ಪೊಲೀಸರ ದೌರ್ಜನ್ಯ ಖಂಡಿಸಿ ಪ್ರತಿಭಟನೆ
Team Udayavani, May 18, 2019, 4:25 PM IST
ಮಂಡ್ಯ: ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಹಾಗೂ ಸಿಬ್ಬಂದಿಯನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿರಾಜ್ಯ ರೈತಸಂಘದ ಕಾರ್ಯಕರ್ತರು ನಗರದಲ್ಲಿ ರಸ್ತೆ ತಡೆ ನಡೆಸಿದರು.
ನಗರದ ಸರ್‌ಎಂವಿ ಪ್ರತಿಮೆ ಮುಂಭಾಗದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಮೈಸೂರು-ಬೆಂಗಳೂರು ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಕಳೆದ 38 ವರ್ಷಗಳಿಂದ ಕರ್ನಾಟಕ ರಾಜ್ಯ ರೈತ ಸಂಘ ರೈತರ, ಕಾರ್ಮಿಕರ, ಶೋಷಿತರ ಪರವಾಗಿ ಹಾಗೂ ಭ್ರಷ್ಟಾಚಾರ, ಅನ್ಯಾಯ, ಅಕ್ರಮಗಳ ವಿರುದ್ಧ ಹೋರಾಟ ಮಾಡಿಕೊಂಡು ಬರುತ್ತಿದೆ. ಆ ನಿಟ್ಟಿನಲ್ಲಿ ಅನ್ಯಾಯಕ್ಕೆ ಒಳಗಾದವರ ಪರ ಸಂಘದ ರಾಜ್ಯ ನಾಯಕ ಲೋಕರಾಜೇಅರಸು ಕೇಳಲು ಬೆಟ್ಟದಪುರ ಪೊಲೀಸ್ ಠಾಣೆಗೆ ಹೋದಾಗ ಅಲ್ಲಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ಸಮಸ್ಯೆ ಅರಿಯದೆ ಗೂಂಡಾಗಿರಿ ವರ್ತಿಸಿದ್ದಲ್ಲದೆ, ಅವರ ವಿರುದ್ಧ ಸುಳ್ಳು ಮೊಕದ್ದಮೆ ದಾಖಲಿಸಿ ಬಂಧಿಸಿರುವುದು ಸರಿಯಲ್ಲ ಎಂದು ಕಿಡಿಕಾರಿದರು.
ಲೋಕರಾಜೇ ಅರಸು ಅವರನ್ನು ಬಂಧಿಸಿ ಕಾರಾಗೃಹಕ್ಕೆ ಕಳುಹಿಸಿರುವುದು ಅಮಾನುಷ ಕೃತ್ಯವಾಗಿದ್ದು, ಪೊಲೀಸ್ ಇಲಾಖೆಗೆ ಕಪ್ಪುಚುಕ್ಕೆ. ಇಂಥ ಅಧಿಕಾರಿ ಹಾಗೂ ಸಿಬ್ಬಂದಿ ಇಟ್ಟುಕೊಂಡು ಪೊಲೀಸ್ ಇಲಾಖೆಗೆ ಕೆಟ್ಟು ಹೆಸರು ಬರುತ್ತದೆ. ಇಂತಹ ಅಧಿಕಾರಿಗಳು ಸರ್ಕಾರ ಕೂಡಲೇ ಕರ್ತವ್ಯದಿಂದ ವಜಾ ಮಾಡಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಶಂಭೂನಹಳ್ಳಿ ಸುರೇಶ್, ರಾಮಕೃಷ್ಣಯ್ಯ, ಬಿ.ಬೊಮ್ಮೇಗೌಡ, ಜಿ.ಎಸ್.ಲಿಂಗಪ್ಪಾಜಿ, ಜಿ.ಎ.ಶಂಕರ್, ಸಿದ್ದೇಗೌಡ, ಲತಾಶಂಕರ್, ದೇವರಾಜು ಸೇರಿದಂತೆ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.