ಸಫಾಯಿ ಕರ್ಮಚಾರಿಗೆ ಸೌಲಭ್ಯ ಕಲ್ಪಿಸಿ


Team Udayavani, Feb 10, 2021, 4:08 PM IST

ಸಫಾಯಿ ಕರ್ಮಚಾರಿಗೆ ಸೌಲಭ್ಯ ಕಲ್ಪಿಸಿ

ಮಂಡ್ಯ: ಜಿಲ್ಲೆಯಲ್ಲಿ ಬಿಡುಗಡೆಗೊಂಡ ಜೀತದಾಳುಗಳು ಮತ್ತು ಗ್ರಾಮೀಣ ಪ್ರದೇಶದಲ್ಲಿ ಗುರುತಿಸಲ್ಪಟ್ಟಿರುವ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಪುನರ್ವಸತಿ ಸೇರಿದಂತೆ ಮೂಲ ಸೌಲಭ್ಯ ಕಲ್ಪಿಸುವ ಕೆಲಸ ಸಮರೋಪಾದಿಯಲ್ಲಿ ಆಗಬೇಕು ಎಂದು ಜಿಪಂ ಸಿಇಒ ಎಸ್‌.ಎಂ.ಜುಲ್‌ ಫಿಖಾರ್‌ ಉಲ್ಲಾ ಹೇಳಿದರು.

ನಗರದ ಜಿಪಂ ಕಚೇರಿಯಲ್ಲಿ ಮಂಗಳವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಡೆದ ಜಿಲ್ಲೆಯಲ್ಲಿ ಬಿಡುಗಡೆಗೊಂಡ ಜೀತದಾಳುಗಳು ಮತ್ತು ಗ್ರಾಮೀಣ ಭಾಗದಲ್ಲಿ ಕಂಡು ಬಂದ ಅರ್ಹ ಸಫಾಯಿ ಕರ್ಮಚಾರಿಗಳ ಪುನರ್ವಸತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಬದ್ಧತೆಯಿಂದ ಕೆಲಸ ನಿರ್ವಹಿಸಿ: ಬಿಡುಗಡೆಗೊಂಡ ಜೀತದಾಳುಗಳು ಮತ್ತು ಗ್ರಾಮಾಂತರ ಪ್ರದೇಶದ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಪುನರ್ವಸತಿ ಜೊತೆಗೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳುಬದ್ಧತೆಯಿಂದ ತ್ವರಿತವಾಗಿ ಕೆಲಸ ನಿರ್ವಹಿಸಬೇಕು. ಗ್ರಾಮ ಪಂಚಾಯಿತಿಗಳಲ್ಲಿ ಜೀತವಿಮುಕ್ತರ ಮಾಹಿತಿಯನ್ನು ಕಡ್ಡಾಯವಾಗಿ ನಿರ್ವಹಿಸಿ ಅವರವಿಳಾಸ, ಸಂಪರ್ಕ ಸಂಖ್ಯೆಗಳು, ಅವರಿಗೆ ನೀಡಿರುವ ಸೌಲಭ್ಯಗಳ ವಿವರಗಳನ್ನು ದಾಖಲಿಸಬೇಕು.ಜೀತದಿಂದ ಬಿಡುಗಡೆಗೊಂಡ ಕುಟುಂಬಗಳ ಬಗ್ಗೆನಿಗಾ ವಹಿಸಬೇಕು ಎಂದರು.

ಅರ್ಹರಿಗೆ ಅನುದಾನ ತಲುಪಿಸಿ: ಜೀತ ವಿಮುಕ್ತರು ಮತ್ತು ಸಫಾಯಿ ಕರ್ಮಚಾರಿಗಳ ಕುರಿತು ಉಪನ್ಯಾಸನೀಡಿದ ಡೈರಕ್ಟರ್‌ ಮಾರ್ಗ ಇನ್ಸ್‌ಟ್ಯೂಟ್‌ನರಾಜೇಂದ್ರನ್‌ ಪ್ರಭಾಕರ್‌, ಜೀತ ವಿಮುಕ್ತರು ಮತ್ತುಅರ್ಹ ಸಫಾಯಿ ಕರ್ಮಚಾರಿಗಳ ಪುನರ್ವಸತಿಗಾಗಿ ಸರ್ಕಾರ ದೊಡ್ಡ ಪ್ರಮಾಣದಲ್ಲಿ ಅನುದಾನ ಬಿಡುಗಡೆಮಾಡುತ್ತಿದ್ದು, ಅರ್ಹರಿಗೆ ತಲುಪಿಸುವ ಕೆಲಸ ಆಗಬೇಕು ಎಂದು ಹೇಳಿದರು.

ಯಾರೊಬ್ಬರೇ ಆಗಲಿ ಕುಟುಂಬಗಳನ್ನುಜೀತಕ್ಕಿರಿಸಿಕೊಂಡು ದುಡಿಸಿಕೊಳ್ಳಬಾರದು. ಕನಿಷ್ಠವೇತನ, ಮೂಲ ಸೌಕರ್ಯಗಳನ್ನು ನೀಡದಿರುವುದು. ಸಮಾನ ವೇತನ ಪಾವತಿಸದಿರುವುದು ಹಾಗೂ ಮಕ್ಕಳನ್ನು ಶಿಕ್ಷಣದಿಂದ ವಂಚಿಸಿ ದುಡಿಸಿಕೊಳ್ಳುವುದು ಶಿಕ್ಷಾರ್ಹ. ಚರಂಡಿಯಂಥ ಅಪಾಯಕಾರಿ ಸ್ಥಳಗಳನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ದೈಹಿಕವಾಗಿ ತೊಡಗಿಸಿಕೊಳ್ಳಬಾರದು. ಒಂದು ವೇಳೆ ಇಂಥಪ್ರಕರಣಗಳು ಕಂಡುಬಂದಲ್ಲಿ ಅಂಥವರ ವಿರುದ್ಧಕ್ರಿಮಿನಲ್‌ ಪ್ರಕರಣ ದಾಖಲಿಸಿ, ಕಠಿಣ ಶಿಕ್ಷೆಗೆಗುರಿಪಡಿಸಬೇಕು ಎಂದು ಹೇಳಿದರು.

ಸೌಲಭ್ಯದ ಕುರಿತು ಮಾಹಿತಿ: ಸರ್ಕಾರದಿಂದಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳು, ಸಹಾಯಧನ, ಸಾಲ ಸೌಲಭ್ಯ, ಸಂಪರ್ಕಿಸಬೇಕಾದ ಕಚೇರಿ, ಆರೋಗ್ಯಕ್ಕೆ ಸಂಬಂಧಿಸಿದ ಆಯುಷ್ಮಾನ್‌ ಭಾರತ ಯೋಜನೆಯ ಪ್ರಯೋಜನಾ ಪಡೆಯುವ ಬಗ್ಗೆ, ಬ್ಯಾಂಕ್‌ಗಳಿಂದ ಸಿಗುವ ಸಹಾಯಧನ, ಸಾಲಸೌಲಭ್ಯ ಕುರಿತು ಮಾಹಿತಿ ನೀಡಲಾಯಿತು.ಡಾ.ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮದಡಿಬರುವ ವಿವಿಧ ನಿಗಮಗಳ ವತಿಯಿಂದ ದೊರೆಯುವ ವಿವಿಧ ಸವಲತ್ತುಗಳನ್ನು ಕಲ್ಪಿಸುವ ಸಂಬಂಧ ಜೀತ ವಿಮುಕ್ತರು ಮತ್ತು ಅರ್ಹ ಸಫಾಯಿಕರ್ಮಚಾರಿಗಳಿಂದ ಸ್ಥಳದಲ್ಲಿಯೇ ಅರ್ಜಿ ಸ್ವೀಕರಿಸಲಾಯಿತು. ಜಿಪಂ ಉಪಕಾರ್ಯದರ್ಶಿ (ಅಭಿವೃದ್ಧಿ) ಧನರಾಜ್‌, ಸಹಾಯಕ ಕಾರ್ಯದರ್ಶಿ (ಅಭಿವೃದ್ಧಿ) ಸವಿತಾ, ಯೋಜನಾ ನಿರ್ದೇಶಕರು (ಡಿಆರ್‌ಡಿಎ) ಷಣ್ಮುಗಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಮೂರ್ತಿ, ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸೋಮಶೇಖರ್‌ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-mandya

Mandya; ಸಕ್ಕರೆ ನಾಡಿನಲ್ಲಿ ಇಂದಿನಿಂದ  87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

14

Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ

Suicide 3

Maddur; ಕೆಲಸದ ಒತ್ತಡ: ಎಂಜಿನಿಯರ್‌ ಆತ್ಮಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

19-

IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು

18-

Formula E race; ಫಾರ್ಮುಲಾ-ಇ ರೇಸ್‌ ಪ್ರಕರಣ: ಕೆಟಿಆರ್‌ ಮೇಲೆ ಎಸಿಬಿ ಎಫ್ಐಆರ್‌

17-gdp

GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್‌

16-onion

Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.