Preamble Of The Indian Constitution: ಸಂವಿಧಾನ ಓದಿದ ಸಾವಿರಾರು ಮಕ್ಕಳು


Team Udayavani, Sep 16, 2023, 10:43 AM IST

tdy-8

ಮಂಡ್ಯ: ಜಿಲ್ಲಾದ್ಯಂತ ಎಲ್ಲ ಸರ್ಕಾರಿ ಕಚೇರಿಗಳು, ಶಾಲಾ- ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವ ಮೂಲಕ ಬೋಧನೆ ಮಾಡಲಾಯಿತು. ಮಂಡ್ಯ ನಗರ, ಮದ್ದೂರು, ಮಳವಳ್ಳಿ, ಶ್ರೀ ರಂಗಪಟ್ಟಣ, ಪಾಂಡವಪುರ, ನಾಗಮಂಗಲ ಹಾಗೂ ಕೆ.ಆರ್‌.ಪೇಟೆ ತಾಲೂಕುಗಳಲ್ಲೂ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮ ನಡೆಯಿತು.

ನಗರದ ಮಂಡ್ಯ ವಿಶ್ವವಿದ್ಯಾಲಯದ ಆವರಣದಲ್ಲಿ ಸಾವಿರಾರು ವಿದ್ಯಾರ್ಥಿಗಳೊಂದಿಗೆ ಸಾಮೂಹಿಕವಾಗಿ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಎನ್‌.ಚಲುವ‌ರಾಯಸ್ವಾಮಿ ಸಂವಿಧಾನ ಪೀಠಿಕೆ ಯನ್ನು ವಿದ್ಯಾರ್ಥಿಗಳಿಗೆ ಬೋಧನೆ ಮಾಡಿದರು.

ಸಂವಿಧಾನ ಪೀಠಿಕೆ ಬೋಧನೆ: ಭಾರತದ ಜನಗಳಾದ ನಾವು ಭಾರತವನ್ನು ಒಂದು ಸಾರ್ವಭೌಮ ಸಮಾಜವಾದಿ ಸರ್ವಧರ್ಮ ಸಮಭಾವದ ಪ್ರಜಾಸತ್ತಾತ್ಮಕ ಗಣರಾಜ್ಯವಾಗಿ ರಚಿಸಲು ಮತ್ತು ಅದರ ಸಮಸ್ತ ನಾಗರಿಕರಿಗೆ ಸಾಮಾಜಿಕ, ಆರ್ಥಿಕ, ಮತ್ತು ರಾಜಕೀಯ ನ್ಯಾಯ, ವಿಚಾರ, ಅಭಿವ್ಯಕ್ತಿ, ವಿಶ್ವಾಸ, ಧರ್ಮಶ್ರದ್ಧೆ, ಮತ್ತು ಉಪಾಸನಾ ಸ್ವಾತಂತ್ರ್ಯ, ಸ್ಥಾನಮಾನ ಹಾಗೂ ಅವಕಾಶ ಸಮಾನತೆ ದೊರೆಯುವಂತೆ ಮಾಡಲು ಮತ್ತು ವ್ಯಕ್ತಿ ಗೌರವವನ್ನು ರಾಷ್ಟದ ಏಕತೆಯನ್ನು ಹಾಗೂ ಅಖಂಡತೆಯನ್ನು ಸುನಿಶ್ಚಿತಗೊಳಿಸಿ ಅವರಲ್ಲಿ ಭ್ರಾತೃಭಾವನೆಯನ್ನು ವೃದ್ಧಿಗೊಳಿಸಲು ಶ್ರದ್ಧಾಪೂರ್ವಕ ಸಂಕಲ್ಪ ಮಾಡಿದವರಾಗಿ; ಈ ದಿವಸ ಈ ಮೂಲಕ ಈ ಸಂವಿಧಾನವನ್ನು ಅಂಗೀಕರಿಸಿ, ಅ ನಿಯಮಿಸಿ ಅರ್ಪಿಸಿಕೊಂಡಿದ್ದೇವೆ ಎಂದು ಸಂವಿಧಾನ ಪೀಠಿಕೆಯನ್ನು ಬೋ ಧಿಸಿದರು.

ಅತಿದೊಡ್ಡ ಸಂವಿಧಾನ ನಮ್ಮದು: ಸಚಿವ ಎನ್‌. ಚಲುವರಾಯಸ್ವಾಮಿ ಮಾತನಾಡಿ, ಭಾರತ ಸಂವಿಧಾ ನವು ಪ್ರಪಂಚದ ದೊಡ್ಡ ಸಂವಿಧಾನವಾಗಿದೆ. ದೇಶದ ಕಟ್ಟ ಕಡೆಯ ವ್ಯಕ್ತಿಗೂ ಸಮಾನವಾದ ಅವಕಾಶ ಸಂವಿಧಾನದಲ್ಲಿ ಇದೆ. ಈ ಮೂಲಕ ಪ್ರಜಾಪ್ರಭುತ್ವದ ಕಲ್ಪನೆಯನ್ನು ಕೊಟ್ಟ ಡಾ.ಬಿ.ಆರ್‌.ಅಂಬೇಡ್ಕರ್‌ ಅವರಿಗೆ ನನ್ನ ನಮನಗಳು ಎಂದರು.

ಸಂವಿಧಾನ ಎಲ್ಲರಿಗೂ ಒಂದೇ ರೀತಿಯ ಅವಕಾಶ ಕೊಟ್ಟಿದೆ. ಯಾರು ಬೇಕಾದರೂ ರಾಷ್ಟ್ರಪತಿ, ಪ್ರಧಾನಿ ಹಾಗೂ ಇನ್ನಿತರ ಗೌರವದ ಹುದ್ದೆಗಳನ್ನು ಪಡೆಯಬಹದು. ಸಂವಿಧಾನ ಕೊಟ್ಟ ಮತದಾನ ಅವಕಾಶದಿಂದಲೇ ನಾವಿಂದು ಚುನಾಯಿತ ಪ್ರತಿನಿ ಗಳಾಗಿ ಜನಸೇವೆ ಮಾಡುತ್ತಿದ್ದೇವೆ ಎಂದು ಹೇಳಿದರು.

ಸಂವಿಧಾನದ ಮೇಲೆ ಗೌರವವಿರಲಿ: ಸಂವಿಧಾನದ ಪರಿಕಲ್ಪನೆ ಇಲ್ಲದೆ ಇದ್ದಿದ್ದರೆ ನಮ್ಮ ಸಮಾಜದ ಸ್ಥಿತಿ ಈಗಿರುತ್ತಿರಲಿಲ್ಲ. ಬಡವರು ಹಾಗೂ ಶ್ರಮಿಕರು ಬಂಡವಾಳ ಶಾಹಿಗಳ ಹತ್ತಿರ ಕೈಕಟ್ಟಿ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು. ಇಂದು ನಾವೆಲ್ಲ ನಮಗೆ ಹಕ್ಕಿದೆ ನಮಗೂ ಅವಕಾಶ ಕೊಡಿ ಎಂದು ಕೇಳುವುದಕ್ಕೂ ಅಂಬೇಡ್ಕರ್‌ ಅವರು ಕೊಟ್ಟ ಸಂವಿಧಾನವೇ ಕಾರಣ. ಹಾಗಾಗಿ ಸಂವಿಧಾನದ ಮೇಲೆ ಎಲ್ಲರಿಗೂ ಗೌರವವಿರಲಿ ಎಂದರು. ಶಾಲಾ ಹಾಗೂ ಕಾಲೇಜುಗಳಿಂದ ಇಂದಿನಿಂದ ಸಂವಿಧಾನ ಪೀಠಿಕೆ ಓದುವುದು ಕಡ್ಡಾಯವಾಗಿದ್ದು, ಎಲ್ಲ ಶಾಲಾ-ಕಾಲೇಜುಗಳಲ್ಲಿ ಬೆಳಗ್ಗಿನ ಪ್ರಾರ್ಥನೆಯ ನಂತರ ಸಂವಿಧಾನದ ಪೀಠಿಕೆ ಓದಬೇಕು. ಸಂವಿಧಾನ ವಿರುದ್ಧವಾಗಿ ಮಾತನಾಡುವುದು ಹಾಗೂ ಅದರ ವಿರುದ್ಧ ನಡೆದುಕೊಳ್ಳುವುದನ್ನು ಸರ್ಕಾರ ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ. ಸಂವಿಧಾನ ವಿರೋಧಿ ಚಟುವಟಿಕೆ ನಡೆಸುವವರು ದೇಶ ಹಾಗೂ ರಾಜ್ಯಕ್ಕೆ ಮಾರಕ ಎಂದು ತಿಳಿಸಿದರು.

ಶಾಸಕರಾದ ಪಿ.ರವಿಕುಮಾರ್‌ಗೌಡ ಗಣಿಗ, ದಿನೇಶ್‌ಗೂಳಿಗೌಡ, ಜಿಲ್ಲಾಧಿಕಾರಿ ಡಾ.ಕುಮಾರ, ಮಂಡ್ಯ ವಿವಿ ಕುಲಪತಿ ಡಾ.ಪುಟ್ಟರಾಜು, ಜಿಪಂ ಸಿಇಒ ಶೇಖ್‌ ತನ್ವೀರ್‌ ಆಸೀಫ್‌, ಅಪರ ಜಿಲ್ಲಾ ಧಿಕಾರಿ ಡಾ.ಎಚ್‌.ಎಲ್‌.ನಾಗರಾಜು, ಅಪರ ಪೊಲೀಸ್‌ ವರಿಷ್ಠಾಧಿಕಾರಿ ತಿಮ್ಮಯ್ಯ, ಜಿಲ್ಲಾ ಸಮಾಜ ಕಲ್ಯಾಣಾ ಧಿಕಾರಿ ಸಿದ್ದಲಿಂಗೇಶ್‌, ಹಿಂದುಳಿದ ವರ್ಗಗಳ ಕಲ್ಯಾಣಾಧಿ ಕಾರಿ ಶ್ರೀನಿವಾಸ್‌ ಇತರರು ಇದ್ದರು.

ಒಟ್ಟು ಐದು ಸಾವಿರ ವಿದ್ಯಾರ್ಥಿಗಳು ಭಾಗಿ: ನಗರದ ಮಂಡ್ಯ ವಿಶ್ವ ವಿದ್ಯಾಲಯದ ಆವರಣದಲ್ಲಿ ಐದು ಸಾವಿರ ವಿದ್ಯಾರ್ಥಿ ಗಳೊಂದಿಗೆ ಸಾಮೂಹಿಕವಾಗಿ ಸಂವಿಧಾನ ಪೀಠಿಕೆ ಓದಲಾಯಿತು. ಮಕ್ಕಳು ಬೆಳಗ್ಗೆಯಿಂದಲೇ ಸಂವಿಧಾನ ಪೀಠಿಕೆ ಓದಲು ನಿಗದಿಪಡಿಸಿದ್ದ ಸ್ಥಳದಲ್ಲಿ ಹಾಜರಿದ್ದರು.

ಭಾಗವಹಿಸಿದ ಎಲ್ಲ ಮಕ್ಕಳಿಗೂ ಸಂವಿಧಾನ ಪೀಠಿಕೆಯ ಒಂದು ಪ್ರತಿಯನ್ನು ನೀಡಲಾ ಯಿತು. ಜಿಲ್ಲಾದ್ಯಂತ 7 ಲಕ್ಷ ಜನ ನೋಂದಣಿ ಮಾಡಿಕೊಂಡಿದ್ದರು. ಜಿಲ್ಲಾದ್ಯಂತ ಶುಕ್ರವಾರ ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳಲ್ಲಿ ಸಂವಿಧಾನ ಪೀಠಿಕೆ ಓದಲಾಯಿತು.

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

2047ಕ್ಕೆ ವಿಕಸಿತ ಭಾರತ ನಿರ್ಮಾಣ: ಉಪರಾಷ್ಟ್ರಪತಿ

Vice President: 2047ಕ್ಕೆ ವಿಕಸಿತ ಭಾರತ ನಿರ್ಮಾಣ: ಜಗದೀಪ್‌ ಧನಕರ್‌

20-mandya

Mahadevapura: ಲಿಫ್ಟ್ ಗುಂಡಿಗೆ ಬಿದ್ದ ಬಾಲಕ ಸಾವು

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya1

Mandya: ಸಾಹಿತ್ಯ ಸಮ್ಮೇಳನ ಸಂಭ್ರಮಕ್ಕೆ ಕೊರತೆಯಾಗದಂತೆ ಮಿತಿಯಲ್ಲಿ ಖರ್ಚು ಮಾಡಿ: ಸಚಿವ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.