‘ಡಿಯರ್ ಕಾಮ್ರೆಡ್’ ತೆಲುಗು ಅವತರಣಿಕೆ ಪ್ರದರ್ಶನಕ್ಕೆ ವಿರೋಧ
ಕನ್ನಡ ಡಬ್ಬಿಂಗ್ ಸಿನಿಮಾ ಪ್ರದರ್ಶನಕ್ಕೆ ಕರವೇ ಆಗ್ರಹ • ಸಂಜಯ ಚಿತ್ರಮಂದಿರದ ಎದುರು ಪ್ರತಿಭಟನೆ
Team Udayavani, Jul 30, 2019, 4:09 PM IST
ಮಂಡ್ಯದ ಸಂಜಯ ಚಿತ್ರಮಂದಿರದ ಮುಂದೆ 'ಡಿಯರ್ ಕಾಮ್ರೆಡ್' ಚಿತ್ರದ ಕನ್ನಡ ಅವತರಣಿಕೆ ಪ್ರದರ್ಶಿಸುವಂತೆ ಒತ್ತಾಯಿಸಿ ಕರ್ನಾಟಕ ಹಿತರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಂಡ್ಯ: ಡಿಯರ್ ಕಾಮ್ರೆಡ್ ಕನ್ನಡ ಆವೃತ್ತಿ ಇದ್ದರೂ ತೆಲುಗು ಅವತರಣಿಕೆಯಲ್ಲಿ ಚಿತ್ರ ಪ್ರದರ್ಶಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಕಾರ್ಯಕರ್ತರು ಸೋಮವಾರ ನಗರದ ಸಂಜಯ ಚಿತ್ರಮಂದಿರದ ಬಳಿ ಪ್ರತಿಭಟನೆ ನಡೆಸಿದರು.
ಚಿತ್ರಮಂದಿರದ ಎದುರು ಜಮಾಯಿಸಿದ ರಕ್ಷಣಾ ವೇದಿಕೆ ಕಾರ್ಯಕರ್ತರು ಡಿಯರ್ ಕಾಮ್ರೆಡ್ ಸಿನಿಮಾವನ್ನು ತೆಲುಗು ಅವತರಣಿಕೆ ಬದಲು ಕನ್ನಡ ಅವತರಣಿಕೆಯಲ್ಲಿ ಪ್ರದರ್ಶಿಸುವಂತೆ ಒತ್ತಾಯಿಸಿ ಘೋಷಣೆ ಕೂಗಿದರು.
ವಿಶ್ವದ ಎಲ್ಲ ಸಿನಿಮಾ, ಜ್ಞಾನ ಎಲ್ಲವೂ ಕನ್ನಡ ಭಾಷೆಯಲ್ಲೇ ಬರಬೇಕು. ಇದರಿಂದ ಕನ್ನಡ ಭಾಷೆ ಬೆಳೆಯುತ್ತದೆ. ಇದರ ಭಾಗವಾಗಿಯೇ ಕನ್ನಡ ಸಿನಿಮಾ ರಂಗದಲ್ಲಿ ಅಘೋಷಿತ ನಿಷೇಧ ಹೇರಿದ್ದ ಡಬ್ಬಿಂಗ್ ಸಿನಿಮಾ ಜಾರಿಗೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳು ಹೋರಾಟ ನಡೆಸುತ್ತಿವೆ. ಈ ಹೋರಾಟದ ಭಾಗವಾಗಿಯೇ ಡಿಯರ್ ಕಾಮ್ರೆಡ್ ಚಿತ್ರವನ್ನು ಕನ್ನಡಕ್ಕೆ ಡಬ್ ಮಾಡಲಾಗಿದೆ ಎಂದು ವೇದಿಕೆ ಅಧ್ಯಕ್ಷ ಹೆಚ್.ಡಿ.ಜಯರಾಂ ಹೇಳಿದರು.
ಮಂಡ್ಯ ಜಿಲ್ಲೆ ಕರ್ನಾಟಕದಲ್ಲಿ ಶೇ.90ರಷ್ಟು ಕನ್ನಡ ಮಾತನಾಡುವ ಕನ್ನಡಿಗರಿರುವ ಜಿಲ್ಲೆಯಾಗಿದೆ. ನಂದಾ ಚಿತ್ರಮಂದಿರದಲ್ಲಿ ಡಿಯರ್ ಕಾಮ್ರೆಡ್ ಸಿನಿಮಾದ ಕನ್ನಡ ಅವತರಣಿಕೆ ಪ್ರದರ್ಶಿತವಾಗುತ್ತಿದೆ. ಹೀಗಿರುವಾಗ ಸಂಜಯ ಚಿತ್ರಮಂದಿರದಲ್ಲಿ ಅದೇ ಸಿನಿಮಾದ ತೆಲುಗು ಅವತರಣಿಕೆ ಪ್ರದರ್ಶಿಸುವ ಅನಿವಾರ್ಯತೆ ಏನಿದೆ. ಪರಭಾಷಾ ಚಿತ್ರಗಳಿಂದ ಕನ್ನಡ ಸಿನಿಮಾಗಳಿಗೆ ಚಿತ್ರಮಂದಿರಗಳು ಸಿಗದಂತ ಪರಿಸ್ಥಿತಿ ಸೃಷ್ಟಿಯಾಗುತ್ತಿದೆ. ತಕ್ಷಣದಿಂದ ತೆಲುಗು ಬದಲಿಗೆ ಕನ್ನಡ ಆವೃತ್ತಿಯನ್ನೇ ಪ್ರದರ್ಶಿಸುವಂತೆ ಒತ್ತಾಯಿಸಿದರು.
ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ಬಿಡುಗಡೆಯಾಗುವ ಎಲ್ಲ ಪರಭಾಷಾ ಚಿತ್ರಗಳು ಕನ್ನಡದಲ್ಲೇ ಡಬ್ ಆಗಿ ಪ್ರದರ್ಶನಗೊಳ್ಳಬೇಕು. ತಪ್ಪಿದಲ್ಲಿ ಪ್ರದರ್ಶನ ತಡೆಹಿಡಿಯಲಾಗುವುದು ಎಂದು ಈ ಮೂಲಕ ಎಚ್ಚರಿಸಲಾಯಿತು. ಚಿತ್ರಮಂದಿರದ ವ್ಯವಸ್ಥಾಪಕ ಕುಶಾಲ್ ಗೌಡ ಮನವಿ ಸ್ವೀಕರಿಸಿ ಇಂದು ಸಂಜೆಯಿಂದಲೇ ಕನ್ನಡ ಆವೃತ್ತಿಯಲ್ಲಿ ಸಿನಿಮಾ ಪ್ರದರ್ಶನ ಮಾಡುವ ಭರವಸೆ ನೀಡಿದ ಮೇರೆಗೆ ಪ್ರತಿಭಟನೆ ಸ್ಥಗಿತಗೊಳಿಸಲಾಯಿತು.
ಪ್ರತಿಭಟನೆಯಲ್ಲಿ ವೇದಿಕೆಯ ಜಿಲ್ಲಾಧ್ಯಕ್ಷ ಸಂಪತ್ ಕುಮಾರ್, ಕಾವೇರಿ ಕಣಿವೆ ರೈತ ಒಕ್ಕೂಟದ ಜಿ.ಬಿ.ನವೀನ್‌ಕುಮಾರ್, ಎಂ,ಬಿ,ನಾಗಣ್ಣಗೌಡ, ಗಿರೀಗೌಡ, ಚಿತ್ರ ನಿರ್ದೇಶಕ ರವಿಕೀರ್ತಿ, ವಿಶ್ವಾಸ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.