Protest: ಲೋಡ್ ಶೆಡ್ಡಿಂಗ್ ಖಂಡಿಸಿ ಧರಣಿ
Team Udayavani, Oct 26, 2023, 3:54 PM IST
ಮಂಡ್ಯ: ಅನಧಿಕೃತ ಲೋಡ್ ಶೆಡ್ಡಿಂಗ್ ಜಾರಿಗೊಳಿಸಿ ಕೃಷಿ ಪಂಪ್ ಸೆಟ್ ಗಳಿಗೆ ಸಮರ್ಪಕ ವಿದ್ಯುತ್ ಪೂರೈಸದ ರಾಜ್ಯ ಸರ್ಕಾರದ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು. ನಗರದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಕಚೇರಿ ಮುಂಭಾಗ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ಪ್ರತಿಭಟನಾ ಧರಣಿ ನಡೆಸಿದರು.
ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯಿಂದ ಈಗಾಗಲೇ ರೈತರ ಬದುಕು ಸಂಕಷ್ಟ ದಲ್ಲಿದ್ದು, ಸರ್ಕಾರ ಅನಿಯಮಿತ ವಾಗಿ ವಿದ್ಯುತ್ ಕಡಿತ ಮಾಡುತ್ತಿರುವುದರಿಂದ ಬೆಳೆದು ನಿಂತಿರುವ ಬೆಳೆಗಳಿಗೆ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ. ರಾತ್ರಿ ವೇಳೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ರೈತರು ಜಮೀನಿನತ್ತ ಹೋಗಲು ಹೆದರುವ ಪರಿಸ್ಥಿತಿ ನಿರ್ಮಾಣ ವಾಗಿದೆ. ಇದರಿಂದ ಕಬ್ಬು ಮತ್ತು ಭತ್ತದ ಬೆಳೆ ಒಣಗುತ್ತಿವೆ ಎಂದು ಹೇಳಿದರು.
ಪ್ರತಿನಿತ್ಯ ಏಳು ತಾಸು ತ್ರೀ ಫೇಸ್ ವಿದ್ಯುತ್ ಪೂರೈಕೆ ಮಾಡಲಾಗುತ್ತಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಐದು ತಾಸಿಗೆ ಉಳಿಕೆ ಮಾಡಿದೆ. ಹಗಲು ಸರಬರಾಜು ಮಾಡುತ್ತಿದ್ದ ವಿದ್ಯುತ್ ಅನ್ನು ರಾತ್ರಿ ಪಾಳಿಗೆ ವರ್ಗಾಯಿಸಿದೆ. ಇದರಿಂದ ರೈತರಿಗೆ ಮತ್ತಷ್ಟು ತೊಂದರೆಯಾಗಿದೆ. ಪ್ರತಿನಿತ್ಯ ಎರಡು ತಾಸು ಕೂಡ ವಿದ್ಯುತ್ ನೀಡುತ್ತಿಲ್ಲ ಎಂದು ಹೇಳಿದರು. ಕೃಷಿ ಪಂಪ್ ಸೆಟ್ ಗಳಿಗೆ ಪ್ರತಿನಿತ್ಯ ಹತ್ತು ತಾಸು ತ್ರೀ ಫೇಸ್ ವಿದ್ಯುತ್ ಪೂರೈಕೆ ಮಾಡಬೇಕು, ಹಗಲು ಹೊತ್ತು ಹೆಚ್ಚಿನ ತಾಸು ವಿದ್ಯುತ್ ಸರಬರಾಜು ಮಾಡಬೇಕು ಎಂದು ಒತ್ತಾಯಿಸಿದರು.
ರೈತ ಸಂಘದ ಶಿವಳ್ಳಿ ಚಂದ್ರು, ಜವರೇಗೌಡ, ಚಿಕ್ಕ ಮಂಡ್ಯ ನಾಗರಾಜು. ರಾಮಲಿಂಗೈಗೌಡ, ಸಣ್ಣಪ್ಪ, ಕರುನಾಡ ಸೇವಕರು ಸಂಘಟನೆಯ ಎಂ.ಬಿ. ನಾಗಣ್ಣಗೌಡ, ರಾಮಚಂದ್ರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.