ಚುಕ್ಕಾಣಿ ಹಿಡಿಯಲು ಆಪರೇಷನ್‌ಗೆ ಸಜ್ಜು

ಅತಿ ಹೆಚ್ಚು ಗ್ರಾಪಂ ಗದ್ದುಗೆ ಹಿಡಿಯಲು ಜೆಡಿಎಸ್‌, ಕಾಂಗ್ರೆಸ್‌, ಬಿಜೆಪಿ ಲೆಕ್ಕಾಚಾರ

Team Udayavani, Jan 1, 2021, 4:48 PM IST

ಚುಕ್ಕಾಣಿ ಹಿಡಿಯಲು ಆಪರೇಷನ್‌ಗೆ ಸಜ್ಜು

ಮಂಡ್ಯ: ಕಳೆದ ಒಂದು ತಿಂಗಳಿನಿಂದ ನಡೆದ ಹಳ್ಳಿ ಪಂಚಾಯ್ತಿ ಎಂಬ ಗ್ರಾಮೀಣ ಚುನಾವಣೆಗೆ ತೆರೆ ಬಿದ್ದಿದ್ದು, ಪಕ್ಷದ ಚಿಹ್ನೆಗಳಲ್ಲಿ ನಡೆಯದಿದ್ದರೂ, ಪಕ್ಷದ ಬೆಂಬಲಿತರಾಗಿಯೇ ಚುನಾವಣೆ ಎದುರಿಸಿದ್ದಾರೆ. ಅದಕ್ಕಾಗಿ ಅಧಿಕಾರ ಹಿಡಿಯುವ ಹೈಡ್ರಾಮಕ್ಕೆ ರಾಜಕೀಯ ಪಕ್ಷಗಳು ಸಜ್ಜಾಗಿವೆ.

ನಮ್ಮ ಪಕ್ಷವೇ ಹೆಚ್ಚು ಸ್ಥಾನಗಳನ್ನು ಗೆದ್ದಿದ್ದೇವೆ ಎಂದು ಕಾಂಗ್ರೆಸ್‌, ಜೆಡಿಎಸ್‌ ಹಾಗೂ ಬಿಜೆಪಿ ಪಕ್ಷಗಳು ಬೀಗುತ್ತಿವೆ.ಅಧಿಕಾರದ ಗದ್ದುಗೆ ಹಿಡಿಯಲು ಬಿಎಸ್‌ಪಿ ಹಾಗೂ ಪಕ್ಷೇತರಸದಸ್ಯರನ್ನು ಸೆಳೆಯಲು ಮೂರು ಪಕ್ಷಗಳು ನಿರತವಾಗಿವೆ. ಗ್ರಾಮ ಪಂಚಾಯಿತಿಯ ಆಡಳಿತದ ಚುಕ್ಕಾಣಿ ಹಿಡಿಯಲು ಇನ್ನಿಲ್ಲದ ಕಸರತ್ತು ಆರಂಭಿಸಿವೆ.

3792 ಸದಸ್ಯರ ಆಯ್ಕೆ: ಜಿಲ್ಲೆಯ ಒಟ್ಟಾರೆ 3797 ಸದಸ್ಯ ಸ್ಥಾನಗಳಲ್ಲಿ ಮತದಾನಕ್ಕೂ ಮುನ್ನವೇ ಜಿಲ್ಲೆಯಾದ್ಯಂತ 548ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿತ್ತು. ಉಳಿದ 3244 ಸ್ಥಾನಗಳಿಗೆ ಮತದಾನ ನಡೆದಿತ್ತು. ಒಟ್ಟು 3792 ಸದಸ್ಯರು ಆಯ್ಕೆಯಾಗಿದ್ದಾರೆ.

ಮಂಡ್ಯ, ಮದ್ದೂರು ಹಾಗೂ ಪಾಂಡವಪುರ ತಾಲೂಕಿನಲ್ಲಿ ಜೆಡಿಎಸ್‌ ಬೆಂಬಲಿತರು ಹೆಚ್ಚು ಮಂದಿ ಆಯ್ಕೆಯಾಗಿದ್ದರೆ, ಮಳವಳ್ಳಿಯಲ್ಲಿ ಕಾಂಗ್ರೆಸ್‌ ಬೆಂಬಲಿತ ಮುನ್ನಡೆ ಸಾಧಿಸಿದೆ.ಉಳಿದಂತೆ ನಾಗಮಂಗಲ, ಶ್ರೀರಂಗಪಟ್ಟಣ ಕೈ-ದಳ ಸಮಬಲಬಂದಿದ್ದು, ಕೆ.ಆರ್‌.ಪೇಟೆಯಲ್ಲಿ 10ರಿಂದ 12 ಸ್ಥಾನಗಳುಜೆಡಿಎಸ್‌ ಬೆಂಬಲಿತರು ಗೆಲುವು ಸಾಧಿಸಿದ್ದಾರೆ ಎಂದು ಅಂದಾಜಿಸಲಾಗಿದೆ.

ಹೊಂದಾಣಿಕೆ ಸೂತ್ರಕ್ಕೆ ಜೈ: ಮೂರು ಪಕ್ಷಗಳು ತಮ್ಮ ಬೆಂಬಲಿತಸದಸ್ಯರ ಮೂಲಕ ಗ್ರಾಮ ಪಂಚಾಯಿತಿಗಳಲ್ಲಿಅಧಿಕಾರ ಹಿಡಿಯಲು ಮುಂದಾಗಿದ್ದು,ಕೆಲವೊಂದು ಗ್ರಾಮ ಪಂಚಾಯಿತಿಗಳಲ್ಲಿಬೆಂಬಲಿತ ಸದಸ್ಯ ಸ್ಥಾನಗಳ ಸಂಖ್ಯೆಕಡಿಮೆ ಇದ್ದರೆ, ಬಿಜೆಪಿ, ಕಾಂಗ್ರೆಸ್‌ಹಾಗೂ ಜೆಡಿಎಸ್‌ ಸೇರಿದಂತೆ ಪಕ್ಷೇತರ ಸದಸ್ಯರಹೊಂದಾಣಿಕೆಯಿಂದ ಅಧಿಕಾರ ಹಿಡಿಯಲು ಮುಂದಾಗಿವೆ.

ಬಹುತೇಕ ಕಡೆ ಮೈತ್ರಿ: ಮೇಲುಕೋಟೆ, ಕೆ.ಆರ್‌.ಪೇಟೆ ತಾಲೂಕುಗಳ ಕೆಲವು ಗ್ರಾಪಂಗಳಲ್ಲಿ ಜೆಡಿಎಸ್‌, ಕಾಂಗ್ರೆಸ್‌ ಮೈತ್ರಿ ಮಾಡಿಕೊಳ್ಳಲಾಗಿದೆ. ಅದರಂತೆ ಕೆಲಕ್ಷೇತ್ರಗಳಲ್ಲಿ ಜೆಡಿಎಸ್‌ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿವೆ.ಸುಲಭ ಗೆಲುವಿಗೆ ರಹದಾರಿ: ಹೆಚ್ಚು ಗ್ರಾಮಪಂಚಾಯಿತಿಗಳಲ್ಲಿ ತಮ್ಮ ಬೆಂಬಲಿತ ಸದಸ್ಯರ ಮೂಲಕಅಧಿಕಾರ ಹಿಡಿದರೆ, ಮುಂದಿನ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಲ್ಲಿ ಹೆಚ್ಚು ಸ್ಥಾನಗಳನ್ನು ಸುಲಭವಾಗಿ ಗೆಲ್ಲಬಹುದು ಎಂಬ ಲೆಕ್ಕಾಚಾರ ಮೂರು ಪಕ್ಷಗಳಲ್ಲಿನಡೆಯುತ್ತಿದೆ. ಅಲ್ಲದೆ, ಮುಂದಿನ ವಿಧಾನಸಭೆ ಚುನಾವಣೆಗೂ ಇದು ಸಹಕಾರಿಯಾಗಲಿದೆ ಎಂಬುದು ನಾಯಕರ ನಿರೀಕ್ಷೆಯಾಗಿದೆ.

ಆಯ್ಕೆಯಾದವರ ಮೀಸಲಾತಿ :  ಜಿಲ್ಲೆಯಲ್ಲಿ ಒಟ್ಟು 3792 ಸದಸ್ಯರು ಆಯ್ಕೆಯಾಗಿದ್ದಾರೆ. ಇದರಲ್ಲಿ ಪರಿಶಿಷ್ಟ ಜಾತಿ 563, ಪರಿಶಿಷ್ಟ ಪಂಗಡ 230, ಹಿಂದುಳಿದ ವರ್ಗ (ಎ) 821,ಹಿಂದುಳಿದ ವರ್ಗ(ಬಿ) 207 ಹಾಗೂ ಸಾಮಾನ್ಯ1971 ಮಂದಿ ಆಯ್ಕೆಯಾಗಿದ್ದಾರೆ. ಇದರಲ್ಲಿಪುರುಷ ಸದಸ್ಯರು 1841 ಹಾಗೂ ಮಹಿಳಾಸದಸ್ಯರು 1951 ಮಂದಿ ಆಯ್ಕೆಯಾಗಿದ್ದಾರೆ.

ಜಿಲ್ಲೆಯಲ್ಲಿ ಸಾಂಪ್ರದಾಯಿಕ ಎದುರಾಳಿಗಳಾಗಿದ್ದ ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳ ನಡುವೆ ಬಿಜೆಪಿ ಈ ಬಾರಿ ಕಮಾಲ್‌ ಮಾಡಿದೆ. 3792 ಸದಸ್ಯ ಸ್ಥಾನಗಳ ಪೈಕಿ ಕೆ.ಆರ್‌.ಪೇಟೆ, ಮದ್ದೂರು ಸೇರಿದಂತೆ 4 ತಾಲೂಕುಗಳಲ್ಲಿ ಸುಮಾರು 800ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಕಳೆದ ಚುನಾವಣೆಗಳಿಗೆ ಹೋಲಿಸಿದರೆ, ಗ್ರಾಪಂ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿದೆ. ಕೆ.ಜೆ.ವಿಜಯ್‌ಕುಮಾರ್‌, ಬಿಜೆಪಿ ಜಿಲ್ಲಾಧ್ಯಕ್ಷ

ಜಿಲ್ಲೆಯಲ್ಲಿ ಕಾಂಗ್ರೆಸ್‌ ಪ್ರಬಲವಾಗಿದ್ದು, ಸುಮಾರು 1600ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುತೇಕ ಗ್ರಾಪಂಗಳಲ್ಲಿ ಅಧಿಕಾರ ಹಿಡಿಯಲಿದೆ. ಜಿಲ್ಲೆಯ ಮತದಾರರು ಕಾಂಗ್ರೆಸ್‌ ಹಿಡಿದಿದ್ದಾರೆ ಎಂಬುದು ಸಾಭೀತಾಗಿದೆ. ಸಿ.ಡಿ.ಗಂಗಾಧರ್‌, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ

ಜಿಲ್ಲೆಯಲ್ಲಿ ಜೆಡಿಎಸ್‌ ಭದ್ರಕೋಟೆ ಎಂಬುದು ಮತ್ತೂಮ್ಮೆ ಸಾಭೀತಾಗಿದೆ. ಎಲ್ಲ ತಾಲೂಕುಗಳಲ್ಲಿ ಸುಮಾರು 155ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಲ್ಲಿ ನಮ್ಮ ಪಕ್ಷದ ಬೆಂಬಲಿತರೇ ಹೆಚ್ಚು ಗೆಲುವು ಸಾಧಿಸಿದ್ದು, ಬಹುತೇಕ ಗ್ರಾಮ ಪಂಚಾಯಿತಿಗಳಲ್ಲಿ ಅಧಿಕಾರ ಹಿಡಿಯಲಿದ್ದೇವೆ. ಡಿ.ರಮೇಶ್‌, ಜೆಡಿಎಸ್‌ ಜಿಲ್ಲಾಧ್ಯಕ್ಷ

 

-ಎಚ್‌.ಶಿವರಾಜು

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.