ಜನರು ಪೊಲೀಸರಿಗೆ ಸಹಕರಿಸಬೇಕು
Team Udayavani, Dec 25, 2019, 3:49 PM IST
ನಾಗಮಂಗಲ: ಪೊಲೀಸರೆಂದರೆ ಸಾರ್ವಜನಿಕರಲ್ಲಿ ಒಂದು ರೀತಿಯ ಭಯದ ವಾತಾವರಣವಿದ್ದು ಠಾಣೆಯ ಮೆಟ್ಟಿಲೇರಲು ಹೆದರುತ್ತಾರೆ. ಅವರಲ್ಲಿ ಮಾನಸಿಕ ಸ್ಥೈರ್ಯ ತುಂಬಿ ಇಂತಹ ವಾತಾವರಣದಿಂದ ಹೊರಗೆ ತರಬೇಕಾದ ಕೆಲಸವಾಗಬೇಕು ಎಂದು ನಾಗಮಂಗಲ ಉಪವಿಭಾಗದ ಡಿವೈಎಸ್ಪಿ ವಿಶ್ವನಾಥ್ ಹೇಳಿದರು.
ಪಟ್ಟಣದ ಟಿ.ಬಿ.ಬಡಾವಣೆಯ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಪೊಲೀಸ್ ಜನಸ್ನೇಹಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಪೊಲೀಸರು ಮತ್ತು ನಾಗರಿಕರಲ್ಲಿ ಒಂದು ರೀತಿಯ ಸಂಬಂಧವಿದೆ. ಅನೇಕ ಪ್ರಕರಣಗಳಲ್ಲಿ ಸಾಕಷ್ಟು ಸುಳಿವುಗಳು ಅಪರಾಧಿಗಳನ್ನು ಹಿಡಿಯಲು ಸಹಕಾರಿಯಾಗುತ್ತದೆ. ಆದರೂ ಸಾರ್ವಜನಿಕರು ಭಯಭೀತರಾಗಿಯೇ ಠಾಣೆ ಮೆಟ್ಟಿಲು ಏರುವುದರ ಜತೆಗೆ ಪೊಲೀಸರೆಂದರೆ ಹೆದರುತ್ತಾರೆ. ನಾವು ಸಹ ಅವರಿಗೆ ಸ್ನೇಹಿತರು ಎಂಬ ವಾತಾವರಣವನ್ನು ಸೃಷ್ಟಿಮಾಡಬೇಕು ಎಂದರು.
ವೃತ್ತ ನಿರೀಕ್ಷಕ ರಾಜೇಂದ್ರ ಮಾತನಾಡಿ, ಸಾರ್ವಜನಿಕರು ಅಪರಾಧ ಪ್ರಕರಣದ ಬಗ್ಗೆ ದೂರು ನೀಡಲು ಬಂದರೆ ದಾಖಲು ಮಾಡಲು ತಡ ಮತ್ತು ಹಿಂಜರಿಯುತ್ತಿರುವುದರಿಂದ ಅಪರಾಧಿಗಳು ತಪ್ಪಿಸಿಕೊಳ್ಳಲು ಸಹಕಾರಿಯಾಗುತ್ತದೆ. ಕೆಲವು ಪ್ರಕರಣಗಳಲ್ಲಿ ಅಪರಾಧಿಗಳನ್ನು ಪೊಲೀಸರೇ ರಕ್ಷಿಸುತ್ತಾರೆಂಬ ಅಪವಾದದಿಂದ ನಾವು ಹೊರಬರಬೇಕಾಗಿದೆ. ಒಂದೊಂದು ಬಾರಿ ನಿರಪರಾಧಿಗಳನ್ನು ಅಪರಾಧಿಗಳನ್ನಾಗಿ ಮಾಡುವ ಸಂದರ್ಭಗಳು ಉಂಟಾಗುತ್ತವೆ.
ಅಂಥ ಪ್ರಕರಣಗಳನ್ನು ಸೂಕ್ಷ್ಮವಾಗಿ ಅವಲೋಕಿಸಬೇಕಾದ ಕರ್ತವ್ಯ ಪೊಲೀಸರದೆಂದು ತಿಳಿಸಿದರು. ಜನಸ್ನೇಹಿ ಪೊಲೀಸ್ ಕಾರ್ಯಾಗಾರ 2017ರಲ್ಲಿ ಪ್ರಾರಂಭವಾಗಿ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ವರ್ಷವೂ ಹಿರಿಯ ಅಧಿಕಾರಿಗಳ ಆದೇಶದ ಮೇರೆಗೆ ಮುಂದುವರೆದು ಮತ್ತೂಮ್ಮೆ ಯಶಸ್ವಿಗೊಳಿಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಎಂದು ಹೇಳಿದರು. ಪಿಎಸ್‌ಐಗಳಾದ ರವಿಕಿರಣ್, ಬಸವರಾಜ್, ರಾಮಚಂದ್ರು, ಲಕ್ಷ್ಮಣ್, ಶಿವಕುಮಾರ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.