ಅತೃಪ್ತ ಶಾಸಕರ ನಡೆ ವಿರುದ್ಧ ಪ್ರತಿಭಟನೆ
Team Udayavani, Jul 9, 2019, 3:54 PM IST
ರೆಸಾರ್ಟ್ ರಾಜಕೀಯ ಮಾಡುತ್ತಿರುವ ಅತೃಪ್ತ ಶಾಸಕರ ವಿರುದ್ಧ ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಮದ್ದೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ರೆಸಾರ್ಟ್ ರಾಜಕೀಯ ಮಾಡುತ್ತಿರುವ ಅತೃಪ್ತ ಶಾಸಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘದ ವತಿಯಿಂದ ಸೋಮವಾರ ಸಂಜೆ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಪಟ್ಟಣದ ಪ್ರವಾಸಿಮಂದಿರದ ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತದ ಬಳಿ ಜಮಾಯಿಸಿದ ಸಂಘಟನೆಯ ಕಾರ್ಯಕರ್ತರು ರಾಜೀನಾಮೆ ನೀಡಿರುವ ಶಾಸಕರ ವಿರುದ್ಧ ಘೋಷಣೆ ಕೂಗಿ ಮೈಸೂರು ಬೆಂಗಳೂರು ಹೆದ್ದಾರಿ ತಡೆ ನಡೆಸಿದರು.
ರಾಜೀನಾಮೆ ನೀಡಿರುವ 13 ಶಾಸಕರ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಜತೆಗೆ ಪಕ್ಷಾಂತರ ನಿಷೇಧ ಕಾಯಿದೆಯನ್ನು ಜಾರಿಗೆ ತಂದು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ರಾಜ್ಯಾದ್ಯಂತ ಬೀಕರ ಬರಗಾಲ ವ್ಯಾಪಿಸಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚು ಜರುಗುತ್ತಿದ್ದು ಜನ, ಜಾನುವಾರುಗಳಿಗೆ ಕುಡಿಯುವ ನೀರು ಸಿಗದೆ ಪರಿತಪಿಸುವ ಜತೆಗೆ ರೈತರು ನಗರ ಪ್ರದೇಶಗಳಿಗೆ ಗುಳೆ ಹೋಗುತ್ತಿದ್ದರೂ ಇದನ್ನು ಲೆಕ್ಕಿಸದೆ ರೆಸಾರ್ಟ್ ರಾಜಕೀಯಕ್ಕೆ ಮುಂದಾಗುವ ಮೂಲಕ ರಾಜ್ಯದ ಜನರಿಗೆ ಅನ್ಯಾಯವೆಸಗುತ್ತಿರುವುದಾಗಿ ದೂರಿದರು.
ಕಳೆದ ಒಂದು ವರ್ಷದ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಗಮನಹರಿಸದೆ ತಮ್ಮ ಅಧಿಕಾರದ ಆಸೆಗಾಗಿ ದುಭಾರಿ ಹೋಟೇಲ್ಗಳಲ್ಲಿ ರಾಜಕೀಯಕ್ಕೆ ಮುಂದಾಗುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದ್ದು ಇಂತಹ ರಾಜಕಾರಣಿಗಳು ಮುಂದಿನ ಚುನಾವಣೆಯಲ್ಲಿ ಸ್ಪರ್ಧೆಯೊಡ್ಡಲು ಮುಂದಾದಲ್ಲಿ ಪೊರಕೆ ಚಳವಳಿ ಹಮ್ಮಿಕೊಳ್ಳುವ ಎಚ್ಚರಿಕೆ ನೀಡಿದರು.
ಕೂಡಲೇ ರೆಸಾರ್ಟ್ ರಾಜಕೀಯವನ್ನು ಬದಿಗೊತ್ತಿ ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಗಮನಹರಿಸುವಂತೆ ಒತ್ತಾಯಿಸಿದರಲ್ಲದೇ ಇಂತಹದ್ದೇ ರಾಜಕೀಯ ದೊಂಬರಾಟಕ್ಕೆ ಶಾಸಕರು ಮುಂದಾದಲ್ಲಿ ಕ್ಷೇತ್ರದ ಮತದಾರರೇ ತಕ್ಕ ಪಾಠ ಕಲಿಸಲಿದ್ದಾರೆಂದು ಎಚ್ಚರಿಕೆ ನೀಡಿದರು. ಈ ವೇಳೆ ಸಂಘಟನೆಯ ತಾಲೂಕು ಅಧ್ಯಕ್ಷ ಸಿದ್ದೇಗೌಡ, ಕಾರ್ಯದರ್ಶಿ ಚುಂಚಹಳ್ಳಿ ಸುರೇಶ್, ಪದಾಧಿಕಾರಿಗಳಾದ ಕೆ. ಸುರೇಶ್, ಮಾರಸಿಂಗನಹಳ್ಳಿ ರಾಮಚಂದ್ರು, ಮಲ್ಲರಾಜು, ಶಿವಣ್ಣ, ಶಂಕರ್, ಆನಂದ್, ಸಿದ್ದರಾಜು, ರಮೇಶ್, ಚನ್ನೇಶ, ಯೋಗೇಶ್, ಸಿ.ಎಸ್. ಶಂಕರ್, ಕಾಳೀರಯ್ಯ ನೇತೃತ್ವವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ
Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಒನ್ ನೇಶನ್-ಒನ್ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್
HMP: ಮತ್ತಿಬ್ಬರು ಮಕ್ಕಳಲ್ಲಿ ಎಚ್‌ಎಂಪಿ ವೈರಸ್: ದೇಶದಲ್ಲಿ 7ಕ್ಕೇರಿದ ಕೇಸ್
ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಭಾರತದ 21 ಸ್ಪರ್ಧಿಗಳು ಭಾಗಿ
Gangolli; ಬೋಟ್‌ಗೆ ಮರದ ದಿಮ್ಮಿ ಢಿಕ್ಕಿ: ಅಪಾರ ಹಾನಿ
Mangaluru: ಲಕ್ಷಾಂತರ ವಿದ್ಯಾರ್ಥಿಗಳಿಗೆ ಕೆಪಿಟಿ ದಾರಿದೀಪ: ಸಚಿವ ಡಾ| ಎಂ.ಸಿ. ಸುಧಾಕರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.