Srirangapatna: ಬಿಸ್ಲೆರಿ ನೀರಿನಲ್ಲಿ ನಾಟಿ ಕಾರ್ಯ !
Team Udayavani, Sep 4, 2023, 11:41 AM IST
ಶ್ರೀರಂಗಪಟ್ಟಣ: ತಮಿಳುನಾಡಿಗೆ ಕೆಆರ್‌ಎಸ್ ಜಲಾಶಯದಿಂದ ನೀರು ಬಿಡುಗಡೆ ಹಿನ್ನೆಲೆ ಕಾವೇರಿ ಕಿಚ್ಚು ಇಲ್ಲಿ ಮುಂದುವರೆದಿದ್ದು, ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ವಿನೂತನ ಪ್ರತಿಭಟನೆ ನಡೆಸಲಾಯಿತು.
ವೇದಿಕೆ ಅಧ್ಯಕ್ಷ ಶಂಕರ್ ಬಾಬು ನೇತೃತ್ವದಲ್ಲಿ ಬಿಸ್ಲೆರಿ ನೀರಿನಲ್ಲಿ ನಾಟಿ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ರೈತರ ಬೆಳೆಗಳಿಗೆ ನೀರು ಕೊಡುತ್ತಿಲ್ಲ, ತಮಿಳುನಾಡಿಗೆ ನೀರು ಹರಿಸುತ್ತಿದ್ದಾರೆ ಎಂದು ಆಕ್ರೋಶತರಾದ ರೈತರು, ಕಾರ್ಯಕರ್ತರು ಹನುಮಂತಪುರ ಗ್ರಾಮದ ಗದ್ದೆಯಲ್ಲಿ ನಾಟಿ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ಕಾವೇರಿ ನೀರು ಇಲ್ಲದೆ ಭತ್ತದ ನಾಟಿ ಮಾಡಲು ಆಗುತ್ತಿಲ್ಲ, ಬಿಸ್ಲೆರಿ ನೀರಿನಲ್ಲಿ ನಾಟಿ ಮಾಡುವ ಪರಿಸ್ಥಿತಿ ಬಂದಿದೆ ಎಂದು ಹೇಳಿ ಕೂಡಲೇ ನೀರು ನಿಲ್ಲಿಸಿ ರಾಜ್ಯ ಕಾಪಾಡಬೇಕು ಎಂದು ಆಗ್ರಹಿಸಿದರು.
ರೈತರ ಸಂಕಷ್ಟಕ್ಕೆ ಸ್ಪಂದಿಸದ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿ ಗ್ರಾಮದ ರಾಮಚಂದ್ರು ಎಂಬವರ ಜಮೀನಿನಲ್ಲಿ ನಾಟಿ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಭತ್ತದ ನಾಟಿ ಮಾಡಿ, ಬಿಸ್ಲೇರಿ ನೀರೆರೆದು ಪ್ರತಿಭಟನೆ ನಡೆಸಿದರು.
ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿದ ಮಂಡ್ಯ ರಕ್ಷಣಾ ವೇದಿಕೆ ಒತ್ತಾಯ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್ ಮುಂಡಾಡಿ
Kota: ಮರೆಯಾಗುತ್ತಿವೆ ಮೇಟಿ ಪೂಜೆ, ರಾಶಿ ಪೂಜೆ
Singham Again vs Bhool Bhulaiyaa 3: ಮೊದಲ ದಿನ ಬಾಕ್ಸ್ ಆಫೀಸ್‌ನಲ್ಲಿ ಗೆದ್ದವರು ಯಾರು?
Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.