ಪ್ರಧಾನಿಯಿಂದ ದೇಶಕ್ಕೆ ವಿಶ್ವಮಾನ್ಯತೆ
Team Udayavani, Sep 18, 2020, 3:56 PM IST
ಶ್ರೀರಂಗಪಟ್ಟಣ: ಪ್ರಧಾನಿ ಮೋದಿ ಭಾರತ ದೇಶಕ್ಕೆ ರಾಜಕೀಯವಾಗಿ ವಿಶ್ವಮಾನ್ಯತೆ ತಂದುಕೊಟ್ಟಿದ್ದಾರೆ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಉಪಾಧ್ಯಕ್ಷ ಕೆ.ಎಸ್.ನಂಜುಂಡೇಗೌಡ ಹೇಳಿದರು.
ಪ್ರಧಾನಿ ಮೋದಿ ಹುಟ್ಟು ಹಬ್ಬದ ಅಂಗವಾಗಿ ಬಿಜೆಪಿ ಕಾರ್ಯಕರ್ತರು, ಶ್ರೀರಂಗನಾಥ ದೇವಾಲದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಭಕ್ತರಿಗೆ ಸಿಹಿ ವಿತರಿಸಿ ಮಾತನಾಡಿ, ಸಾಮಾಜಿಕ, ಆರ್ಥಿಕ ಮಟ್ಟದಲ್ಲಿ ಮುಂದುವರಿದ ದೇಶವನ್ನಾಗಿ ಮಾಡಲು ಪ್ರಧಾನಿ ಮೋದಿ ಅವರು ಅಗತ್ಯ ಎಂದರು. ಜಿಲ್ಲಾ ಉಪಾಧ್ಯಕ್ಷ ಟಿ.ಶ್ರೀಧರ್, ಜಿಲ್ಲಾ ಬಿಜೆಪಿ ಮಹಿಳಾ ಪ್ರಧಾನ ಕಾರ್ಯದರ್ಶಿ ವಿದ್ಯಾ ಉಮೇಶ್, ಸಂತೊಷ್ ಕುಮಾರ್ ಹಾಜರಿದ್ದರು.
ಮೋದಿ ದೇಶ ಕಂಡ ಅತ್ಯುತ್ತಮ ಪ್ರಧಾನಿ : ಶ್ರೀರಂಗಪಟ್ಟಣ: ಭಾರತದ ಪ್ರಧಾನಿ ನರೆಂದ್ರ ಮೋದಿ ಅವರ 70ನೇ ವರ್ಷದ ಹುಟ್ಟುಹಬ್ಬವನ್ನು ಪಟ್ಟಣದ ಬಸ್ ನಿಲ್ದಾಣದ ಬಳಿ ಆಚರಿಸಲಾಯಿತು.ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಮೋದಿ ಗೆಳೆಯರ ಬಳಗದ ಯುವ ಮುಖಂಡ ವಿಜಯ್ ನೇತೃತ್ವದಲ್ಲಿ ಮೋದಿ ಭಾವಚಿತ್ರದ ಮುಂದೆ ಕೇಕ್ ಕತ್ತರಿಸಿ, ಸಾರ್ವಜನಿಕರಿಗೆ ಸಿಹಿ ವಿತರಣೆ ಮಾಡಿದರು.ಸರಳ- ಸಜ್ಜನಿಕೆಯ ದೇಶ ಕಂಡ ಅತ್ಯುತ್ತಮ ಪ್ರಧಾನಿ ನರೇಂದ್ರ ಮೋದಿ. ಕಳೆದ 7
ವರ್ಷಗಳಿಂದ ವಿಶ್ವ ಮಟ್ಟದಲ್ಲಿ ದೇಶವನ್ನು ಮುನ್ನೆಡೆಸುವ ಸಾರಥಿಯಾಗಿರುವುದು ದೇಶಕ್ಕೆ ಒಳಿತು ತಂದಿದೆ ಎಂದರು.ಪುರಸಭೆ ಮಾಜಿ ಸದಸ್ಯ ಜಯರಾಮ್, ಮುರುಳಿ, ಸೋಮಣ್ಣ, ಆಟೋ ಶೇಷಾ, ಕಿಟ್ಟಿ, ವಿನಯ್, ಕಬಾಬ್ ಉಮೇಶ್, ಟಿ.ರವಿ ಮಂಜು, ಮಹೇಶ್ ಹಾಜರಿದ್ದರು.
ಎಲ್ಲಾ ವರ್ಗದ ಅಭಿವೃದ್ಧಿ ಗೆ ಶ್ರಮ : ಮದ್ದೂರು: ಪ್ರಧಾನಿ ಮೋದಿ ಅವರ70ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ತಾಲೂಕಿನ ಗೆಜ್ಜಲಗೆರೆಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು, ಹುತಾತ್ಮ ವೀರಯೋಧ ಸುಮಂತ್ ಅವರ ಸಮಾಧಿ ಬಳಿ ಗಿಡ ನೆಡುವಮೂಲಕ ಹುಟ್ಟುಹಬ್ಬ ಆಚರಿಸಿ, ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮಿಸಿದರು.
ಬಿಜೆಪಿ ಮುಖಂಡ ಯೋಗೇಶ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅಧಿಕಾರ ಬಂದ ದಿನದಿಂದಲೂ ಎಲ್ಲಾವರ್ಗದ ಅಭಿವೃದ್ಧಿಗೆ ಶ್ರಮಿಸುವ ಮೂಲಕ ರೈತರು, ಕಾರ್ಮಿಕರು, ಮಹಿಳೆಯರ ಹಾಗೂ ಹಿಂದುಳಿದ ವರ್ಗದ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.
ವಿಶ್ವವೇ ಮೆಚ್ಚಿದ ಪ್ರಧಾನಿಯಾಗಿ ಇತರೆ ದೇಶಗಳು ಭಾರತದತ್ತ ಮುಖಮಾಡುತ್ತಿರುವುದು ನರೇಂದ್ರಮೋದಿ ಆಡಳಿತ ಕಾರ್ಯ ವೈಖರಿಗೆ ಕೈಗನ್ನಡಿಯಾಗಿದೆ. ಪ್ರಧಾನಿಯಾಗಿ ಹಲವು ದಿಟ್ಟ ನಿರ್ಧಾರಗಳನ್ನು ಕೈಗೊಂಡು ದೇಶವೇ ಮೆಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು. ಬಿಜೆಪಿ ಮುಖಂಡ ರಾದ ಮ.ನ. ಪ್ರಸನ್ನಕುಮಾರ್, ರಾಮಲಿಂಗಯ್ಯ, ಶಿವರಾಮು, ರಮೇಶ್, ಕಿರಣ, ರಾಜೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.