ಮೂಲ ಸೌಲಭ್ಯಕ್ಕೆ ಒತ್ತಾಯಿಸಿ ಪ್ರತಿಭಟನೆ

Team Udayavani, Jan 29, 2022, 1:09 PM IST

Untitled-1

ಮದ್ದೂರು: ತಾಲೂಕಿನ ಕುದರಗುಂಡಿ ಗ್ರಾಮದ ಮಲ್ಲಯ್ಯನಗರ ಬಡಾವಣೆ ನಿವಾಸಿಗಳಿಗೆ ಮೂಲ ಸೌಲಭ್ಯ ಕಲ್ಪಿಸುವಂತೆ ಸ್ಥಳೀಯರು ಒತ್ತಾಯಿಸಿ ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿ ಬಳಿಕ ಶಾಸಕರ ನಿವಾಸಕ್ಕೆ ತೆರಳಿ ಮನವಿ ಪತ್ರ ಸಲ್ಲಿಸಿದರು.

ತಾಲೂಕಿನ ಕುದರಗುಂಡಿ ಮಲ್ಲಯ್ಯನಗರ ಬಡಾವಣೆಯ ನಿವಾಸಿಗಳು ಗ್ರಾಮದಿಂದ ಟ್ರ್ಯಾಕ್ಟರ್‌ ಮೂಲಕ ಆಗಮಿಸಿ ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರಲ್ಲದೇ, ಕೂಡಲೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಮೂಲ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿದರು.

ಸಮಸ್ಯೆ ಬಗೆಹರಿಸಿಲ್ಲ: ಬಡಾವಣೆಯಲ್ಲಿ ಸುಮಾರು 25 ವರ್ಷಗಳಿಂದಲೂ 70 ಕುಟುಂಬಗಳು ವಾಸಿಸುತ್ತಿದ್ದು, ಇದುವರೆಗೂ ಹಕ್ಕುಪತ್ರ, ಕುಡಿಯುವ ನೀರು, ವಿದ್ಯುತ್‌, ಅಭಿವೃದ್ಧಿ ಕಾರ್ಯ ಹಾಗೂ ಇನ್ನಿತರೆ ಸೌಲಭ್ಯಗಳಿಂದ ವಂಚಿತವಾಗಿದ್ದು,ಅಧಿಕಾರಿಗಳು, ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಸಮಸ್ಯೆಯನ್ನು ಬಗೆಹರಿಸಿಲ್ಲ ಎಂದು ದೂರಿದರು.

ವಿಷಜಂತುಗಳ ವಾಸಸ್ಥಾನ: ಗುಡಿಸಲಿನಲ್ಲಿ ವಾಸಿಸುತ್ತಿರುವುದರಿಂದ ಮೀಟರ್‌ ಅಳವಡಿಸದ ಹಿನ್ನೆಲೆಯಲ್ಲಿ ಸೆಸ್ಕ್ ಇಲಾಖೆ ಕಳೆದ ಮೂರು ದಿನಗಳಿಂದಲೂ ವಿದ್ಯುತ್‌ ಕಡಿತಗೊಳಿಸಿದ್ದು, ಇದರಿಂದಾಗಿ ಕತ್ತಲಿನಲ್ಲೇ ದಿನ ಕಳೆಯುವ ಪರಿಸ್ಥಿತಿ ಬಂದೊದಗಿದ್ದು, ಬಡಾವಣೆಯಲ್ಲಿ ಶುಚಿತ್ವ ಇಲ್ಲದ ಕಾರಣ ಗಿಡಗಳು ಬೆಳೆದು ವಿಷಜಂತುಗಳ ವಾಸಸ್ಥಾನವಾಗಿ ಮಾರ್ಪಟ್ಟಿದ್ದು, ಕೂಡಲೇ ಕ್ರಮ ವಹಿಸುವಂತೆ ಆಗ್ರಹಿಸಿದರು.

ಸರ್ವೆ ನಂ.245ರಲ್ಲಿ 6 ಎಕರೆ 20 ಗುಂಟೆ ಪ್ರದೇಶದಲ್ಲಿ ನಿವೇಶನ ಹಂಚಿಕೆ ಮಂಜೂರಾಗಿದ್ದು, ನಾವುಗಳೇ ಮನೆ ನಿರ್ಮಿಸಿಕೊಂಡು ವಾಸ ಮಾಡುತ್ತಿದ್ದರೂ ಯಾವುದೇ ಸೌಲಭ್ಯ ಕಲ್ಪಿಸದೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದು, ಸವಲತ್ತು ನೀಡುವಂತೆ ತಾಲೂಕು ಕಚೇರಿ, ಕಂದಾಯ, ತಾಪಂಇನ್ನಿತರೆ ಇಲಾಖೆಗಳಿಗೆ ಮನವಿ ಮಾಡಿದ್ದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲವೆಂದರು.

ಮನವಿ: ಶಾಸಕರ ನಿವಾಸಕ್ಕೆ ತೆರಳಿದ ಪ್ರತಿಭಟ ನಾಕಾರರು ಬಡಾವಣೆಯಲ್ಲಿ ಅದ್ವಾನಗೊಂಡಿರುವಸಮಸ್ಯೆಯನ್ನು ಬಗೆಹರಿಸಿ ತಮಗೆ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಿದರು.

ಮನವಿ ಸ್ವೀಕರಿಸಿ ಮಾತನಾಡಿದ ಶಾಸಕ ಡಿ.ಸಿ.ತಮ್ಮಣ್ಣ, ವಿದ್ಯುತ್‌ ಕಡಿತಗೊಳಿಸಿರುವ ಸಂಬಂಧ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸಂಪರ್ಕ ಕೊಡಿಸುವ ಭರವಸೆ ನೀಡಿದರಲ್ಲದೇಹಕ್ಕುಪತ್ರ ವಿತರಣೆ ಸರ್ಕಾರದ ಯೋಜನೆ  ಯಾಗಿದ್ದು, ಮೇಲಧಿಕಾರಿಗಳೊಟ್ಟಿಗೆ ಚರ್ಚಿಸಿ ಅಗತ್ಯ ಕ್ರಮ ವಹಿಸುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆದರು.

ಪ್ರತಿಭಟನೆ ವೇಳೆ ಗ್ರಾಪಂ ಸದಸ್ಯೆ ಪ್ರಭಾ, ಎಪಿಎಂಸಿ ಮಾಜಿ ನಿರ್ದೇಶಕ ಶಿವಣ್ಣ, ಸ್ಥಳೀಯ ನಿವಾಸಿಗಳಾದ ನವೀನ್‌ಕುಮಾರ್‌, ಮಲ್ಲಾರಾಧ್ಯ,ಸರೋಜಮ್ಮ, ಮಹಾದೇವಿ, ಗಿರಿಕನ್ಯೆ, ಅಭಿಲಾಷ್‌, ಲಕ್ಷ್ಮೀಬಾಯಿ, ಶಿವಣ್ಣ, ನಂದನ್‌, ನಾಗಲಕ್ಷ್ಮೀ, ರವಿ, ಸುಧಾ, ಶೋಭಾ, ರತ್ನಮ್ಮ ನೇತೃತ್ವ ವಹಿಸಿದ್ದರು.

ಟಾಪ್ ನ್ಯೂಸ್

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

om-prakash

Om Prakash Chautala: ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ ವಿಧಿವಶ

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

Starbucks ಕಾಫಿ ಸಂಸ್ಥೆ ಭಾರತದಿಂದ ನಿರ್ಗಮಿಸಲಿದೆಯಾ?Tata Consumer Products ಹೇಳಿದ್ದೇನು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

14

Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ

Suicide 3

Maddur; ಕೆಲಸದ ಒತ್ತಡ: ಎಂಜಿನಿಯರ್‌ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್‌ ಭಾಗ್ವತ್

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

8

Kaup town: ಟ್ರಾಫಿಕ್‌ ಒತ್ತಡ, ಪಾರ್ಕಿಂಗ್‌ ಕಿರಿಕಿರಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.