ಗ್ರಾಮೀಣ ಕ್ರೀಡೆಗಳಿಗೆ ಆದ್ಯತೆ ನೀಡಿ
Team Udayavani, Sep 20, 2019, 4:52 PM IST
ಕೆ.ಆರ್.ಪೇಟೆ: ಗ್ರಾಮೀಣ ಕ್ರೀಡೆಗಳಿಗೆ ಆದ್ಯತೆ ನೀಡುವ ಮೂಲಕ ಮುಂದಿನ ತಲೆಮಾರಿಗೆ ಪರಿಚಯಿಸಬೇಕು ಎಂದು ಜಿಪಂ ಸದಸ್ಯ ರಾಮದಾಸ್ ಹೇಳಿದರು.
ತಾಲೂಕಿನ ಹರಿಹರಪುರದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಗ್ರಾಮೀಣ ಕ್ರೀಡೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಟಿವಿ, ಮೊಬೈಲ್ ಜೊತೆಗೆ ಪಾಶ್ಚಿಮಾತ್ಯ ಸಂಸ್ಕೃತಿ ಪ್ರಭಾವಕ್ಕೆ ಸಿಲುಕಿರುವ ಯುವ ಜನರು ಇಂದು ಆಟವೆಂದರೆ ಕೇವಲ ಕ್ರಿಕೆಟ್ ಎಂದು ಮಾತ್ರ ಭಾವಿಸಿ ದ್ದಾರೆ. ಆರೋಗ್ಯದೊಂದಿಗೆ ಉಲ್ಲಾಸ ಕೊಡುವ ದೇಸೀಯ ಕ್ರೀಡೆಗಳಾದ ಕಬಡ್ಡಿ, ಖೋಖೋ, ಮರಕೋತಿ, ಅಳಿಗುಳಿ ಮನೆ, ಟೋಪಿ ಆಟ, ಕೆರೆ ದಡ, ಹಾವು ಏಣಿ, ಪಗಡೆಯಾಟ, ಲಗೋರಿ, ಗಿಲ್ಲಿ ದಾಂಡು, ಚಿನ್ನಿಕೋಲು, ಕಾಟಾ ಕುಸ್ತಿ, ಮಲ್ಲಕಂಭ ಇತ್ಯಾದಿ ಆಟಗಳು ಕಣ್ಮರೆಯಾಗುತ್ತಿದ್ದು, ಅವುಗಳ ಉಳಿವಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಪುರಸಭೆ ಮಾಜಿ ಸದಸ್ಯ ಕೆ.ಆರ್. ನೀಲಕಂಠ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆಗಳನ್ನು ಸ್ಪರ್ಧಾ ಭಾವದಿಂದ ಸ್ವೀಕರಿಸಿ ಸತತ ಅಭ್ಯಾಸ ಮಾಡಿ ಸಮಗ್ರ ವ್ಯಕ್ತಿತ್ವ ಬೆಳೆಸಿಕೊಂಡು ಸರ್ವಶ್ರೇಷ್ಠ ಸಾಧನೆ ಮಾಡಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಶಫಿ ಅಹಮದ್ ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕ ಬಿ.ಟಿ.ಕೃಷ್ಣೇಗೌಡ, ಜಿಲ್ಲಾ ಯುವಜನ ಸಬಲೀಕರಣ ಇಲಾಖೆ ಜಿಲ್ಲಾ ಸಂಯೋಜಕ ಪರಮೇಶ್, ಶಿಕ್ಷಕರಾದ ಲೋಕೇಶ್, ಮಂಜುಳಾ, ಮಮತಾ, ಕುಮಾರ್, ಸಿದ್ಧೇಶ್, ಅಂಬಿಕ, ತೇಜಾವತಿ, ಸಂಧ್ಯಾ ಮತ್ತು ಪವಿತ್ರ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.