ಕಲ್ಲು ಗಣಿಗಾರಿಕೆ ಸ್ಥಗಿತಕ್ಕೆ ಆಗ್ರಹ
Team Udayavani, Apr 26, 2022, 3:09 PM IST
ಪಾಂಡವಪುರ: ಗಣಿಗಾರಿಕೆಯಿಂದ ರೈತರ ಬದುಕು ಸಂಕಷ್ಟಕ್ಕೆ ಸಿಲುಕಿದ್ದು, ತಕ್ಷಣ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಷೇಧಿಸಬೇಕು ಎಂದು ಆಗ್ರಹಿಸಿ ತಾಲೂಕಿನ ಕನಗನಮರಡಿ ಗ್ರಾಮಸ್ಥರು ಪಾದಯಾತ್ರೆ ಮೂಲಕ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಗ್ರಾಮದಿಂದ 12 ಕಿ.ಮೀ ಪಾದಯಾತ್ರೆ ಮೂಲಕ ತಾಲೂಕು ಕಚೇರಿ ತಲುಪಿದ ಪ್ರತಿಭಟನಾಕಾರರು, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಗಣಿ ಮಾಲಿಕ ಅಶೋಕ್ ಪಾಟೀಲ್ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಭೂಮಿ ಬರಡಾಗಲಿದೆ: ಪ್ರತಿಭಟನೆ ನೇತೃತ್ವ ವಹಿಸಿದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ. ಎಚ್.ಎನ್.ರವೀಂದ್ರ ಮಾತನಾಡಿ, ಗಣಿಗಾರಿಕೆಗೆ ಅನುಮತಿ ನೀಡುವ ವಿಚಾರದಲ್ಲಿ ಅಧಿಕಾರಿಗಳಿಗೆ ಗಣಿಮಾಲಿಕನ ಮೇಲೆ ಪ್ರೀತಿ ಹೆಚ್ಚಿರುವಂತೆ ನಡೆದುಕೊಂಡಿದ್ದಾರೆ. ಗಣಿಗಾರಿಕೆಯಿಂದ ಇಲ್ಲಿನ ವಿಶ್ವೇಶ್ವರಯ್ಯ ಉಪ ನಾಲೆಗಳು, ಕುರಹಟ್ಟಿ ಅಕ್ವಡೆಕ್ (ಮೇಲ್ಗಾಲುವೆ), ಹುಲಿಕೆರೆ ಸುರಂಗ ಕಾಲುವೆ, ಸೇತುವೆ ಇತ್ಯಾದಿಗಳಿಗೆ ಅಪಾಯವಿರುವ ಕಾರಣ ಗಣಿಗಾರಿಕೆಗೆ ಅನುಮತಿ ನೀಡಬಾರದು ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಪತ್ರ ಬರೆದಿದ್ದಾರೆ. ಗಣಿಗಾರಿಕೆಯಿಂದ ಏನಾದರೂ ಅಪಾಯ ಸಂಭವಿಸಿದರೆ 1.75 ಲಕ್ಷ ಎಕರೆ ಪ್ರದೇಶದ ಭೂಮಿ ಬರಡಾಗಲಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಕಾನೂನು ಮೀರಿದ್ದಾರೆ: ಅರಣ್ಯ ಇಲಾಖೆ ಮುಖ್ಯಸ್ಥರು ಗಣಿಗಾರಿಕೆಯಿಂದ ಅರಣ್ಯದಲ್ಲಿನ ಚಿರತೆ, ಕೃಷ್ಣಾಮೃಗ ಸೇರಿದಂತೆ ಇತರೆ ವನ್ಯಜೀವಿ ಗಳಿಗೆ ಅಪಾಯವಿದೆ ಎಂದಿದ್ದಾರೆ. ಆದರೂ, ಎಲ್ಲವನ್ನೂ ಮೀರಿ ಅಧಿಕಾರಿಗಳು ಗಣಿಗಾರಿಕೆಗೆ ಅನುಮತಿ ನೀಡಿದ್ದಾರೆ ಎಂದು ಆರೋಪಿಸಿದರು.
ಪೊಲೀಸರ ನಿಯೋಜನೆ ಇಲ್ಲ: ಪಾದಯಾತ್ರೆ ಸಂದರ್ಭದಲ್ಲಿ ಟ್ರಾಫಿಕ್ ನಿಯಂತ್ರಿಸಲು ಪೊಲೀಸರನ್ನು ನಿಯೋಜನೆ ಮಾಡಿರಲಿಲ್ಲ. ಒಂದು ವೇಳೆ ಪ್ರತಿಭಟನಾಕಾರರು ಮತ್ತು ಸಾರ್ವಜನಿಕರ ನಡುವೆ ಗಲಾಟೆ ಸಂಭವಿಸಿದರೆ ಪ್ರತಿಭಟನಾಕಾರರ ವಿರುದ್ಧ ಪ್ರಕರಣ ದಾಖಲಿಸಿ ಪ್ರತಿಭಟನೆ ಹತ್ತಿಕ್ಕಬಹುದು ಎಂಬ ಉದ್ದೇಶ ದಿಂದಲೇ ಪೊಲೀಸರು ಈ ರೀತಿ ಮಾಡಿದ್ದಾರೆ ಎಂದು ದೂರಿದರು.
ಬಳಿಕ ಉಪವಿಭಾಗಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ ಹಾಗೂ ತಹಶೀಲ್ದಾರ್ ಎಸ್.ಎಲ್. ನಯನಾ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಗ್ರಾಮಸ್ಥರಾದ ತಮ್ಮಣ್ಣ, ನಾಗರಾಜು, ಜಯರಾಮೇಗೌಡ, ಕೃಷ್ಣಮೂರ್ತಿ, ಬಸವರಾಜು, ರಾಜೇಶ್, ರಾಮಕೃಷ್ಣ, ಮಹ ದೇವು, ಕುಮಾರ ಮತ್ತಿತರರು ಉಪಸ್ಥಿತರಿದ್ದರು.
ಅಧಿಕಾರಿಗಳು ಪ್ರಾಯಶ್ಚಿತ್ತ ಪಡಬೇಕಾಗುತ್ತದೆ : ಅಧಿಕಾರ ವಿಕೇಂದ್ರಿಕರಣದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚಿನ ಅಧಿಕಾರವಿದೆ. ಸ್ಥಳೀಯ ಗ್ರಾಪಂ ಆಡಳಿತ ಮಂಡಳಿ ಗಣಿಗಾರಿಕೆ ಸ್ಥಗಿತಗೊಳಿಸುವಂತೆ ನಿರ್ಣಯ ಕೈಗೊಂಡಿದ್ದಾರೆ. ವಿದ್ಯುತ್ ಸಂಪರ್ಕ ಪಡೆಯಲು ಪಂಚಾಯ್ತಿಯಿಂದ ಎನ್‌ಒಸಿ ನೀಡಿಲ್ಲ. ಆದರೂ, ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಎಂದರಲ್ಲದೇ, ಪಾಪದ ಹಣ ಪಡೆದಿರುವ ಅಧಿಕಾರಿಗಳು ಇದಕ್ಕೆ ಪ್ರಾಯಶ್ಚಿತ್ತ ಪಡಬೇಕಾಗುತ್ತದೆ ಎಂದು ಕನಗನಮರಡಿ ಗ್ರಾಮಸ್ಥರು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
T20 series: ಪಾಕಿಸ್ಥಾನಕ್ಕೆ ವೈಟ್‌ವಾಶ್ ಟಿ20: ಆಸ್ಟ್ರೇಲಿಯ 3-0 ಜಯಭೇರಿ
Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ
BGT 2024: ಐಪಿಎಲ್ ಹರಾಜಿನ ಕಾರಣಕ್ಕೆ ತಂಡ ತೊರೆದ ಆಸ್ಟ್ರೇಲಿಯಾದ ಸಹಾಯಕ ಕೋಚ್!
Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ
Hosanagar: ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಅಪಘಾತ: 29 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.