ಪ್ರತಿಭಟನಾ ವಾರಾಚರಣೆ


Team Udayavani, Aug 30, 2020, 1:24 PM IST

ಪ್ರತಿಭಟನಾ ವಾರಾಚರಣೆ

ಮಂಡ್ಯ: ರಾಜ್ಯದ ಜಿಎಸ್‌ಟಿ ತೆರಿಗೆ  ಹಣ ನೀಡಬೇಕು ಸೇರಿದಂತೆ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಸಿಪಿಐಎಂ ವತಿಯಿಂದ ನಡೆಸುತ್ತಿರುವ ಪ್ರತಿಭಟನಾ ವಾರಾಚರಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರು ಬೇಡಿಕೆ ಪಟ್ಟಿ ಸಲ್ಲಿಕೆ ಮಾಡಿದರು.

ಡೀಸಿ ಕಚೇರಿ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಆದಾಯ ತೆರಿಗೆವ್ಯಾಪ್ತಿಗೆ ಬರದ ಬಡಕುಟುಂಬಗಳಿಗೆ 6  ತಿಂಗಳವರೆಗೆ 7500 ರೂ. ವರ್ಗಾವಣೆ ಮಾಡಬೇಕು. 6 ತಿಂಗಳವರೆಗೆ ತಲಾ 10 ಕೆಜಿ ಉಚಿತ ಆಹಾರ ಧಾನ್ಯ ವಿತರಿಸಬೇಕು. ಉದ್ಯೋಗ ಖಾತ್ರಿ ಯೋಜನೆ ವಿಸ್ತರಿಸಿ ಕೂಲಿದರ ಏರಿಸಿ, 200 ದಿನಗಳ ಕೆಲಸ ಖಾತ್ರಿಪಡಿಸಬೇಕು. ನಗರ ಪ್ರದೇಶಗಳಿಗೂ ಉದ್ಯೋಗ ಖಾತ್ರಿ ವಿಸ್ತರಿಸಬೇಕು. ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆ ನೀಡಬೇಕು ಎಂದು ಆಗ್ರಹಿಸಿದರು.

ಅಂತರಾಜ್ಯ ವಲಸೆ ಕೆಲಸಗಾರರ ಕಾಯ್ದೆ 1979 ಅನ್ನು ತೆಗೆದು ಹಾಕುವ ಪ್ರಸ್ತಾವ ಕೈಬಿಟ್ಟು, ಕಾಯ್ದೆ ಬಲಪಡಿಸಬೇಕು. ಸಾರ್ವಜನಿಕ ಆರೋಗ್ಯಕ್ಕೆ ಕನಿಷ್ಠ ಜಿಡಿಪಿ ಶೇ.3ಕ್ಕೆ ಹೆಚ್ಚಿಸಬೇಕು. ಅಗತ್ಯ ವಸ್ತುಗಳ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ಮಾಡುವ ಎಲ್ಲ ಸುಗ್ರೀವಾಜ್ಞೆ ರದ್ದು ಮಾಡಬೇಕು. ಕಾರ್ಮಿಕ ಕಾನೂನುಗಳನ್ನು ರದ್ದು, ತಿದ್ದುಪಡಿ, ಅಮಾನತು ಮಾಡುವ ಎಲ್ಲ ಪ್ರಸ್ತಾವಗಳನ್ನು ಹಿಂತೆಗೆದುಕೊಳ್ಳಬೇಕು. ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರಣ ನಿಲ್ಲಿಸಬೇಕು. ಪಿಎಂ ಖಾಸಗಿ ಟ್ರಸ್ಟ್‌ನಲ್ಲಿ ಸಂಗ್ರಹವಾಗಿ ನಿಧಿಯನ್ನು ಕೋವಿಡ್ ಸೋಂಕು ಮುಂಚೂಣಿಯಲ್ಲಿರುವ ರಾಜ್ಯಗಳಿಗೆ ವರ್ಗಾಯಿಸಬೇಕು ಎಂದು ಒತ್ತಾಯಿಸಿದರು.

ಸಿಪಿಐಎಂನ ಸಿ.ಕುಮಾರಿ, ನಾರಾಯಣ, ಪುಟ್ಟಮ್ಮ, ಚಂದ್ರಶೇಖರ್‌, ಲಕ್ಷ್ಮೀ, ಶ್ರೀನಿವಾಸ್‌, ಗಾಯಿತ್ರಿ, ಅಮಾಸೆ, ಶಿಲ್ಪಶ್ರೀ, ರಾಜು, ರಾಜಮ್ಮ ಹಾಜರಿದ್ದರು.

………………………………………………………………………………………………………………………………………………..

ಜನವಿರೋಧಿ ನೀತಿಗೆ ಖಂಡನೆ : ಮದ್ದೂರು: ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸಿ, ಭಾರತ ಕಮ್ಯೂನಿಷ್ಟ್ ಪಕ್ಷದ ಪದಾಧಿಕಾರಿಗಳು ತಾಲೂಕು ಕಚೇರಿಗೆ ಮುತ್ತಿಗೆಹಾಕಿ ಶನಿವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ತಾಲೂಕು ಕಚೇರಿ ಬಳಿ ಜಮಾಯಿಸಿದ ಸಂಘಟನೆ ಕಾರ್ಯಕರ್ತರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರು ಜನ ವಿರೋಧಿ ಯೋಜನೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿದರು.

ಲಾಕ್‌ಡೌನ್‌ನಿಂದ ಆರ್ಥಿಕ ಸಂಕಷ್ಟ: ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ಘೋಷಿಸಿದ ಲಾಕ್‌ಡೌನ್‌ನಿಂದ ಆರ್ಥಿಕ ಸಂಕಷ್ಟಗಳಿಗೆ ಸರ್ಕಾರವೇ ಸಂಪೂರ್ಣ ಹೊಣೆಯಾಗಿದೆ. ಕೂಡಲೇ ಎಲ್ಲಾ ವರ್ಗದ ಜನರಿಗೆ ಪರಿಹಾರ ಒದಗಿಸುವಂತೆ ಕೋವಿಡ್‌ ಸಂಕಷ್ಟ ಅನುಭವಿಸುತ್ತಿರುವ ಜನತೆಗೆ ನೆರವು ನೀಡಲು ಬಿಜೆಪಿ ಸರ್ಕಾರ ನಿರ್ಲಕ್ಷಿಸಿದೆ ಎಂದು ದೂರಿದರು.

ಉದ್ಯೋಗ ಖಾತರಿ ವಿಸ್ತರಿಸಿ: ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ವಿಸ್ತರಿಸಿ, ಕೂಲಿ ದರವನ್ನು ಹೆಚ್ಚಳ ಮಾಡುವ ಜತೆಗೆ ವರ್ಷದ 200 ದಿನಗಳ ಕೆಲಸವನ್ನು ನೀಡಬೇಕು. ಸಾರ್ವಜನಿಕ ಆರೋಗ್ಯಕ್ಕೆ ಕೇಂದ್ರೀಯ ವೆಚ್ಚವನ್ನು ಕನಿಷ್ಠ ಜಿಡಿಪಿಯ ಶೇ.3ಕ್ಕೆ ಹೆಚ್ಚಿಸಬೇಕು. ಬೇಡಿಕೆ ಈಡೇರಿಸುವಂತೆ ತಪ್ಪಿದಲ್ಲಿ ಪ್ರತಿಭಟನೆ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಸಂಘಟನೆ ಕಾರ್ಯಕರ್ತರಾದ ಡಿ. ಸಿದ್ದರಾಜು, ವಿಷಕಂಠೇಗೌಡ, ರಾಮಚಂದ್ರು, ಸಿದ್ದೇಗೌಡ, ಡಿ.ಕೆ.ಲತಾ, ಶೋಭಾ, ಜಯಮ್ಮ, ಮಹದೇವಸ್ವಾಮಿ, ಹನುಮೇಶ್‌ ಹಾಜರಿದ್ದರು.

ಟಾಪ್ ನ್ಯೂಸ್

Grhajyothi

Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್‌’

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

2047ಕ್ಕೆ ವಿಕಸಿತ ಭಾರತ ನಿರ್ಮಾಣ: ಉಪರಾಷ್ಟ್ರಪತಿ

Vice President: 2047ಕ್ಕೆ ವಿಕಸಿತ ಭಾರತ ನಿರ್ಮಾಣ: ಜಗದೀಪ್‌ ಧನಕರ್‌

20-mandya

Mahadevapura: ಲಿಫ್ಟ್ ಗುಂಡಿಗೆ ಬಿದ್ದ ಬಾಲಕ ಸಾವು

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Grhajyothi

Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್‌’

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.