Prize Money: ವರ್ಷ ಕಳೆದರೂ ಬಾರದ ಬಹುಮಾನ‌ ಮೊತ್ತ


Team Udayavani, Aug 29, 2023, 3:26 PM IST

tdy-13

ಮಂಡ್ಯ:  ಕಳೆದ ವರ್ಷ ನಡೆದ ಗ್ರಾಮೀಣ ಕ್ರೀಡಾಕೂಟದಲ್ಲಿ  ಗೆದ್ದ ತಂಡಗಳಿಗೆ ಇನ್ನೂ  ಬಹುಮಾನ ಮೊತ್ತ ಬಾರದೆ ಇರುವುದು ಕ್ರೀಡಾಳುಗಳಲ್ಲಿ ನಿರಾಶೆ ಮೂಡಿಸಿದೆ.

ಕಳೆದ ವರ್ಷ ಆ.28ರಂದು ದಸರಾ ಹಾಗೂ ರಾಜ್ಯದ ವಿವಿಧೆಡೆ ಗ್ರಾಮೀಣ ಕ್ರೀಡಾಕೂಟ ನಡೆಸಲಾಗಿತ್ತು. ಗೆದ್ದ ತಂಡಗಳಿಗೆ ಬಹುಮಾನ ಮೊತ್ತ ನೀಡುವುದಾಗಿ ಆಗಿನ ಬಿಜೆಪಿ ಸರ್ಕಾರ ಘೋಷಣೆ ಮಾಡಿತ್ತು. ಆದರೆ ಇದುವರೆಗೂ ವಿಜೇತರಾದ ಸ್ಪ ರ್ಧೆಗಳಿಗೆ ಮೊತ್ತ ಬಂದಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ.

ಗ್ರಾಮೀಣ ಕ್ರೀಡಾಕೂಟಗಳ ಆಯೋಜನೆ ಗ್ರಾಮೀಣ ಪ್ರತಿಭೆಗಳಿಗೆ ವೇದಿಕೆ. ಆದರೆ ಬರುವ ಕ್ರೀಡಾಸ್ಪ ರ್ಧೆಗಳಿಗೆ ಯಾವುದೇ ಪ್ರೋತ್ಸಾಹ ಇಲ್ಲದಂತಾಗಿದೆ. ತಾವೇ ಸ್ವಂತ ಖರ್ಚಿನಲ್ಲಿ ಬಂದು ಆಡುತ್ತಾರೆ. ಕನಿಷ್ಠ  ಸೌಲಭ್ಯವನ್ನೂ  ಕೊಡುವುದಿಲ್ಲ. ಗೆದ್ದ ಬಹುಮಾನ ಮೊತ್ತವನ್ನೂ ನೀಡದೆ ಸರ್ಕಾರ ಹಾಗೂ ಇಲಾಖೆ ನೀಡದೆ ನಿರ್ಲಕ್ಷ್ಯ ವಹಿಸಿದೆ ಎಂದು ಕ್ರೀಡಾಸ್ಪ ರ್ಧಿಗಳು ದೂರುತ್ತಾರೆ. ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ವಿಜೇತರಾದ ಸ್ಪ ರ್ಧೆಗಳಿಗೆ ಪ್ರಥಮ ಬಹುಮಾನ ವಾಗಿ 3 ಸಾವಿರ ರೂ. ಹಾಗೂ ದ್ವಿತೀಯ ಬಹುಮಾನವಾಗಿ 2 ಸಾವಿರ ರೂ. ನೀಡುವುದಾಗಿ ಘೋಷಣೆ ಮಾಡಲಾಗಿತ್ತು.

ಮಂಡ್ಯ, ಚಿಕ್ಕಮಗಳೂರಲ್ಲಿ ರಾಜ್ಯಮಟ್ಟದ ಸ್ಪರ್ಧೆ: ಗ್ರಾಮೀಣ ಕ್ರೀಡಾಕೂಟಗಳಲ್ಲಿ ಹಂತ ಹಂತವಾಗಿ ಗೆದ್ದು ಬಂದವರು ಮಂಡ್ಯ ಹಾಗೂ ಚಿಕ್ಕಮಗಳೂರಿನಲ್ಲಿ ರಾಜ್ಯಮಟ್ಟದ ಸ್ಪರ್ಧೆ ಆಯೋಜಿಸಲಾಗಿತ್ತು. ಮಂಡ್ಯ ಜಿಲ್ಲೆಯ ಕೆ.ಆರ್‌.ಪೇಟೆ ಪಟ್ಟಣದಲ್ಲಿ ರಾಜ್ಯಮಟ್ಟದ ಸ್ಪರ್ಧೆ ನಡೆದಿತ್ತು. ವಿಜೇತರಾದವರ ಬ್ಯಾಂಕ್‌ ಖಾತೆಗೆ ನೇರವಾಗಿ ಬಹುಮಾನದ ಮೊತ್ತ ಹಾಕುವುದಾಗಿ ಸರ್ಕಾರ ಹೇಳಿತ್ತು. ಆ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗಳ ಕ್ರೀಡಾ ಇಲಾಖೆಗಳಿಂದ ವಿಜೇತ ಸ್ಪ ರ್ಧಿಗಳಿಂದ ಬ್ಯಾಂಕ್‌ ಪಾಸ್‌ಬುಕ್‌, ಆಧಾರ್‌ ಕಾರ್ಡ್‌ ಸೇರಿದಂತೆ ಅಗತ್ಯ ದಾಖಲಾತಿ ಪಡೆಯಲಾಗಿತ್ತು. ಆದರೆ ಖಾತೆಗೆ ಹಣ ಬಂದಿಲ್ಲ. ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನಾನು ಹಲವು ಬಾರಿ ಇಲಾಖೆಯ ಗಮನಕ್ಕೆ ತಂದಿದ್ದೇನೆ. ಇದರ ಬಗ್ಗೆ ದಿಶಾ ಸಭೆಯಲ್ಲೂ ಚರ್ಚೆ ನಡೆಸಿದ್ದೇನೆ. ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ. -ಅರುಣಕುಮಾರಿ, ದಿಶಾ ಸಮಿತಿ ಸದಸ್ಯೆ, ಮಂಡ್ಯ

ನಾವು ಗ್ರಾಮೀಣ ಭಾಗದಿಂದ ಬಂದು ಸಾಲ ಮಾಡಿ ತಂಡ ಕಟ್ಟಿಕೊಂಡು ಕ್ರೀಡಾಕೂಟದಲ್ಲಿ ಭಾಗವಹಿಸಲು ಸಾಕಷ್ಟು ಖರ್ಚು ಮಾಡಿದ್ದೇವೆ. ಆದರೆ ಸರ್ಕಾರ ಪ್ರೋ›ತ್ಸಾಹ ನೀಡದೆ ನಿರ್ಲಕ್ಷ್ಯ ವಹಿಸಿರುವುದು ಗ್ರಾಮೀಣ ಪ್ರತಿಭೆಗಳಿಗೆ ತೊಂದರೆಯಾಗುತ್ತಿದೆ.-ಅಮೃತ್‌ಕುಮಾರ್‌, ವಾಲಿಬಾಲ್‌ ತಂಡದ ತರಬೇತಿದಾರ, ಮಂಡ್ಯ

ಗ್ರಾಮೀಣ ಕ್ರೀಡಾಕೂಟದಲ್ಲಿ ವಿಜೇತರಾದ ಸ್ಪ ರ್ಧಿಗಳಿಗೆ ಬಹುಮಾನದ ಮೊತ್ತ ಹಾಕುವುದಾಗಿ ಸರ್ಕಾರ ಘೋಷಣೆ ಮಾಡಿತ್ತು. ಅದಕ್ಕಾಗಿ ಇಲಾಖೆಯಿಂದ ಎಲ್ಲ ಸ್ಪ ರ್ಧಿಗಳ ವಿವರ, ದಾಖಲಾತಿ ಪಡೆದು ಕೇಂದ್ರ ಕಚೇರಿಗೆ ಕಳುಹಿಸಲಾಗಿದೆ. ಅಲ್ಲಿಂದಲೇ ನೇರವಾಗಿ ಖಾತೆಗಳಿಗೆ ಹಣ ಜಮೆ ಆಗಲಿದೆ. –ಜಿ.ಓಂಪ್ರಕಾಶ್‌, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ/ಕ್ರೀಡಾ ಇಲಾಖೆ, ಮಂಡ್ಯ 

-ಎಚ್‌.ಶಿವರಾಜು

ಟಾಪ್ ನ್ಯೂಸ್

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್‌

BGV-Gruhalkmi

Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ

Suicide 3

Maddur; ಕೆಲಸದ ಒತ್ತಡ: ಎಂಜಿನಿಯರ್‌ ಆತ್ಮಹ*ತ್ಯೆ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

crimebb

Kasaragod ಅಪರಾಧ ಸುದ್ದಿಗಳು; ತಂಬಾಕು ಉತ್ಪನ್ನಗಳ ಸಹಿತ ಇಬ್ಬರ ಬಂಧನ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

hejjenu 1

Kundapura: ಹೆಜ್ಜೇನು ದಾಳಿ; ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.