ಬೇಡಿಕೆಗಳ ಈಡೇರಿಕೆಗೆ ಆಗ್ರಹ
Team Udayavani, Jul 6, 2019, 2:27 PM IST
ಶ್ರೀರಂಗಪಟ್ಟಣದ ತಾಲೂಕು ಕಚೇರಿ ಮುಂದೆ ಅಂಗನವಾಡಿ ಕಾರ್ಯಕರ್ತರು, ಸಹಾಯಕರು ಬೇಡಿಕೆಗಳ ಈಡೇರಿಕೆಗೆ ಅಹೋರಾತ್ರಿ ಧರಣಿ ನಡೆಸಿದರು.
ಶ್ರೀರಂಗಪಟ್ಟಣ: ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಾಲೂಕು ಅಂಗನವಾಡಿ ಕಾರ್ಯಕರ್ತರು ತಾಲೂಕು ಕಚೇರಿ ಮುಂದೆ ಅಹೋರಾತ್ರಿ ಧರಣಿ ನಡೆಸಿದರು.
ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕರು ಸೇರಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ತೆರೆದ ಬಳಿಕ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿಯರ ಕೆಲಸಗಳನ್ನು ಸರ್ಕಾರ ಕಿತ್ತುಕೊಳ್ಳುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದರು.
ಈಗಾಗಲೇ ಅಂಗನವಾಡಿಯಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದ್ದು, 3-4 ವರ್ಷಗಳಲ್ಲಿ ಅಂಗನವಾಡಿಗೆ ಬರುತ್ತಿದ್ದ ಮಕ್ಕಳು, ಈಗ ಬೇರೆ ಬೇರೆ ಇಂಗ್ಲಿಷ್ ಶಾಲೆಗಳಿಗೆ ಸೇರಿಕೊಂಡು 2 ವರ್ಷ 6 ತಿಂಗಳ ಮಕ್ಕಳಿಗೂ ಪಬ್ಲಿಕ್ ಶಾಲೆಯಲ್ಲಿ ಅವಕಾಶಗಳಿ ರುವುದರಿಂದ ಅಂಗನವಾಡಿಗೆ ಪೋಷಕರು ಮಕ್ಕಳನ್ನು ಸೇರಿಸುವುದಿಲ್ಲ. ಕರ್ನಾಟಕ ಪಬ್ಲಿಕ್ ಶಾಲೆಗಳ ತೆರೆದಂತೆ ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನು ಇಂಗ್ಲಿಷ್ ಕಾನ್ವೆಂಟ್, ನರ್ಸರಿ ಶಾಲೆಗಳಾಗಿ ಪರಿವರ್ತಿಸಿ ಆದೇಶ ಹೊರಡಿಸಬೇಕು ಎಂದರು.
ರಾಜ್ಯ ಅಂಗನವಾಡಿ ಕಾರ್ಯಕರ್ತರು ಹಾಗೂ ಸಹಾಯಕಿರ ತಾಲೂಕು ಸಮಿತಿ ಸಂಚಾಲಕಿ ವಸಂತ, ಮೀನಾಕ್ಷಿ, ಶೈಲಜಾ, ಅನಂತಲಕ್ಷ್ಮೀ, ದುಂಡಮ್ಮ ಮತ್ತಿತರರಿದ್ದರು. ಪುರಸಭೆ ಸದಸ್ಯ ಪ್ರಕಾಶ್, ಅಂಗನನಾಡಿ ಕಾರ್ಯಕರ್ತರ ಧರಣಿಗೆ ಬೆಂಬಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.