ್ಯಕ್ಷ ನಾಗೇಂದ್ರಸ್ವಾಮಿ, ಕಾರ್ಯ ದರ್ಶಿ ಕೆ.ರಾಮಲಿಂಗೇಗೌಡ, ಪ್ರಕಾಶ್‌, ಉಮೇಶ್‌,  ಚಂದ್ರಶೇಖರ್‌, ರಮೇಶ, ಶಿವರು ದ್ರ, ಹೆಮ್ಮಿಗೆ ಚಂದ್ರಶೇಖರ್‌ ಸೇರಿದಂತೆ 30ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದರು.

ನಗರದ ಸರ್‌ ಎಂ.ವಿ. ಪ್ರತಿಮೆ ಮುಂಭಾಗ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮೈಸೂರು-ಬೆಂಗಳೂರು  ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿದರು. ರಸ್ತೆ ತಡೆಯಿಂದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಎರಡೂ ಬದಿಯಲ್ಲೂ ವಾಹನಗಳ ದಟ್ಟಣೆ ಹೆಚ್ಚಾಯಿತು. ಪೊಲೀಸರು ಮನವೊಲಿಸಲು  ಪ್ರಯತ್ನಿಸಿದಾರೂ, ವಿಫಲವಾ ಗಿತ್ತು. ಅಂತಿಮವಾಗಿ ಪೊಲೀಸರು ಪ್ರತಿಭಟ ನಾಕಾರರನ್ನು ಬಂಧಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಕೃಷಿ ಭೂಮಿ ಕಬಳಿಕೆ: 1961ರ ಭೂ ಸುಧಾರಣಾ ಕಾಯ್ದೆಯ 79 ಎಬಿಸಿ ಮತ್ತು 80ನೇ ಕಲಂಗಳನ್ನು ಪೂರ್ವಾನ್ವಯವಾಗುವಂತೆ ರದ್ದು ಪಡಿಸಿದೆ ಹಾಗೂ 62ನೇ ಕಲಂಗೆ ತಿದ್ದುಪಡಿ ತಂದಿದೆ. ಇದು ಭೂಸುಧಾರಣಾ ಕಾಯ್ದೆ ಅಲ್ಲ, ಭೂಕಬಳಿಕೆ 1961ರ ಕಾಯ್ದೆಯ 79ಎ ಮತ್ತು ಬಿ ಕಲಂಗಳು ಕೃಷಿಯೇತರ ಮೂಲಗಳಿಂದ ಹೆಚ್ಚು ಆದಾಯವುಳ್ಳವರು ಹಾಗೂ ಕೈಗಾರಿ ಕೋದ್ಯಮಿಗಳು ಕೃಷಿ ಭೂಮಿ ಕಬಳಿಸದಂತೆ ರಕ್ಷಣೆ ಒದಗಿಸುತ್ತಿತ್ತು. 79 ಸಿ ಕಲಂ ತಾವು ನೈಜ ರೈತರೆಂದು ಸರಿ ಪ್ರಮಾಣ ಪತ್ರ ಒದಗಿಸದೇ ಜಮೀನನ್ನು ಕೊಂಡವರಿಗೆ ದಂಡ ವಿಧಿಸುವ ಅವಕಾಶ ಒದಗಿಸುತ್ತಿತ್ತು.

80ನೇ ಕಲಂ ರೈತರಲ್ಲ ದವರಿಗೆ ಕೃಷಿ ಭೂಮಿ ಮಾರುವುದನ್ನು ನಿಷೇಧಿಸಿತ್ತು. ಈ ಎಲ್ಲಾ ಕಲಂಗಳನ್ನು ರದ್ದು ಮಾಡಿ,  ಕೃಷಿ ಭೂಮಿ ಸುಲಭವಾಗಿ ಲಾಭಕೋರರಿಗೆ ಬಂಡವಾಳಗಾರರಿಗೆ, ಕೈಗಾರಿಕೋದ್ಯಮಿಗಳು ಪಡೆದುಕೊಳ್ಳುವಂತೆ 63ನೇ ಕಲಂಗೂ ಮತ್ತು 80ನೇ ಕಲಂಗೂ ತಿದ್ದುಪಡಿ ತಂದಿದೆ. ಈ ಎಲ್ಲಾ ತಿದ್ದುಪಡಿಗಳ ಪರಿಣಾಮವಾಗಿ ಈಗ ಬಲಾಡ್ಯರು  ಮತ್ತು ಬಹುರಾಷ್ಟ್ರೀಯ ಕಂಪನಿ ಗಳು ಸುಲಭವಾಗಿ ಕೃಷಿ ಭೂಮಿಯನ್ನು ಕಬಳಿಸ ಬಹುದು ಎಂದು ಆತಂಕ ವ್ಯಕ್ತಪಡಿಸಿದರು.

ಆಹಾರ ಭದ್ರತೆಗೆ ಅಪಾಯ: ಈ ತಿದ್ದುಪಡಿ ಯು ನೇರವಾಗಿ ಆಹಾರ ಭದ್ರತೆ ಹಾಗೂ ಆಹಾರ ಸಾರ್ವಭೌಮತೆಯ ಒಟ್ಟಾರೆ ಕೃಷಿ ಕ್ಷೇತ್ರದ ಮೇಲೆ ಅಪಾಯ ತಂದೊಡ್ಡಲಿದ್ದು, ಶೇ.65ಭಾಗದ ಜನ ಕೃಷಿ ಕ್ಷೇತ್ರವನ್ನೇ ಜೀವನೋಪಾಯಕ್ಕಾಗಿ  ಅವಲಂಭಿಸಿದ್ದಾರೆ. ಇದರಲ್ಲಿ ಶೇ. 80 ಭಾಗದ ಜನ ಸಣ್ಣ ಸಣ್ಣ ಹಿಡುವಳಿದಾರರು, ರಿಯಲ್‌ ಎಸ್ಟೇಟ್‌ ಹಾಗೂ ವಾಣಿಜ್ಯ ಕಾರಣದಿಂದ ಈ ಸಣ್ಣ ಹಿಡುವಳಿದಾರರು ಒಮ್ಮೆ ಲಾಭದಾಸೆಗೆ ಭೂಮಿ ಕಳೆದುಕೊಂಡರೆ ಮತ್ತೆ ಭೂಮಿ  ಕೊಳ್ಳಲು ಸಾಧ್ಯವಿಲ್ಲ.

ಹೀಗಾಗಿ ಕೃಷಿ ಭೂಮಿಯ ಪ್ರಮಾಣ ಕಡಿಮೆ ಆಹಾರ ಭದ್ರತೆಗೆ ಅಪಾಯವಿದೆ. ಈ ಹಿನ್ನಲೆಯಲ್ಲಿ ತಿದ್ದುಪಡಿಯನ್ನು ಸರ್ಕಾರ ವಾಪಸ್‌ ಪಡೆಯ ಬೇಕು ಎಂದು ಒತ್ತಾಯಿಸಿದರು. ಸರ್ಕಾರ ಎಪಿಎಂಸಿ ಕಾಯ್ದೆಗೂ ತಿದ್ದುಪಡಿ ತಂದಿದ್ದು, ಈ ಕಾಯ್ದೆಯು ಕೃಷಿ ಕಾರ್ಪೊರೇಟ್‌ ಕರಿಸಿ ಬಡ ರೈತರನ್ನು ಒಕ್ಕಲೆಬ್ಬಿಸುವ ನೀತಿಯ ಭಾಗವಾಗಿಯೇ ಇದ್ದು, ಈ ತಿದ್ದುಪಡಿಯನ್ನೂ ಕೈಬಿಡಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

stalin

Tamil Nadu University; ಕುಲಪತಿ ನೇಮಕ: ಸಿಎಂ, ಗೌರ್ನರ್‌ ನಡುವೆ ಮತ್ತ ಸಂಘರ್ಷ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.