Pandavapur: ಹೋರಾಡಿ ಬಸ್ ನಿಲುಗಡೆ ಸೇವೆ ಪಡೆದ ವಿದ್ಯಾರ್ಥಿಗಳು
Team Udayavani, Nov 11, 2023, 4:38 PM IST
ಪಾಂಡವಪುರ: ಕೆಎಸ್‌ಆರ್‌ಟಿಸಿ ಬಸ್ ನಿಲುಗಡೆಗೆ ಆಗ್ರಹಿಸಿ ತಾಲೂಕಿನ ಕೆ.ಹೊಸೂರು ಗೇಟ್ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ತಾಲೂಕಿನ ಕೆ.ಹೊಸೂರು ಗೇಟ್ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ರಸ್ತೆ ತಡೆದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೆ.ಹೊಸೂರು ಗೇಟ್ ಬಳಿ ಪಾಂಡವಪುರ-ನಾಗಮಂಗಲ ಮುಖ್ಯರಸ್ತೆ ತಡೆದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಪಾಂಡವಪುರ-ನಾಗಮಂಗಲ, ಜಕ್ಕನಹಳ್ಳಿ ಮಾರ್ಗವಾಗಿ ಸಂಚರಿಸುವ ಸಾರಿಗೆ ಬಸ್‌ಗಳು ಕೆ.ಹೊಸೂರು ಗೇಟ್ ಬಳಿ ನಿಲುಗಡೆ ಮಾಡುತ್ತಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ತೆರಳಲು ಅನಾನೂಕೂಲ ಉಂಟಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದರು.
ಕಳೆದ ಆರು ತಿಂಗಳಿಂದಲೂ ಸಹ ನಮಗೆ ಇದೇ ರೀತಿಯ ಸಮಸ್ಯೆ ಉಂಟಾಗುತ್ತಿದೆ. ಬಸ್ ನಿಲುಗಡೆಗೆ ಆಗ್ರಹಿಸಿ ಹಲವು ಬಾರಿ ಪ್ರತಿಭಟನೆ ನಡೆಸಿದ್ದೇವೆ. ಆದರೂ ಸಹ ಕೆಎಸ್‌ಆರ್‌ಟಿಸಿ ಅಧಿ ಕಾರಿಗಳು ಕೆ.ಹೊಸೂರು ಗೇಟ್ ಬಳಿ ಬಸ್ ನಿಲ್ಲಿಸುವ ವ್ಯವಸ್ಥೆ ಮಾಡಿಲ್ಲ ಎಂದು ಕಿಡಿಕಾರಿದರು.
ನಾಗಮಂಗಲ ಕಡೆಗೆ ಹೋಗುವ ಎಕ್ಸ್‌ಪ್ರೆಸ್ ಬಸ್‌ಗಳು ನಿಲ್ಲಿಸುವುದು ಬೇಡ, ಸ್ಥಳೀಯವಾಗಿ ಓಡಾಡುವ ಬಸ್ ಗಳು ನಿಲುಗಡೆ ನೀಡಿದರೆ ಸಾಕು. ಆದರೆ, ಈ ರಸ್ತೆಯಲ್ಲಿ ಸ್ಥಳೀಯವಾಗಿ ಓಡಾಡುವ ಬಸ್ ಗಳು ಸಹ ಕೆ.ಹೊಸೂರು ಗೇಟ್ ನಲ್ಲಿ ನಿಲ್ಲಿಸುವುದಿಲ್ಲ. ಪಾಂಡವಪುರದಿಂದ ಬರುವಾಗಲೂ ಸಹ ಬಸ್ ಗಳು ನಮ್ಮೂರು ಗೇಟ್ ಬಳಿ ನಿಲ್ಲಿಸುವುದಿಲ್ಲ. ನಿರ್ವಾಹಕರು ವಿದ್ಯಾರ್ಥಿಗಳಿಗೆ ಬಾಯಿಗೆ ಬಂದಂತೆ ಬೈಯುತ್ತಾರೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡರು.
ಅಧಿಕಾರಿಗೆ ತರಾಟೆ: ಘಟನಾ ಸ್ಥಳಕ್ಕೆ ಆಗಮಿಸಿದ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ಅಪ್ಪಿರೆಡ್ಡಿ ಅವರನ್ನು ಸಹ ತರಾಟೆಗೆ ತೆಗೆದುಕೊಂಡು. ಸ್ಥಳೀಯವಾಗಿ ಓಡಾಡುವ ಬಸ್ ಗಳು ಕೆ.ಹೊಸೂರು ಗೇಟ್ ಬಳಿ ಸ್ಥಗಿತಗೊಳಿಸುವಂತೆ ಕ್ರಮಕೈಗೊಳ್ಳದಿದ್ದರೆ ನಮ್ಮ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ. ಒಂದು ದಿನ ನಮ್ಮ ಶಾಲೆಗಳು ವ್ಯರ್ಥವಾದರೂ ಪರವಾಗಿಲ್ಲ,. ಹೋರಾಟ ಮುಂದುವರಿಸುತ್ತೇವೆ ಎಂದು ತರಾಟೆಗೆ ತೆಗೆದುಕೊಂಡರು.
ಪುಟ್ಟರಾಜು ಕರೆ: ಸಾರಿಗೆ ವ್ಯವಸ್ಥಾಪಕ ಅಪ್ಪಿರೆಡ್ಡಿ ಗೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಅವರು ದೂರವಾಣಿ ಕರೆಮಾಡಿ ವಿದ್ಯಾರ್ಥಿಗಳಿಗೆ ಸಮಸ್ಯೆ ಯಾಗದಂತೆ ಕ್ರಮಕೈಗೊಳ್ಳುವಂತೆ ಸೂಚಿಸಿದರು.
ಭರವಸೆ: ಬಳಿಕ ಸ್ಥಳೀಯವಾಗಿ ಓಡಾಡುವ ಬಸ್ ಎಲ್ಲಾ ಬಸ್ ಗಳನ್ನು ಕೆ.ಹೊಸೂರು ಗೇಟ್ ಬಳಿ ನಿಲ್ಲಿಸಲು ಹಾಗೂ ಒಂದು ಬಸ್ ಕೆ.ಹೊಸೂರು ಗ್ರಾಮದ ಮೇಲೆ ಓಡಾಡಲು ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದ ಮೇರೆಗೆ ಪ್ರತಿಭಟನೆ ವಾಪಸ್ ಪಡೆದರು.
ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳಾದ ಶ್ರುತಿ, ಸುಚಿತ್ರ, ಭಾವನ ಸೇರಿದಂತೆ ಹಲವರು ಹಾಜರಿದ್ದರು.
2 ಕಿ.ಮೀ. ದೂರ ನಿಲ್ಲಿಸಿದರೆ ನಡೆದುಕೊಂಡು ಬರಬೇಕು:
ಕೆಲವು ಬಸ್ ಡ್ರೈವರ್‌ಗಳು ನಮ್ಮೂರು ಗೇಟ್ ಬಿಟ್ಟು ಎರಡು ಕಿ.ಮೀ. ದೂರುದ ಟಿ.ಎಸ್.ಛತ್ರ ಗ್ರಾಮದಲ್ಲಿ ನಿಲ್ಲಿಸಿದ್ದಾರೆ. ಸಂಜೆಯ ವೇಳೆಯಲ್ಲಿ ಹೆಣ್ಣುಮಕ್ಕಳು ಎರಡು ಕಿ.ಮೀ. ದೂರದಿಂದ ನಡೆದುಕೊಂಡು ಬರಲು ಸಾಧ್ಯವೇ ಎಂದು ಪ್ರಶ್ನಿಸಿದ ಪ್ರತಿಭಟನಾನಿರತ ವಿದ್ಯಾರ್ಥಿಗಳು, ಕೆಲ ಕಂಡಕ್ಟರ್‌ಗಳು ವಿದ್ಯಾರ್ಥಿಗಳಿಗೆ ಬಾಯಿಗೆ ಬಂದಂತೆ ಬೈಯುತ್ತಾರೆ ಎಂದು ಹರಿಹಾಯ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.