ಮಿಮ್ಸ್‌ನಲ್ಲಿ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳೇ ತಂತ್ರಜ್ಞರು!

ಥಿಯರಿಗಿಂತ ಪ್ರಾಕ್ಟಿಕಲ್ಸ್ಗೇ ಪ್ರಾಮುಖ್ಯತೆ • ಪರಿಣಾಮ ಫ‌ಲಿತಾಂಶದಲ್ಲಿ ಕುಸಿತ ••ಕಮರುತ್ತಿರುವ ವಿದ್ಯಾರ್ಥಿಗಳ ಭವಿಷ್ಯ

Team Udayavani, Jun 16, 2019, 1:16 PM IST

mandya-tdy-1..

ಮಿಮ್ಸ್‌ ಕಟ್ಟಡ

ಮಂಡ್ಯ: ಮಿಮ್ಸ್‌ ಆಸ್ಪತ್ರೆಯಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳನ್ನೇ ತಾಂತ್ರಿಕ ವಿಭಾಗಗಳಲ್ಲಿ ತಂತ್ರಜ್ಞರನ್ನಾಗಿ ದುಡಿಸಿಕೊಳ್ಳಲಾಗುತ್ತಿದೆ. ಈ ವಿದ್ಯಾರ್ಥಿಗಳು ಥಿಯರಿಗಿಂತಲೂ ಹೆಚ್ಚಿನ ಸಮಯನ್ನು ಪ್ರಾಯೋಗಿಕ ತರಗತಿಗಳಲ್ಲೇ ಕಳೆಯುತ್ತಿದ್ದಾರೆ. ಥಿಯರಿ ಓದುವುದಕ್ಕೆ ಹಾಗೂ ಅದನ್ನು ಕರಗತ ಮಾಡಿಕೊಂಡು ಪರೀಕ್ಷೆ ಬರೆಯುವಲ್ಲಿ ವಿಫ‌ಲರಾಗುತ್ತಿದ್ದು, ಇದರ ಪರಿಣಾಮ ಪ್ರತಿ ವರ್ಷ ಪ್ಯಾರಾ ಮೆಡಿಕಲ್ ವಿಭಾಗದ ಫ‌ಲಿತಾಂಶ ಕುಸಿಯುತ್ತಲೇ ಇದೆ.

ಮಿಮ್ಸ್‌ನಲ್ಲಿ ತಂತ್ರಜ್ಞರು ಮಾಡಬೇಕಾದ ಬಹಳಷ್ಟು ಕೆಲಸವನ್ನು ಪ್ರಾಕ್ಟಿಕಲ್ ಹೆಸರಿನಲ್ಲಿ ವಿದ್ಯಾರ್ಥಿಗಳೇ ಮಾಡುತ್ತಿದ್ದಾರೆ. ಪ್ಯಾರಾಮೆಡಿಕಲ್ ಕಲಿಯಲು ಬರುವ ವಿದ್ಯಾರ್ಥಿಗಳ ಪೈಕಿ ಹುಡುಗಿಯರಿಗಿಂತ ಹುಡುಗರಿಗೆ ಹೆಚ್ಚು ಕೆಲಸ ನೀಡಲಾಗುತ್ತಿದೆ. ಹಗಲು-ರಾತ್ರಿ ಎನ್ನದೆ ದುಡಿಸಿಕೊಳ್ಳುತ್ತಿರುವುದರಿಂದ ಅವರಿಗೆ ಓದುವುದಕ್ಕೆ ಸಮಯಾವಕಾಶವೇ ಸಿಗದಂತಾಗಿದೆ. ಈ ಕೆಲಸದ ಒತ್ತಡ ಸಹಿಸಲಾಗದೆ ಎಷ್ಟೋ ವಿದ್ಯಾರ್ಥಿಗಳು ಅರ್ಧಕ್ಕೇ ಕೋರ್ಸ್‌ ಬಿಟ್ಟು ಹೋಗುತ್ತಿದ್ದಾರೆ. ಇದು ವಿಚಿತ್ರವೆನಿಸಿದರೂ ಸತ್ಯವಾಗಿದೆ.

ಆರು ವಿಭಾಗಗಳು: ಪ್ಯಾರಾಮೆಡಿಕಲ್ ಅಧ್ಯಯನದಲ್ಲಿ ಮೆಡಿಕಲ್ ಲ್ಯಾಬೋರೇಟರಿ, ಹೆಲ್ತ್ ಇನ್ಸ್‌ ಪೆಕ್ಟರ್‌, ಇಮೇಜಿಂಗ್‌ ತಂತ್ರಜ್ಞಾನ, ಆಪರೇಷನ್‌ ಥಿಯೇಟರ್‌ ಟೆಕ್ನಾಲಜಿ, ಅಪ್ತಾಲ್ಮಿಕ್‌ ಟೆಕ್ನಾಲಜಿ, ಮೆಡಿಕಲ್ ರೆಕಾರ್ಡ್‌ ಟೆಕ್ನಾಲಜಿ ಎಂಬ ಆರು ವಿಭಾಗಗಳಿವೆ.

ಪ್ರತಿ ವರ್ಷ ಒಂದೊಂದು ವಿಭಾಗಕ್ಕೂ ತಲಾ 20 ವಿದ್ಯಾರ್ಥಿಗಳಂತೆ ದಾಖಲು ಮಾಡಿಕೊಳ್ಳಲಾಗುತ್ತಿದೆ. ಇದರಲ್ಲಿ ಅರ್ಧದಷ್ಟು ವಿದ್ಯಾರ್ಥಿಗಳು ಮಾತ್ರ ಉತ್ತೀರ್ಣರಾಗುತ್ತಿದ್ದು, ಫ‌ಲಿತಾಂಶ ವರ್ಷದಿಂದ ವರ್ಷಕ್ಕೆ ಕ್ಷೀಣಿಸುತ್ತಿದೆ. ಈ ಫ‌ಲಿತಾಂಶವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮಿಮ್ಸ್‌ ನಿರ್ದೇಶಕರು ಸೇರಿದಂತೆ ಪ್ಯಾರಾಮೆಡಿಕಲ್ ವಿಭಾಗದ ಮುಖ್ಯಸ್ಥರು ಯಾವುದೇ ಕ್ರಮವನ್ನೂ ಕೈಗೊಂಡಿಲ್ಲ.

ಫ‌ಲಿತಾಂಶ ಕುಸಿತ: 2016ರಲ್ಲಿ 117 ವಿದ್ಯಾರ್ಥಿಗಳಿಗೆ 79, 20017ರಲ್ಲಿ 120 ವಿದ್ಯಾರ್ಥಿಗಳಿಗೆ 66 ಹಾಗೂ 2018ರಲ್ಲಿ 105 ವಿದ್ಯಾರ್ಥಿಗಳಿಗೆ 67 ವಿದ್ಯಾರ್ಥಿಗಳು ಮಾತ್ರ ಪ್ಯಾರಾಮೆಡಿಕಲ್ನಲ್ಲಿ ಉತ್ತೀರ್ಣರಾಗಿದ್ದಾರೆ. ಅಲ್ಲದೆ, ಡಿಸ್ಟಿಂಕ್ಷನ್‌ನಲ್ಲಿ ಪಾಸಾದ ವಿದ್ಯಾರ್ಥಿಗಳನ್ನೂ ಕಾಲೇಜಿನಲ್ಲಿ ಕಾಣದಂತಾಗಿದೆ. ಪ್ರತಿ ವರ್ಷ ಅರ್ಧಕ್ಕೆ ಕೋರ್ಸ್‌ ಗಳನ್ನು ಬಿಟ್ಟುಹೋಗುವವರ ಸಂಖ್ಯೆಯೇ ಹೆಚ್ಚಾಗಿದೆ.

ಮೊದಲನೇ ವರ್ಷದಲ್ಲಿ ಎಲ್ಲಾ ವಿಭಾಗದವರಿಗೂ ಒಂದೇ ಮಾದರಿಯ ತರಗತಿಯನ್ನು ತೆಗೆದುಕೊಳ್ಳಲಾಗುತ್ತದೆ. ಎರಡನೇ ವರ್ಷದಿಂದ ಅವರವರ ಕೋರ್ಸ್‌ಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು ಪ್ರತ್ಯೇಕಗೊಳ್ಳುತ್ತಾರೆ.

ಆಸ್ಪತ್ರೆಯ ಎಕ್ಸ್‌-ರೇ, ಲ್ಯಾಬೋರೇಟರಿ, ಡಯಾಲಿಸಿಸ್‌, ಎಂಆರ್‌ಡಿ, ರಕ್ತನಿಧಿ ಕೇಂದ್ರ, ಪೆಥಾಲಜಿ, ಸ್ಕ್ಯಾನಿಂಗ್‌ ಸೆಂಟರ್‌, ಎಕೋ, ಇಸಿಜಿ, ಶಸ್ತ್ರಚಿಕಿತ್ಸಾ ಕೊಠಡಿ ಸೇರಿದಂತೆ ವಿವಿಧ ತಾಂತ್ರಿಕ ವಿಭಾಗದಲ್ಲಿ ಸರ್ಕಾರಿ ಸಿಬ್ಬಂದಿ ಇದ್ದರೂ ಬೇಡಿಕೆಯಷ್ಟಿಲ್ಲ. ಈ ಕೊರತೆ ನೀಗಿಸಲು ಹೊರ ಗುತ್ತಿಗೆ ನೌಕರರನ್ನು ನೇಮಕ ಮಾಡಿಕೊಳ್ಳಲಾಗಿದೆ. ಇವ‌ರ ನಡುವೆಯೂ ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಕೆಲಸದ ಒತ್ತಡ ಹಾಕಲಾಗುತ್ತಿದೆ. ತಂತ್ರಜ್ಞರ ನಿಗದಿಯಷ್ಟು ಇಲ್ಲದೆ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಅಧಿಕವಾಗಿರುವುದರಿಂದ ರೋಗಿಗಳ ಒತ್ತಡವನ್ನು ದೂರ ಮಾಡುವ ಉದ್ದೇಶದಿಂದ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳನ್ನೇ ಅಲ್ಲಿನ ಕೆಲಸಕ್ಕೆ ಹೆಚ್ಚು ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂಬ ಮಾತುಗಳು ಮಿಮ್ಸ್‌ ವಲಯದಿಂದಲೇ ಕೇಳಿ ಬರುತ್ತಿವೆ.

ವಾರದಲ್ಲಿ ಮೂರು ದಿನ ಥಿಯರಿ: ಪ್ರತಿ ದಿನ ಪ್ಯಾರಾಮೆಡಿಕಲ್ ವಿದ್ಯಾರ್ಥಿಗಳಿಗೆ ಥಿಯರಿ ಇರುವುದಿಲ್ಲ. ಪ್ರಾಕ್ಟಿಕಲ್ಸ್ನಲ್ಲೇ ಹೆಚ್ಚು ಸಮಯ ಕಳೆಯುತ್ತಾರೆ. ಆಯಾ ವಿಭಾಗದ ಬೋಧಕರು ವಾರದಲ್ಲಿ ಎರಡರಿಂದ ಮೂರು ದಿನ ಮಾತ್ರ ಥಿಯರಿ ತರಗತಿಗಳನ್ನು ತೆಗೆದುಕೊಳ್ಳುವರು. ಹಿಂದೆಲ್ಲಾ ಥಿಯರಿಗೆ 45 ಅಂಕಗಳಿದ್ದು, ಈಗ ಗರಿಷ್ಠ ಅಂಕವನ್ನು 100 ಕ್ಕೆ ನಿಗದಿಪಡಿಸಲಾಗಿದೆ. ಪ್ರಾಕ್ಟಿಕಲ್ಸ್ ವಿದ್ಯಾರ್ಥಿಗಳಿಗೆ ಎಷ್ಟು ಮುಖ್ಯವೋ ಅದೇ ರೀತಿ ಥಿಯರಿಯೂ ಮುಖ್ಯವಾಗಿದೆ. ಹೆಚ್ಚು ಕಾಲ ಆಸ್ಪತ್ರೆಯ ವಿವಿಧ ತಾಂತ್ರಿಕ ವಿಭಾಗದಲ್ಲೇ ಇರುವ ವಿದ್ಯಾರ್ಥಿಗಳು ಥಿಯರಿಯನ್ನು ಓದಲು, ಅದನ್ನು ಅರ್ಥೈಸಿಕೊಂಡು ಬರೆಯಲಾಗದೆ ಪರೀಕ್ಷೆಯಲ್ಲಿ ನಪಾಸಾಗುತ್ತಿದ್ದಾರೆ. ಇದು ಫ‌ಲಿತಾಂಶ ಕುಸಿಯುವುದಕ್ಕೆ ಮುಖ್ಯ ಕಾರಣ ಎನ್ನಲಾಗಿದೆ.

ಕಮರುತ್ತಿರುವ ಭವಿಷ್ಯ: ಬೋಧಕರು ವಿದ್ಯಾರ್ಥಿಗಳನ್ನು ಆಸ್ಪತ್ರೆಯ ವಿವಿಧ ವಿಭಾಗಗಳಲ್ಲಿ ಪ್ರಾಯೋಗಿಕ ತರಗತಿ ಹೆಸರಿನಲ್ಲಿ ದುಡಿಸಿಕೊಳ್ಳುವ ಮೂಲಕ ಅವರ ಭವಿಷ್ಯವನ್ನು ಕಮರಿಹೋಗುವಂತೆ ಮಾಡುತ್ತಿದ್ದಾರೆ. ಪ್ಯಾರಾಮೆಡಿಕಲ್ ಮಹತ್ವವನ್ನು ಬೋಧಕರು ವಿದ್ಯಾರ್ಥಿಗಳಿಗೆ ತಿಳಿಸಿಕೊಡುತ್ತಿಲ್ಲ. ಕೋರ್ಸ್‌ನ ಉಪಯೋಗ ಪಡೆದು ಭವಿಷ್ಯವನ್ನು ಯಾವ ರೀತಿ ಉಜ್ವಲಗೊಳಿಸಿಕೊಳ್ಳಬೇಕೆಂಬ ವಿಚಾರ ತಿಳಿಯದ ವಿದ್ಯಾರ್ಥಿಗಳು ಅರ್ಧಂಬರ್ಧ ಕೋರ್ಸ್‌ ಮಾಡಿ ಖಾಸಗಿ ಆಸ್ಪತ್ರೆಗಳಲ್ಲಿ ಕಡಿಮೆ ಸಂಬಳಕ್ಕೆ ದುಡಿಯುವಂತಹ ಸ್ಥಿತಿ ನಿರ್ಮಾಣವಾಗಿದೆ.

ಟೆಕ್ನಿಷಿಯನ್ಸ್‌ಗಳ ಜೊತೆ ವಿದ್ಯಾರ್ಥಿಗಳ ಹೊಂದಾಣಿಕೆ: ಪ್ಯಾರಾಮೆಡಿಕಲ್ ಅಧ್ಯಯನ ಮಾಡುವ ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿರುವ ಆಯಾ ವಿಭಾಗಗಳ ತಂತ್ರಜ್ಞರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಕಲಿಯುವ ಆಸಕ್ತಿಯನ್ನು ತೋರ್ಪಡಿಸುತ್ತಿದ್ದಾರೆ. ಏಕೆಂದರೆ, ಪ್ಯಾರಾಮೆಡಿಕಲ್ ಕೋರ್ಸ್‌ ಪೂರ್ಣಗೊಳಿಸದಿದ್ದರೂ ಆಸ್ಪತ್ರೆಗಳಲ್ಲಿ ಕಲಿಸಿದ ತಂತ್ರಜ್ಞರ ನೆರವಿನಿಂದ ಖಾಸಗಿ ಆಸ್ಪತ್ರೆಗಳಲ್ಲಿ ಕೆಲಸ ಗಿಟ್ಟಿಸಿಕೊಳ್ಳಬೇಕೆಂಬ ಉದ್ದೇಶವೂ ಇದರಲ್ಲಿದೆ. ಇದೇ ಕಾರಣಕ್ಕೆ ತಂತ್ರಜ್ಞರು ಮಾಡಬೇಕಾದ ಕೆಲಸವನ್ನೆಲ್ಲಾ ವಿದ್ಯಾರ್ಥಿಗಳೇ ಮಾಡುತ್ತಿದ್ದಾರೆ. ತಂತ್ರಜ್ಞರ ಗೈರಾದಾಗಲೂ ವಿದ್ಯಾರ್ಥಿಗಳೇ ಎಲ್ಲಾ ಕೆಲಸವನ್ನು ನಿಭಾಯಿಸುತ್ತಿದ್ದು, ಥಿಯರಿ ಬಗ್ಗೆ ಯಾರೂ ಹೆಚ್ಚು ತಲೆಕೆಡಿಸಿಕೊಳ್ಳುತ್ತಿಲ್ಲ. ಇದು ಫ‌ಲಿತಾಂಶ ಕುಸಿಯುವುದಕ್ಕೆ ಮತ್ತೂಂದು ಕಾರಣವಾಗಿದೆ. ಕಲಿತಷ್ಟೇ ಸಾಕು ಎಂದು ಹಲವು ವಿದ್ಯಾರ್ಥಿಗಳು ಕೋರ್ಸ್‌ ಕೈಬಿಟ್ಟು ಉದ್ಯೋಗದ ಹಾದಿ ಹಿಡಿಯುತ್ತಿದ್ದಾರೆ.

● ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.