ರಸ್ತೆಯಲ್ಲಿ ಭತ್ತ ನೆಟ್ಟು ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ
Team Udayavani, Aug 21, 2019, 5:48 PM IST
ಮದ್ದೂರು-ದೇಶಹಳ್ಳಿ-ವಳಗೆರೆಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ದುರಸ್ತಿಗೆ ಆಗ್ರಹಿಸಿ ಸ್ಥಳೀಯರು ರಸ್ತೆಯಲ್ಲಿ ಭತ್ತ ನಾಟಿ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಿದರು.
ಮದ್ದೂರು: ಹದಗೆಟ್ಟಿರುವ ರಸ್ತೆಯನ್ನು ದುರಸ್ತಿಗೊಳಿಸುವಂತೆ ಒತ್ತಾಯಿಸಿ ಸ್ಥಳೀಯ ರೈತರು ಕೆಸರುಗದ್ದೆಯಂತಾಗಿರುವ ರಸ್ತೆಗೆ ಭತ್ತದ ಸಸಿ ನಾಟಿ ಮಾಡುವ ಮೂಲಕ ಮಂಗಳವಾರ ವಿನೂತನ ಪ್ರತಿಭಟನೆ ನಡೆಸಿದರು.
ಮದ್ದೂರು-ದೇಶಹಳ್ಳಿ-ವಳಗೆರೆಹಳ್ಳಿ ಸಂಪರ್ಕ ಕಲ್ಪಿಸುವ ರಸ್ತೆಯು ಕೆಸರುಗದ್ದೆಯಂತಾಗಿದ್ದು ಕಾವೇರಿ ನೀರಾವರಿ ನಿಗಮದ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಹಲವಾರು ಬಾರಿ ಮನವಿ ಮಾಡಿದರೂ ಕ್ರಮ ವಹಿಸದ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿದರು.
ಅವ್ಯವಸ್ಥೆಯ ರಸ್ತೆಯಲ್ಲಿ ಜಮಾಯಿಸಿದ ಸ್ಥಳೀಯ ರೈತರು ಚುನಾಯಿತ ಪ್ರತಿನಿಧಿಗಳೂ ಸೇರಿದಂತೆ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರಲ್ಲದೇ ಕೂಡಲೇ ರಸ್ತೆ ದುರಸ್ತಿಗೊಳಿಸುವಂತೆ ಆಗ್ರಹಿಸಿದರು.
ರಸ್ತೆಗಳ ಅವ್ಯವಸ್ಥೆ: ಈ ಮಾರ್ಗದ ರಸ್ತೆಯಲ್ಲಿ ಸ್ಥಳೀಯ ರೈತರು, ಸಾರ್ವಜನಿಕರು, ಹಾಗೂ ದೇಶಹಳ್ಳಿ-ವಳಗೆರೆಹಳ್ಳಿ ಗ್ರಾಮಸ್ಥರು ಪ್ರತಿನಿತ್ಯ ಸಂಚರಿಸುತ್ತಿದ್ದು, ಕಳೆದ ಒಂದು ವಾರದಿಂದ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಯಲ್ಲಿ ಸಂಚರಿಸದಂತಹ ದುಸ್ಥಿತಿ ನಿರ್ಮಾಣಗೊಂಡಿದೆ ಎಂದು ದೂರಿದರು.
ದ್ವಿಚಕ್ರ ವಾಹನದಲ್ಲಿ ಸಂಚರಿಸುವ ಸವಾರರು ಹರಸಾಹಸ ಪಡಬೇಕಾದ ಸ್ಥಿತಿ ಬಂದೊದಗಿದ್ದು ವ್ಯವಸಾಯ ಮಾಡಲು ತಮ್ಮ ಜಮೀನುಗಳಿಗೆ ತೆರಳುವ ರೈತರು ಬಿದ್ದು ಗಾಯಗೊಂಡಿರುವ ಉದಾಹರಣೆಗಳು ಸಾಕಷ್ಟಿuದ್ದರೂ ಇಲಾಖೆ ಅಧಿಕಾರಿಗಳು ಇತ್ತ ಗಮಹರಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಅಧಿಕಾರಿಗಳ ನಿರ್ಲಕ್ಷ್ಯ: ಸರ್ಕಾರ ರಸ್ತೆಗಳ ಅಭಿವೃದ್ಧಿಗೆ ಕೋಟ್ಯಂತರ ರೂ. ಹಣ ಬಿಡುಗಡೆಗೊಳಿಸಿದ್ದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ನಾಲಾ ಸಂಪರ್ಕ ಕಲ್ಪಿಸುವ ರಸ್ತೆಗಳು ಅದ್ವಾನಗೊಂಡಿವೆ. ಆಳೆತ್ತರದ ಗುಂಡಿಗಳು, ಗಿಡಗಂಟೆಗಳು, ಬೆಳೆದು ನಿಂತು ಸಂಚಾರಕ್ಕೆ ಅನಾನುಕೂಲ ತಂದೊಡ್ಡಿದ್ದರೂ ಅಧಿಕಾರಿಗಳು ಕಂಡೂ ಕಾಣದಂತೆ ದಿನದೂಡುತ್ತಿದ್ದಾರೆಂದು ಪ್ರತಿಭಟನಾಕಾರರು ಆರೋಪಿಸಿದರು.
ವಾರದ ಗಡುವು: ಒಂದು ವಾರದೊಳಗಾಗಿ ರಸ್ತೆ ದುರಸ್ತಿ ಕೈಗೊಂಡು ರೈತರಿಗೆ ಅನುಕೂಲ ಕಲ್ಪಿಸದಿದ್ದಲ್ಲಿ ಸ್ಥಳೀಯ ರೈತರೊಂದಿಗೆ ತಾಲೂಕು ಕಚೇರಿ ಬಳಿ ಪ್ರತಿಭಟನೆ ಹಮ್ಮಿಕೊಳ್ಳುವ ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಸ್ಥಳೀಯ ರೈತರಾದ ಕರಿಯಪ್ಪ, ಶ್ರೀನಿವಾಸ್, ರಾಜಣ್ಣ, ತಗಡಯ್ಯ, ಬೊಮ್ಮಯ್ಯ, ಸುನೀಲ್ಕುಮಾರ್, ರಾಮಣ್ಣ, ಪ್ರದೀಪ್‌ಕುಮಾರ್ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ
By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
MUST WATCH
ಹೊಸ ಸೇರ್ಪಡೆ
IFFI 2024: ಇದು ಕನ್ನಡದಲ್ಲೇ ಸಿನಿಮಾಗಳನ್ನು ಮಾಡುವ ಕಾಲ: ಚಿದಾನಂದ ಎಸ್. ನಾಯಕ್
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.