ಗುಂಡಿ ಬಿದ್ದ ರಾಮನಹಳ್ಳಿ ರಸ್ತೆ: ಸಂಕಷ್ಟ

Team Udayavani, May 9, 2022, 4:03 PM IST

Untitled-1

ಕಿಕ್ಕೇರಿ: ಹೋಬಳಿಯ ರಾಮನಹಳ್ಳಿ ರಸ್ತೆ ತುಂಬಾ ಗುಂಡಿಗಳು ಬಿದ್ದು ವಾಹನ ಸವಾರರು ನಿತ್ಯ ಸಂಕಷ್ಟ ಎದುರಿಸುವಂತಾಗಿದೆ.

ಈ ರಸ್ತೆ ಕೋರಮಂಡಲ್‌ ಸಕ್ಕರೆ ಕಾರ್ಖಾನೆಗೆ ಸೇರಿಸುವ ಅತಿ ಹತ್ತಿರದ ರಸ್ತೆ ಕೂಡ ಆಗಿದೆ. ಕೊಂಕಣ ಸುತ್ತಿ ಮೈಲಾರಕ್ಕೆ ಹೋಗು ಎನ್ನುವ ರೀತಿ ಸುತ್ತಿ ಬಳಸಿ ಬಾರದೆ ಸಕ್ಕರೆ ಕಾರ್ಖಾನೆ, ಐಯ್ಯನ ಕೊಪ್ಪಲು, ದೊರೇನಹಳ್ಳಿ, ರಾಮನಹಳ್ಳಿ, ಚೌಡೇನಹಳ್ಳಿ, ಬೀಚೇನ ಹಳ್ಳಿ, ಮಾಣಿಕನಹಳ್ಳಿ, ಕಾರಿಗಾನಹಳ್ಳಿ, ಮಾಕವಳ್ಳಿ ಮತ್ತಿತರ ಗ್ರಾಮಗಳಿಗೆ ಸಾಗಲು ಅತಿ ಸನಿಹದ ರಸ್ತೆ ಇದಾಗಿದೆ.

ನಿತ್ಯವೂ ಸಂಕಷ್ಟ: ಕಿಕ್ಕೇರಿಯಿಂದ ಚೌಡೇನಹಳ್ಳಿ ಕೂಡು ರಸ್ತೆವರೆಗೆ ಅರೆಬರೆ ಡಾಂಬರು ರಸ್ತೆ ಇದೆ. ನಂತರ ಮಣ್ಣಿನ ರಸ್ತೆ ಇದ್ದು ರಸ್ತೆ ತುಂಬ ಗುಂಡಿ, ಕಲ್ಲು ಗಳು ಕಿತ್ತು ಮೇಲೆ ಬಂದಿವೆ. ರೈತಾಪಿ ಜನತೆ ರಸ್ತೆಯಲ್ಲಿ ನಿತ್ಯವೂ ಓಡಾಡಲು ಪರಿತಪಿಸಬೇಕಿದೆ.

ಎತ್ತಿನಗಾಡಿಯ ಮೂಲಕ ಗೊಬ್ಬರ, ನೇಗಿಲು ಮತ್ತಿತರ ವಸ್ತುಗಳನ್ನು ಸಾಗಿಸಲು ರೈತರು ಪರದಾಡುವಂತಾಗಿದೆ. ರಾಮನಹಳ್ಳಿ ಗ್ರಾಮದ ಜನತೆ ನಿತ್ಯವೂ ಹೋಬಳಿ ಕೇಂದ್ರಕ್ಕೆ ಓಡಾಡಬೇಕಿರುವುದು ಅನಿವಾರ್ಯತೆ ಇದ್ದು ಜಲ್ಲಿ ರಸ್ತೆ ಮೇಲೆ ಓಡಾಡಲು ಕಷ್ಟಕರವಾಗಿದೆ. ಶಾಲಾ ಕಾಲೇಜು ಮಕ್ಕಳು ಈ ರಸ್ತೆಯಲ್ಲಿ ಓಡಾಡಲು ತೀವ್ರಕರವಾದ ಹಿಂಸೆಯಾಗಿದೆ.

ಬೈಕ್‌ಗಳನ್ನು ನಿತ್ಯವೂ ರಿಪೇರಿ ಮಾಡಿಸಿಕೊಳ್ಳಬೇಕಿದೆ. ರಾತ್ರಿ ವೇಳೆ ಈ ರಸ್ತೆಯಲ್ಲಿ ಓಡಾಡುವುದು, ವಾಹನ ಕೆಟ್ಟು ನೂಕಿಕೊಂಡು ಮನೆಗೆ ಸೇರುವುದು ಯಾತನೆಯಾಗಿದೆ.

ಅಧಿಕಾರಿಗಳು ಕ್ರಮ ಕೈಗೊಳ್ಳಲಿ : ಈ ರಸ್ತೆಯ ಬಳಿ ಇರುವ ರೈತರು ಆಗಿಂದಾಗ್ಗೆ ತಮ್ಮ ಓಡಾಟಕ್ಕೆ ವಿಧಿ ಇಲ್ಲದೆ ಗುಂಡಿಗಳಿಗೆ ಕಲ್ಲು ಮಣ್ಣು ತುಂಬುವುದು ಮಾಮೂಲಿ. ಸಂಬಂಧಪಟ್ಟ ಇಲಾಖೆ ತುರ್ತು ಕ್ರಮವಹಿಸಿ ರಸ್ತೆ ಗುಂಡಿ ಮುಚ್ಚಿ ಡಾಂಬರೀಕರಣ ಮಾಡಲು ಮುಂದಾಗಬೇಕಿದೆ ಎಂದು ಡೇರಿ ಕುಮಾರ್‌ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Delhi: 9 ವರ್ಷಗಳಲ್ಲೇ ಡಿಸೆಂಬರ್‌ ತಿಂಗಳಲ್ಲಿ ಅತ್ಯಂತ ಸ್ವಚ್ಛ ಗಾಳಿ!

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

Tamil Nadu: ಸ್ತ್ರೀಯರಿಗೆ ರಕ್ಷಣೆ ಕಲ್ಪಿಸಿ: ತಮಿಳುನಾಡು ಗೌರ್ನರ್‌ಗೆ ನಟ ವಿಜಯ್‌ ಮನವಿ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

ರೊಹಿಂಗ್ಯಾಗಳಿಗೆ ನೆಲೆ: ಕೇಜ್ರಿವಾಲ್‌, ಕೇಂದ್ರ ಸಚಿವ ಮಧ್ಯೆ ವಾಗ್ಯುದ್ಧ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Scotland: ಕೇರಳ ಮೂಲದ ವಿದ್ಯಾರ್ಥಿನಿ ಶವ ನದಿಯಲ್ಲಿ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Mumbai: ಮಹಾರಾಷ್ಟ್ರದಲ್ಲಿ ಅಸುನೀಗಿದ ಹುಲಿ ಮರಿ ಶವ ಪತ್ತೆ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ

Udupi: ಗೀತಾರ್ಥ ಚಿಂತನೆ-141: “ಇಗೋ’ ಬೂಸ್ಟ್‌ ಮಾಡುವ ಆಧುನಿಕ ಶಿಕ್ಷಣ ಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

court

Mangaluru; ಪ್ರತ್ಯೇಕ ಚೆಕ್‌ಬೌನ್ಸ್‌ ಪ್ರಕರಣ: ಇಬ್ಬರು ಖುಲಾಸೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ

death

Mangaluru: ದ್ವಿಚಕ್ರ ವಾಹನ ಢಿಕ್ಕಿ: ಟೆಂಪೋ ಚಾಲಕ ಸಾ*ವು

arrested

Kasaragod: ಪತ್ನಿಯ ಹಂತಕನಿಗೆ 10 ವರ್ಷ ಕಠಿನ ಸಜೆ

saavu

Puttur: ಎಸೆಸೆಲ್ಸಿ ವಿದ್ಯಾರ್ಥಿನಿ ಆತ್ಮಹ*ತ್ಯೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.