ತಿಂಗಳಿಗೊಮ್ಮೆ ಪೊಲೀಸರಿಗೆ ಆರೋಗ್ಯ ತಪಾಸಣೆ ಅಗತ್ಯ
ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ಮನೋಚೈತನ್ಯ ಕಾರ್ಯಾಗಾರ ಆರೋಗ್ಯ ಸೌಲಭ್ಯಗಳಿದ್ದರೂ ಸದುಪಯೋಗದ ಕೊರತೆ
Team Udayavani, May 4, 2019, 1:04 PM IST
ಮಂಡ್ಯದಲ್ಲಿ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನಾಲ್ಕು ದಿನ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಮನೋ ಚೈತನ್ಯ ಕಾರ್ಯಾಗಾರಕ್ಕೆ ಎಸ್ಪಿ ಶಿವಪ್ರಕಾಶ್ ದೇವರಾಜು ಚಾಲನೆ ನೀಡಿದರು.
ಮಂಡ್ಯ: ಪೊಲೀಸ್ ಇಲಾಖೆಯ ಒತ್ತಡದ ಕೆಲಸದ ನಡುವೆಯೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು 40 ವರ್ಷ ಮೀರಿದ ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿಗಳು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜ್ ಹೇಳಿದರು.
ನಗರದ ಚಾಮುಂಡೇಶ್ವರಿ ದೇವಾಲಯದ ಆವರಣದಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಎಸ್‌ಎಸ್‌ಎನ್‌ಎಂಸಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಶುಕ್ರವಾರ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನಾಲ್ಕು ದಿನಗಳ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಮನೋ ಚೈತನ್ಯ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದರು.
ಆರೋಗ್ಯ ತಪಾಸಣೆ: ಯಾವುದೇ ವ್ಯಕ್ತಿಗೆ 40 ವರ್ಷ ಮೀರಿದರೆ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಳ್ಳುತ್ತ್ತದೆ. ಹೀಗಾಗಿ 40 ವರ್ಷ ಮೀರಿದ ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿ ಪ್ರತಿ ತಿಂಗಳು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿಕೊಂಡಲ್ಲಿ ಕರ್ನಾಟಕ ರಾಜ್ಯದಲ್ಲಿ ಸರ್ಕಾರಿ ನೌಕರರಿಗೆ ಹೆಚ್ಚಿನ ಆರೋಗ್ಯ ಸೌಲಭ್ಯದ ಅವಕಾಶಗಳಿವೆ. ಇಷ್ಟೆಲ್ಲಾ ಆರೋಗ್ಯ ತಪಾಸಣೆಗೆ ಅವಕಾಶಗಳಿದ್ದರೂ, ಆರೋಗ್ಯ ನಿರ್ಲಕ್ಷ್ಯ ವಹಿಸುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ನಿರ್ಲಕ್ಷ್ಯ ಬಿಟ್ಟು ಆರೋಗ್ಯ ಕಾಳಜಿ ಮಾಡಬೇಕು ಎಂದು ಹೇಳಿದರು.
ಆರೋಗ್ಯಕರ ಸಮಾಜ: ಡಾ.ಎನ್.ಸೋಮಶೇಖರ್ ಮಾತನಾಡಿ, ಹೃದ್ರೋಗ ಕಾಯಿಲೆ ವೇಗವಾಗಿ ಬೆಳೆಯುತ್ತಿದ್ದು, ಹೆಚ್ಚು ಜನರು ಇದ ರಿಂದ ಸಾವಿಗೀಡಾಗುತ್ತಿದ್ದಾರೆ. ಪೊಲೀಸ್ ಹಾಗೂ ವೈದ್ಯ ವೃತ್ತಿಗಳು ಬಿಡುವಿಲ್ಲದ ವೃತ್ತಿಗಳಾಗಿವೆ. ಹಗಲು ರಾತ್ರಿ ಎನ್ನದೇ ಜನರ ಸೇವೆಯನ್ನು ಮಾಡುವ ಶ್ರೇಷ್ಠ ಹಾಗೂ ಒತ್ತಡದ ಕೆಲಸವಾಗಿದೆ. ಹೀಗಾಗಿ ನಾವು ವೃತ್ತಿಯ ಬದ್ಧತೆ ಜೊತೆಗೆ ಆರೋಗ್ಯದ ಕಡೆಗೆ ಗಮನ ಹರಿಸಿದಾಗ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣವಾಗುತ್ತದೆ ಎಂದರು.
ಎಷ್ಟು ಚೆನ್ನಾಗಿ ಆರೋಗ್ಯ ಕಾಪಾಡಿಕೊಳ್ಳುತ್ತೇವೋ ಅಷ್ಟು ದೀರ್ಘ ಕಾಲವೂ ಆರೋಗ್ಯ ಸಮಸ್ಯೆದಿಂದ ಮುಕ್ತರಾಗಿ ಜೀವನ ನಡೆಸಬಹುದು. ಇಲ್ಲದಿದ್ದರೆ ಒಂದಲ್ಲ ಒಂದು ಆರೋಗ್ಯ ಸಮಸ್ಯೆಯಿಂದ ಬಳಲಬೇಕಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಹೃದಯ ಸಂಬಂಧಿಕಾಯಿಲೆಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಎಲ್ಲರೂ ಜಾಗೃತರಾಗಿರುವುದು ಒಳಿತು. ಆಗಾಗ್ಗೆ ಎಲ್ಲ ರೀತಿಯ ಆರೋಗ್ಯ ತಪಾಸಣೆಗೆ ಒಳಗಾಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಲರಾಮೇಗೌಡ, ಡಿವೈಎಸ್ಪಿ ಗಂಗಾಧರಸ್ವಾಮಿ, ವೈದ್ಯಾಧಿಕಾರಿ ಡಾ.ಪ್ರಸಾದ್, ಸ್ತ್ರೀ ರೋಗ ತಜ್ಞೆ ಡಾ. ರೇಣು, ಕಾರ್ಯಕ್ರಮ ಸಂಯೋಜಕ ವಿಶ್ವನಾಥ್ ಇತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC U19 ವನಿತಾ ಟಿ20 ವಿಶ್ವಕಪ್: ಭಾರತಕ್ಕೆ ನಿಕಿ ಪ್ರಸಾದ್ ನಾಯಕಿ
Maharashtra: ಬಾಸ್ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್
PM Modi: ಇಂದು ಕೆನ್-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ
A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್ ಬಿಹಾರಿ ವಾಜಪೇಯಿ
Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.