ಲಕ್ಷ ದಾಟಿದ ಕೋವಿಡ್ ಪರೀಕ್ಷೆ

ಜಿಲ್ಲೆಯಲ್ಲಿ ರ್ಯಾಪಿಡ್‌ ಪರೀಕ್ಷೆಯಲ್ಲಿಯೇ ಹೆಚ್ಚು ಸೋಂಕಿತರು ಪತ್ತೆ

Team Udayavani, Sep 14, 2020, 2:06 PM IST

mandya-tdy-1

ಕೋವಿಡ್ ದಿಂದ ಮೃತಪಟ್ಟ ಪತ್ರಕರ್ತನ ಅಂತ್ಯಸಂಸ್ಕಾರವನ್ನು ಕೋವಿಡ್‌-19 ನಿಯಮಾವಳಿಯಂತೆ ನಡೆಸಲಾಯಿತು.

ಮಂಡ್ಯ: ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆಗೊಳಗಾದವರ ಸಂಖ್ಯೆ ಲಕ್ಷದತ್ತ ಮುಂದುವರಿದಿದೆ. ಇದುವರೆಗೂ 99,528 ಮಂದಿಗೆ ಪರೀಕ್ಷೆ ನಡೆಸಲಾಗಿದೆ.

ಆರ್‌ಟಿಪಿಸಿಆರ್‌ ಮೂಲಕ 57911 ಮಂದಿಗೆ ಪರೀಕ್ಷೆ ನಡೆಸಿದರೆ, ರ್ಯಾಪಿಡ್‌ ಟೆಸ್ಟ್‌ಗೆ 41617 ಮಂದಿ ಒಳಗಾಗಿದ್ದಾರೆ. ಆರ್‌ಟಿಪಿಸಿಆರ್‌ ಪರೀಕ್ಷೆಗೆ ಮಿಮ್ಸ್‌ ಹಾಗೂ ಆದಿಚುಂಚನಗಿರಿಯ ಏಮ್ಸ್‌ ಆಸ್ಪತ್ರೆಯಲ್ಲಿ ಮಾಡಲಾಗುತ್ತಿದೆ. ಆದರೆ, ವರದಿಗಾಗಿ ಎರಡು ದಿನ ಕಾಯಬೇಕು. ಆದರೆ, ರ್ಯಾಪಿಡ್‌ ಟೆಸ್ಟ್‌ ಎಲ್ಲ ಕಡೆ ಮಾಡಲಾಗುತ್ತಿದ್ದು, ಸ್ಥಳದಲ್ಲಿಯೇ ವರದಿ ಸಿಗಲಿದೆ.

ತಾಲೂಕು ವಿವರ: ಮಂಡ್ಯ ತಾಲೂಕಿನಲ್ಲಿ 11085 ಆರ್‌ ಟಿಪಿಸಿಆರ್‌, 14103 ರ್ಯಾಪಿಡ್‌, ಮದ್ದೂರು ತಾಲೂಕಿನಲ್ಲಿ 7613 ಆರ್‌ ಟಿಪಿಸಿಆರ್‌, 4940 ರ್ಯಾಪಿಡ್‌, ಮಳವಳ್ಳಿ ತಾಲೂಕಿನಲ್ಲಿ 8026 ಆರ್‌ ಟಿಪಿಸಿಆರ್‌, 4216 ರ್ಯಾಪಿಡ್‌, ಪಾಂಡವಪುರತಾಲೂಕಿನಲ್ಲಿ 6130 ಆರ್‌ಟಿಪಿಸಿಆರ್‌, 3749 ರ್ಯಾಪಿಡ್‌, ಶ್ರೀರಂಗಪಟ್ಟಣ ತಾಲೂಕಿನಲ್ಲಿ 5583 ಆರ್‌ ಟಿಪಿಸಿಆರ್‌, 3928 ರ್ಯಾಪಿಡ್‌, ಕೆ.ಆರ್‌.ಪೇಟೆ ತಾಲೂಕಿನಲ್ಲಿ 9347 ಆರ್‌ಟಿಪಿಸಿಆರ್‌, 5449 ರ್ಯಾಪಿಡ್‌ ಹಾಗೂ ನಾಗಮಂಗಲದಲ್ಲಿ 10048 ಆರ್‌ ಟಿಪಿಸಿಆರ್‌, 5232 ರ್ಯಾಪಿಡ್‌ ಪರೀಕ್ಷೆ ನಡೆಸಲಾಗಿದೆ.

ರ್ಯಾಪಿಡ್‌ ಪರೀಕ್ಷೆಯಿಂದ ಹೆಚ್ಚು ಸೋಂಕಿತರ ಪತ್ತೆ: ಆರ್‌ಟಿಪಿಸಿಆರ್‌ ಪರೀಕ್ಷೆಯಿಂದ 3859 ಮಂದಿಗೆ ಸೋಂಕು ದೃಢಪಟ್ಟರೆ, ರ್ಯಾಪಿಡ್‌ ಪರೀಕ್ಷೆಯಿಂದ 4400 ಮಂದಿಗೆ ಪಾಸಿಟಿವ್‌ ಬಂದಿದೆ. ಹೈರಿಸ್ಕ್ ರೋಗಿಗಳಿಗೆ ಪರೀಕ್ಷೆ: ಬಿಪಿ, ಶುಗರ್‌, ಗರ್ಭಿಣಿ, ಕ್ಯಾನ್ಸರ್‌ ಸೇರಿದಂತೆ ಕೋವಿಡೇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವರೋಗಿಗಳನ್ನು ಗುರುತಿಸಿ, ಹೆಚ್ಚು ಪರೀಕ್ಷೆ ನಡೆಸಲಾಗುತ್ತಿದೆ. ಸೋಂಕು ಕಂಡು ಬಂದ ತಕ್ಷಣ ಸೂಕ್ತ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ.

28 ಮೊಬೈಲ್‌ ಟೆಸ್ಟಿಂಗ್‌ ತಂಡ: ಜಿಲ್ಲೆಯ 7 ತಾಲೂಕುಗಳಲ್ಲಿ ತಲಾ ನಾಲ್ಕು ತಂಡಗಳಂತೆ ಒಟ್ಟು 28 ಮೊಬೈಲ್‌ ಟೆಸ್ಟಿಂಗ್‌ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಹೆಚ್ಚು ಸೋಂಕಿತರು ಕಂಡು ತಾಲೂಕು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಜಿಲ್ಲೆಯ ಎಲ್ಲ ತಾಲೂಕು ಸರ್ಕಾರಿಆಸ್ಪತ್ರೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಸ್ವ್ಯಾಬ್‌ ಸಂಗ್ರಹಿಸಲಾಗುತ್ತಿದೆ.

ಹೋಂ ಐಸೋಲೇಷನ್‌ಗೆ ಒತ್ತು: ಹೆಚ್ಚು ಪರೀಕ್ಷೆಗಳು ನಡೆಯುತ್ತಿರುವುದರಿಂದ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರಿಂದ ಬೆಡ್‌ಗಳ ಸಮಸ್ಯೆ ಕಾಡಬಾರದು ಎಂಬ ಉದ್ದೇಶದಿಂದ ಹೋಂ ಐಸೋಲೇಷನ್‌ಗೆ ಒತ್ತು ನೀಡಲಾಗುತ್ತಿದೆ. ಸೋಂಕಿತರು ಮನೆಯಲ್ಲಿಯೇ ಚಿಕಿತ್ಸೆ ಪಡೆಯಲು ಪ್ರತ್ಯೇಕ ಕೊಠಡಿ ಇದ್ದರೆ ಮಾತ್ರ ಚಿಕಿತ್ಸೆ ಒತ್ತು ನೀಡಲಾಗುತ್ತಿದೆ. ಪ್ರತ್ಯೇಕ ಕೊಠಡಿ ಇಲ್ಲದ ಸೋಂಕಿತರನ್ನು ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತದೆ.

ಜಿಲ್ಲೆಯಲ್ಲಿ ಇದುವರೆಗೂ ವಯಸ್ಸಾದ ಹಾಗೂ ಇತರೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಕೋವಿಡ್ ಸೋಂಕಿತರು ಹೆಚ್ಚು ಸಾವನ್ನಪ್ಪುತ್ತಿದ್ದಾರೆ. ಇದುವರಿಗೂ ಜಿಲ್ಲೆಯಲ್ಲಿ ಕೋವಿಡ್ ದಿಂದ 86 ಮಂದಿ ಮೃತಪಟ್ಟಿದ್ದಾರೆ. ಸಾವಿನ ಪ್ರಮಾಣ ತಡೆಗಟ್ಟಲು ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲು ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆ ನಿಟ್ಟಿನಲ್ಲಿ ಕ್ರಮ ವಹಿಸಲಾಗಿದೆ. – ಡಾ.ಟಿ.ಎನ್‌.ಧನಂಜಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ

 

ಎಚ್‌.ಶಿವರಾಜು

ಟಾಪ್ ನ್ಯೂಸ್

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.